Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಂದಮೂರಿ ತಾರಕರತ್ನ ಇನ್ನಿಲ್ಲ

 

ಸುದ್ದಿಮೂಲ ವಾರ್ತೆ ಬೆಂಗಳೂರು, ಫೆ. 18:

ತೆಲುಗು ನಟ, ನಗರದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಂದಮೂರಿ ತಾರಕರತ್ನ ಶನಿವಾರ ರಾತ್ರಿ ನಿಧನರಾಗಿದ್ದಾರೆ.

ತಾರಕರತ್ನ ಅವರಿಗೆ 39 ವರ್ಷ ವಯಸ್ಸಾಗಿತ್ತು. ತಾರಕರತ್ನ ಹಿನ್ನೆಲೆಯಲ್ಲಿ ಚಿತ್ರರಂಗದಲ್ಲಿ ಶೋಕ ಮಡುಗಟ್ಟಿದೆ. ಹಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚೇತರಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ಇತ್ತು. ಆದರೆ, ಅವರ ನಿಧನ ತೆಲುಗು ಮತ್ತು ಕನ್ನಡ ಚಿತ್ರರಂಗದಲ್ಲಿ ದಿಗ್ಭ್ರಮೆ ಮೂಡಿಸಿದೆ. ಆಸ್ಪತ್ರೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇತ್ತೀಚೆಗೆ ಕುಪ್ಪನಲ್ಲಿ ನಡೆದ 'ಯುವಗಳಂ' ಪಾದಯಾತ್ರೆಯಲ್ಲಿ ಹೃದಯಸ್ಥಂಭನವಾಗಿ ಕುಸಿದು ಬಿದ್ದಿದ್ದ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕಳೆದ 23 ದಿನಗಳಿಂದ ಕೋಮಾದಲ್ಲಿದ್ದ ತಾರಕರತ್ನ ಅವರನ್ನು ಉಳಿಸಿಕೊಳ್ಳಲು ವೈದ್ಯರು ಎಷ್ಟೇ ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ.

ತಾರಕರತ್ನ ಅವರ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಅವರ ತಂದೆ ನಂದಮೂರಿ ಮೋಹನಕೃಷ್ಣ, ಅವರ ಸಹೋದರ ಬಾಲಕೃಷ್ಣ, ರಾಮಕೃಷ್ಣ, ಜೂನಿಯರ್ ಎನ್‌ಟಿಆರ್ ಸಹಿತ ಕುಟುಂಬದ ಹಲವರು ಬೆಂಗಳೂರಿನಲ್ಲಿಯೇ ಉಳಿದಿಕೊಂಡಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ