Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮೂರು ತಿಂಗಳಿಗೊಮ್ಮೆ ವಿದ್ಯಾರ್ಥಿನಿಯರ ಆರೋಗ್ಯ ತಪಾಸಣೆ ಕಡ್ಡಾಯ - ನಾಗಲಕ್ಷ್ಮೀ ಚೌಧರಿ

 ಸುದ್ದಿಮೂಲ ವಾರ್ತೆ ಬೆಂಗಳೂರು, ೆ.08:
ರಾಜ್ಯದ ಎಲ್ಲ ವಸತಿ ನಿಲಯಗಳಲ್ಲಿ ವಿದ್ಯಾಾರ್ಥಿನಿಯರ ಆರೋಗ್ಯ ತಪಾಸಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು.
ರಾಜ್ಯದ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮೂರು ತಿಂಗಳಿಗೊಮ್ಮೆೆ ವಿದ್ಯಾಾರ್ಥಿನಿಯರ ಆರೋಗ್ಯ ತಪಾಸಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿದ್ಯಾಾರ್ಥಿ ನಿಲಯಗಳಲ್ಲಿ ಗುಣಮಟ್ಟದ ಆಹಾರ ನೀಡಬೇಕು. ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ಸರ್ಕಾರಿ ಯೋಜನೆ, ಸೌಲಭ್ಯಗಳ ಬಗ್ಗೆೆ ಈ ಭಾಗದ ಜನರಿಗೆ ಇನ್ನೂ ಹೆಚ್ಚಿಿನ ಜಾಗೃತಿಯ ಅವಶ್ಯಕತೆ ಇದೆ. ಸರ್ಕಾರಿ ಸೌಲಭ್ಯವನ್ನು ಒದಗಿಸುವುದು ಅಧಿಕಾರಿಗಳ ಜವಾಬ್ದಾಾರಿಯಾಗಿದ್ದರೂ, ಸೌಲಭ್ಯಗಳನ್ನು ಹೇಗೆ ಪಡೆಯಬೇಕು ಎಂಬ ಬಗ್ಗೆೆ ಸಾರ್ವಜನಿಕರಿಗೂ ಅರಿವಿರಬೇಕು. ಪ್ರತಿ ಹಳ್ಳಿಿಯಲ್ಲಿಯೂ ಮಹಿಳಾ ಗ್ರಾಾಮಸಭೆಯನ್ನು ಕಡ್ಡಾಾಯವಾಗಿ ನಡೆಸಿ, ಮಹಿಳೆಯರ ಸಮಸ್ಯೆೆಗಳನ್ನು ಪರಿಹರಿಸಬೇಕು ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.
ಮಹಿಳೆಯರಿಗೆ ಸಂಬಂಧಿಸಿದ ಯಾವುದೇ ಸಮಸ್ಯೆೆಗಳನ್ನು ಪರಿಹರಿಸಲು ರಾಜ್ಯ ಮಹಿಳಾ ಆಯೋಗವು ಸದಾ ಸಿದ್ದವಾಗಿದೆ. ಮಹಿಳೆಯರ ರಕ್ಷಣೆಗೆ ಹಾಗೂ ಮಹಿಳೆಯರಿಗೆ ಕಾನೂನಾತ್ಮಕ ನೆರವು ನೀಡಲು ಬದ್ಧವಾಗಿರುತ್ತದೆ ಎಂದಯ ಹೇಳಿದ್ದಾರೆ.
ಆಂತರಿಕ ದೂರು ನಿವಾರಣಾ ಸಮಿತಿ ರಚನೆ:
ಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿ ಸಂಸ್ಥೆೆಗಳಲ್ಲಿ 10ಕ್ಕಿಿಂತ ಹೆಚ್ಚು ಉದ್ಯೋೋಗಿಗಳು ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ಕಡ್ಡಾಾಯವಾಗಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ರಚಿಸಲು ಸೂಚಿಸಲಾಗಿದೆ. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷತೆಯ ವಾತಾವರಣ ನಿರ್ಮಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಗೆ ಕಡಿವಾಣ ಹಾಕುವಂತೆ ಅಬಕಾರಿ ಇಲಾಖೆಗೆ ಸೂಚಿಸಲಾಗಿದೆ ಎಂದರು.
ಕೊಪ್ಪಳ ನಗರದ ಸಿದ್ದೇಶ್ವರ ನಗರದಲ್ಲಿನ ಅಲೆಮಾರಿ ಜನಾಂಗ ಭೇಟಿ ಮಾಡಿದ್ದು, ಅವರಿಗೆ ನಗರಸಭೆಯಿಂದ ಅಗತ್ಯ ಸೌಕರ್ಯ ಒದಗಿಸಲಾಗಿದೆ. ಆ ಪ್ರದೇಶದಲ್ಲಿನ ವಿದ್ಯುತ್ ಕಂಬ ದುರಸ್ಥಿಿಗೊಳಿಸಲಾಗಿದೆ. ಆದರೆ ಅಲ್ಲಿನ ಅಂಗನವಾಡಿ ಪಕ್ಕದಲ್ಲಿಯೇ ರೈಲು ಹಳಿ ಇರುವುದರಿಂದ ಪೋಷಕರು ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಹಿಂದೇಟು ಹಾಕುತ್ತಿಿದ್ದು, ಸುಮಾರು 3 ಕಿ.ಮೀ ವ್ಯಾಾಪ್ತಿಿಯಲ್ಲಿ ಸುರಕ್ಷಾ ೆನ್ಸಿಿಂಗ್ ಅಳವಡಿಸಲು ಸೂಚನೆ ನೀಡಿದ್ದೇನೆ ಎಂದು ಅವರು ಮಾಹಿತಿ ನೀಡಿದರು.
ಕೊಪ್ಪಳದ ತಾಯಿ ಮತ್ತು ಮಗುವಿನ ಆಸ್ಪತ್ರೆೆಯಲ್ಲಿ ಎಲ್ಲ ರೀತಿಯ ಸೌಕರ್ಯಗಳನ್ನು, ಗುಣಮಟ್ಟದ ಆಹಾರವನ್ನು ನೀಡುತ್ತಿಿರುವುದು ಪ್ರಶಂಸನೀಯ. ಕಾರಟಗಿ ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಿದಾರ್ಥಿನಿಯರ ವಸತಿ ನಿಲಯಕ್ಕೆೆ ಭೇಟಿ ನೀಡಿದ್ದು, ಅಲ್ಲಿ ಉತ್ತಮ ಸೌಕರ್ಯಗಳನ್ನು ವಿದ್ಯಾಾರ್ಥಿನಿಯರಿಗೆ ಒದಗಿಸಲಾಗಿದೆ. ಜಿಲ್ಲೆಯ ಎಲ್ಲ ವಸತಿ ನಿಲಯಗಳಲ್ಲಿಯೂ ಇಂತಹ ವ್ಯವಸ್ಥೆೆಗಳನ್ನು ಒದಗಿಸಬೇಕು. ನರೇಗಾ ಕಾರ್ಯಕ್ರಮದಡಿ ಶೇ.50 ರಷ್ಟು ಜಾಬ್ಕಾಾರ್ಡ್‌ಗಳನ್ನು ಮಹಿಳೆಯರಿಗೆ ನೀಡಬೇಕು. ಹೆಚ್ಚಿಿನ ಉದ್ಯೋೋಗದಿನಗಳನ್ನು ಒದಗಿಸಬೇಕು ಎಂದು ಇಲಾಖಾ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮಾಹಿತಿ ನೀಡಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ