Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಂದಿನಿ ಹಾಲಿನ ಏರಿಕೆ ಖಂಡಿಸಿ ಪ್ರತಿಭಟನೆ

ಸುದ್ದಿಮೂಲ ವಾರ್ತೆ

ಮೈಸೂರು, ಜು. 23 : ರಾಜ್ಯ ಸರ್ಕಾರ ಕೆಎಂಎಫ್‌ ನಂದಿನಿ ಹಾಲಿನ ದರ ಏರಿಸಿರುವುದನ್ನು ಖಂಡಿಸಿ ನಗರದಲ್ಲಿ ಭಾನುವಾರ ನಾನಾ ಸಂಘಟನೆಗಳ ಕಾರ್ಯಕರ್ತರು ನ್ಯಾಯಾಲಯದ ಮುಂಭಾಗ ಇರುವ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಿದರು.

ಬಿಜೆಪಿ ಕೆಟ್ಟ ಆಡಳಿತದ ಹಿನ್ನೆಲೆಯಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಕೂಡ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಬೆಲೆಗಳನ್ನು ಇಳಿಸಲಾಗುವುದು ಎಂದು ಹೇಳಿದ ಕಾಂಗ್ರೆಸ್‌ ಜನರಿಗೆ 5 ಗ್ಯಾರಂಟಿ ಭಾಗ್ಯಗಳನ್ನು ನೀಡುವ ಆಮಿಷವೊಡ್ಡಿ ನಂತರ ವಿದ್ಯುತ್‌ ಸೇರಿದಂತೆ ಎಲ್ಲಾ ಆಹಾರ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ ಎಂದು ಖಂಡಿಸಿದರು.

ಗ್ಯಾರಂಡಿ ಯೋಜನೆಗಳಿಗೆ ಹಣ ಸಾಲುತ್ತಿಲ್ಲ ಎಂದು ಸಿಕ್ಕ ಸಿಕ್ಕ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವ ಮೂಲಕ ಜನರ ಬದುಕನ್ನು ಮೂರಾಬಟ್ಟೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕನ್ನಡ ಪರ ಸಂಘಟನೆಯ ತೇಜಸ್‌ ಲೋಕೇಶ್‌ಗೌಡ, ಪ್ರಭುಶಂಕರ್‌, ಡಾ.ಶಾಂತರಾಜೇಅರಸ್‌, ಕ್ಥಷ್ಣಪ್ಪ, ಹನುಮಂತಯ್ಯ, ನಿತ್ಯಾನಂದ, ಬಸವರಾಜು, ರಾಧಾಕೃಷ್ಣ, ನಂದಕುಮಾರ್‌, ಗಣೇಶ್‌ ಪ್ರಸಾದ್‌ ಮತ್ತಿತರರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ