Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಸಾಹಿತ್ಯ ಪರಿಷತ್ತಿನ ಶತಮಾನೋತ್ಸವ ದತ್ತಿ ಪ್ರಶಸ್ತಿಗೆ ನಾಡೋಜ ಡಾ. ಮನು ಬಳಿಗಾರ ಆಯ್ಕೆ









ಸುದ್ದಿಮೂಲ ವಾರ್ತೆ


ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು  ಪ್ರದಾನ ಮಾಡುವ ʻಶತಮಾನೋತ್ಸವ ದತ್ತಿ ಪ್ರಶಸ್ತಿʼಯ  2022 ನೇ ಸಾಲಿನ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ ಅವರಿಗೆ ಪ್ರದಾನ ಮಾಡಲಾಗುವುದು. ಈ ಪ್ರಶಸ್ತಿಯು 50,೦೦೦ ರೂ. (ಐವತ್ತು ಸಾವಿರ) ಮೊತ್ತವನ್ನು ಹೊಂದಿದೆ. ಮೇ  5 ರಂದು ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಸಾಹಿತ್ಯ ಪರಿಷತ್ತಿನ ಸಿಬ್ಬಂದಿಗಳಿಗಾಗಿ ಮಿಸಲಿಟ್ಟಿರುವ ʻಶ್ರೀಮತಿ ಎನ್‌.ರಮಾದೇವಿ ವಿಶ್ವೇಶ್ವರಯ್ಯ ದತ್ತಿʼ ಹಾಗೂ ʻಶ್ರೀಮತಿ ವಿ. ಗೌರಮ್ಮ ಗಂಗಾಧರಯ್ಯ ಸಿಬ್ಬಂದಿ ಸೇವಾ ದತ್ತಿʼ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. 2022 ನೇ ಸಾಲಿನ ʻಶ್ರೀಮತಿ ಎನ್‌. ರಮಾದೇವಿ ವಿಶ್ವೇಶ್ವರಯ್ಯ ದತ್ತಿʼ ಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಸಿಬ್ಬಂದಿ ಶ್ರೀಮತಿ ಹೆಚ್‌. ಮಂಜುಳಾ ಅವರು,  2022  ನೆಯ ಸಾಲಿನ ʻಶ್ರೀಮತಿ ವಿ. ಗೌರಮ್ಮ ಗಂಗಾಧರಯ್ಯ ಸಿಬ್ಬಂದಿ ಸೇವಾ ದತ್ತಿʼ ಪ್ರಶಸ್ತಿಗಾಗಿ ಪರಿಷತ್ತಿನ ಹಿರಿಯ ಸಿಬ್ಬಂದಿ ಶ್ರೀ. ಎನ್‌. ಕೃಷ್ಣಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ದತ್ತಿನ ದಾನಿಗಳು ಈ ಬಾರಿ ಹೆಚ್ಚುವರಿಯಾಗಿ  ಮೂರು ಜನ ಕನ್ನಡ ಸಾಹಿತ್ಯ ಪರಿಷತ್ತಿನ ನಿವೃತ್ತ ಸಿಬ್ಬಂದಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಅದಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ನಿವೃತ್ತ ಸಿಬ್ಬಂದಿಗಳಾದ ಶ್ರೀ ಎ. ಅಮರನಾಥ್‌, ಶ್ರೀ ನಾ. ಚಕ್ರಪಾಣಿ ಹಾಗೂ ಕೆ. ರಾಮೇಗೌಡ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಸಾಹಿತ್ಯ ಪರಿಷತ್ತು ಕಳೆದ ವರ್ಷದಿಂದ ಮೇ 5 ರಂದು ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಅದೇ ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ʻಶತಮಾನೋತ್ಸವ ದತ್ತಿ ಪ್ರಶಸ್ತಿʼ ಸೇರಿದಂತೆ ʻಶ್ರೀಮತಿ ಎನ್‌. ರಮಾದೇವಿ ವಿಶ್ವೇಶ್ವರಯ್ಯ ದತ್ತಿʼ ಹಾಗೂ  ʻಶ್ರೀಮತಿ ವಿ. ಗೌರಮ್ಮ ಗಂಗಾಧರಯ್ಯ ಸಿಬ್ಬಂದಿ ಸೇವಾ ದತ್ತಿʼ ಪುರಸ್ಕೃತರಿಗೆ ಅಂದೇ ಪ್ರದಾನ ಮಾಡಲಾಗುವುದು. ಪರಿಷತ್ತಿನಲ್ಲಿ ಕಾಯಕ ಮಾಡುವ ಮೂಲಕ ಕನ್ನಡದ ಕೆಲಸವನ್ನು ನಿಷ್ಠೆ ಮತ್ತು ಶ್ರದ್ಧೆಯಿಂದ ಮಾಡುತ್ತಿರುವ ಪರಿಷತ್ತಿನ ಸಿಬ್ಬಂದಿಗಳ ಮನೋಸ್ಥೈರ್ಯ ಹೆಚ್ಚಿಸುತ್ತದೆ. ತಮ್ಮ ಕೆಲಸವನ್ನು ಗುರುತಿಸಿ ಪರಿಷತ್ತು ಗೌರವಿಸುತ್ತದೆ ಎನ್ನುವ ಹೆಮ್ಮೆಯ ಭಾವ ಎಲ್ಲರಲ್ಲೂ ಮೂಡಿಸುವ ಹಿನ್ನೆಲೆಯಲ್ಲಿ ಈ ಪ್ರಶಸ್ತಿಗಳು ಹೆಚ್ಚು ಮಹತ್ವವನ್ನು ಪಡೆದುಕೊಳ್ಳುತ್ತವೆ ಎಂದು ನಾಡೋಜ ಡಾ. ಮಹೇಶ ಜೋಶಿ ಅವರು ಅಭಿಪ್ರಾಯಪಟ್ಟಿದ್ದಾರೆ.


 ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ನೇ.ಭ. ರಾಮಲಿಂಗ ಶೆಟ್ಟಿ,  ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್‌ ಪಾಂಡು ಅವರು ಉಪಸ್ಥಿತರಿದ್ದರು.








Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ