Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರಕಾರಿ ಮಹಾವಿದ್ಯಾಲಯಕ್ಕೆ ನ್ಯಾಕ್ ಪ್ರಶಂಸೆ

ಸುದ್ದಿಮೂಲ ವಾರ್ತೆ ಸಿಂಧನೂರು, ಫೆ. 12:
ನಗರದ ಸರಕಾರಿ ಮಹಾವಿದ್ಯಾ ಲಯದಲ್ಲಿರುವ ಸೌಲಭ್ಯಗಳು, ಶೈಕ್ಷಣಿಕ ಪ್ರಗತಿ ಕುರಿತಂತೆ ವಿಶ್ವವಿದ್ಯಾಲಯಗಳ ಅನುದಾನ ಆಯೋಗದ ರಾಷ್ಟ್ರೀಯ ಪರೀಕ್ಷೆ ಹಾಗೂ ಮಾನ್ಯತಾ ತಂಡ(ನ್ಯಾಕ್) ಪ್ರಶಂಸೆ ವ್ಯಕ್ತಪಡಿಸಿದೆ.
ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನ್ಯಾಕ್ ಕಮಿಟಿ ಬೀಳ್ಕೋಡುಗೆ ಸಮಾರಂಭದಲ್ಲಿ ಮಾತನಾಡಿದ ನ್ಯಾಕ್ ಕಮಿಟಿ ಅಧ್ಯಕ್ಷ ಡಾ.ಶಿರೀಶ್ ಕುಲರ್ಣಿ, ನ್ಯಾಕ್ ಕಮಿಟಿಯ ಸದಸ್ಯನಾಗಿ, ಅಧ್ಯಕ್ಷನಾಗಿ ದೇಶದಲ್ಲಿ ನೂರಾರು ಕಾಲೇಜುಗಳಿಗೆ ಭೇಟಿ ನೀಡಿದ್ದೇನೆ. ಆದರೆ ಎಲ್ಲಿಯೂ ಇಂತಹ ಸಾಂಸ್ಕೃತಿಕ ಪರಿಸರ, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ನಡುವಿನ ಮಧುರ ಬಾಂಧವ್ಯ, ಕಾಲೇಜಿನ ವಿಶಾಲವಾದ ಪ್ರಾಂಗಣ, ಗಣನೀಯ ಪ್ರಮಾಣದ ವಿದ್ಯಾರ್ಥಿಗಳ ಸಂಖ್ಯೆ ಮತ್ತು ನಿರೀಕ್ಷೆಗೂ ಮೀರಿದ ಫಲಿತಾಂಶ. ಹೀಗೆ ಎಲ್ಲ ವಿಧದ ಪ್ರಗತಿಯ ಮುನ್ನೋಟಗಳು ನನ್ನನ್ನು ಬೆರಗುಗೊಳಿಸಿವೆ ಎಂದು ಅವರು ವಿವರಿಸಿದರು.
ಕಾಲೇಜಿಗೆ ವಿವಿಧ ಸೌಕರ್ಯಗಳನ್ನು ಒದಗಿಸಿ ಶಿಕ್ಷಣದ ಪ್ರಗತಿಗೆ ಸಹಕಾರಿಯಾಗಿರುವ ಶಾಸಕ ವೆಂಕಟರಾವ್ ನಾಡಗೌಡ ಮತ್ತು ದಕ್ಷ ಆಡಳಿತ ಮಾಡುತ್ತಿರುವ ಪ್ರಾಚಾರ್ಯ ಡಾ.ಸಿ.ಬಿ.ಚಿಲ್ಕರಾಗಿ ಅವರ ಸೇವೆಯೂ ಅವಿಸ್ಮರಣೀಯವಾಗಿದೆ ಎಂದು ಶ್ಲಾಘಿಸಿದ ಅವರು ಪ್ರಸ್ತುತ ಕಾಲೇಜಿನ ಚಲನೆ ಇದೇ ರೀತಿ ಮುಂದುವರೆದರೆ, ಮುಂದೊಂದು ದಿನ ಈ ಕಾಲೇಜು ಬಹುದೊಡ್ಡ ವಿದ್ಯಾಸಂಸ್ಥೆಯಾಗಿ ಮಾರ್ಪಾಡಾಗುವದರಲ್ಲಿ ಸಂಶಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಬೀಳ್ಕೊಡುಗೆ:
ನ್ಯಾಕ್ ಕಮಿಟಿಯ ಸದಸ್ಯರು ಕಾಲೇಜಿನ ಸಮಗ್ರ ಪ್ರಗತಿಯ ಮಾದರಿ ವೀಕ್ಷಿಸಿ ಶುಕ್ರವಾರ ಸಂಜೆ ನಿರ್ಗಮಿಸುತ್ತಿರುವಾಗ ಕಾಲೇಜಿನ ವಿದ್ಯಾಥಿಗಳು ಅವರನ್ನು ಆಲಾಯಿ ಕುಣಿತದೊಂದಿಗೆ ಕಾಲೇಜಿನಿಂದ ಮುಖ್ಯ ರಸ್ತೆಯವರೆಗೆ ಬೀಳ್ಕೊಟ್ಟರು.
ನ್ಯಾಕ್ ಕಮಿಟಿಯ ಸದಸ್ಯರಾದ ಪಂಜಾಬಿನ ಅಮರದೀಪ್ ಗುಪ್ತ, ತಮಿಳು ನಾಡಿನ ಫ್ರೊ.ಮುರಗನ್, ಕಾಲೇಜಿನ ಅಭಿ ವೃದ್ಧಿ ಮಂಡಳಿ ಸದಸ್ಯರು, ಉಪನ್ಯಾಸಕರು, ಎನ್‌ಸಿಸಿ ವಿದ್ಯಾರ್ಥಿಗಳು, ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ಪದವಿಧರರು ಸೇರಿದಂತೆ ಕಾಲೇ ಜು ಸಿಬ್ಬಂದಿ ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ