Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನರೇಗಾದಡಿ ವೈಯಕ್ತಿಕ ಕಾಮಗಾರಿಗೆ ಮೊದಲ ಆಧ್ಯತೆ; ಟಿ.ಕೃಷ್ಣಮೂರ್ತಿ 

ಸುದ್ದಿಮೂಲವಾರ್ತೆ

ಕೊಪ್ಪಳ ನ 08:-ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳು ಹೆಚ್ಚಿನ ಲಾಭದಾಯಕವಾಗಿದೆಂದು ಕೊಪ್ಪಳ ಜಿ.ಪಂ ಯೋಜನಾ ನಿರ್ದೇಶಕ ಟಿ.ಕೃಷ್ಷಮೂರ್ತಿ ಹೇಳಿದರು.

ಇಂದು ಬಹದ್ದೂರಬಂಡಿ ಗ್ರಾ.ಪಂಯ ಚುಕನಕಲ್ ಗ್ರಾಮ ಹಾಗು ಇರಕಲ್ಲಗಡಾ ಗ್ರಾಮದ 2ನೇ ವಾರ್ಡನಲ್ಲಿ‌ 2024-25ನೇ ಸಾಲಿನ ನರೇಗಾ ಯೋಜನೆಯ ಕ್ರಿಯಾ ತಯಾರಿಕೆಯ ಕುರಿತು ಜರುಗಿದ ವಾರ್ಡಸಭೆಯಲ್ಲಿ ಭಾಗಿವಹಿಸಿ ಮಾತನಾಡಿದರು.

ಗ್ರಾ.ಪಂ ಹಾಗು ಅನುಷ್ಠಾನ ಇಲಾಖೆಗಳಾದ ತೋಟಗಾರಿಕೆ, ಕೃಷಿ, ಅರಣ್ಯ,ರೇಷ್ಮೆ ಇಲಾಖೆಗಳಿಂದ ನರೇಗಾದಡಿ ಕಾಮಗಾರಿಗಳನ್ನು ಅನುಷ್ಠಾನಿಸಬಹುದಾಗಿದ್ದು ಮೊದಲ ಆದ್ಯತೆ ಮೇರೆಗೆ ರೈತರು‌ ವೈಯಕ್ತಿಕ ಕಾಮಗಾರಿ ಅನುಷ್ಠಾನಿಸಿರಿ.ಇದರಿಂದ ಆರ್ಥಿಕ ಸದೃಢರಾಗಲು ಸಾಧ್ಯವೆಂದರು. ವೈಯಕ್ತಿಕ ಕಾಮಗಾರಿಗಳಿಗೆ ಬೇರೆ ಬೇರೆ ಮೊತ್ತ ನಿಗದಿಪಡಿಸಲಾಗಿರುತ್ತದೆ. ವೈಯಕ್ತಿಕ ಕಾಮಗಾರಿಗೆ ಕೂಲಿ&ಸಾಮಗ್ರಿ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ. ವೈಯಕ್ತಿಕ ಕಾಮಗಾರಿ ಮಾಡಿಕೊಳ್ಳುವದರಿಂದ ಉಪಚಟುವಟಿಕೆಗಳಿಗೆ ಸಹಕಾರಿಯಾಗಲಿದೆ ಎಂದರು.

ಪಂಚಾಯತ್‌ ರಾಜ್‌ ಸಹಾಯಕ ನಿರ್ದೇಶಕ ಮಹೇಶ್‌ ಎಚ್‌ ಮಾತನಾಡಿ ಸಂಜಿವಿನಿ ಸಂಘದವರು ಸಾಮುದಾಯಿಕ ಆಧಾರಿತ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡಿರಿ. ಇದರಿಂದ ಆರ್ಥಿಕ ಚಟುವಟಿಕೆಗಳನ್ನು ಕೈಗೊಂಡು ಆರ್ಥಿಕ ಸಬಲರಾಗಲು ಸಾಧ್ಯವಾಗುತ್ತದೆಂದರು.

ವಾರ್ಡಸಭೆಯಲ್ಲಿ ತೋಟಗಾರಿಕೆ, ರೇಷ್ಮೆ ಇಲಾಖೆಗಳಿಂದ ಒಗ್ಗೂಡಿಸುವಿಕೆ ಕಾಮಗಾರಿಗಳ ಕುರಿತು ಕ್ಷೇತ್ರಮಟ್ಟದ ಅಧಿಕಾರಿಗಳು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ತಾಲೂಕ ಯೋಜನಾಧಿಕಾರಿ ರಾಜೇಸಾಬ ನದಾಫ್, ಬಹದ್ದೂರಬಂಡಿ ಗ್ರಾಮ ಪಂಚಾಯತ ಅಧ್ಯಕ್ಷ ಯಲ್ಲಪ್ಪ ತಳವಾರ, ಗ್ರಾಮ ಪಂಚಾಯತ ಸದಸ್ಯರಾದ ಮರಿಯಪ್ಪ ಪಿನ್ನಿ, ರಾಮಣ್ಣ ಗೋಸಲದೊಡ್ಡಿ, ವಿದ್ಯಾಶ್ರೀ, ಪಂಚಾಯತ ಅಭಿವೃದ್ದಿ ಅಧಿಕಾರಿ ಸಿದ್ದಮ್ಮ ಮಠದ, ಕಾರ್ಯದರ್ಶಿ ರುದ್ರಯ್ಯ ಹಿರೇಮಠ, ತಾಂತ್ರಿಕ ಸಂಯೋಜಕ ಯಮನೂರಪ್ಪ, ಐಇಸಿ ಸಂಯೋಜಕ ದೇವರಾಜ ಪತ್ತಾರ, ದ್ವೀತಿಯ ದರ್ಜೆ ಲೆಕ್ಕ ಸಹಾಯಕ ಚಂದ್ರಪ್ಪ, ತಾಂತ್ರಿಕ ಸಹಾಯಕರಾದ ಶಿವಪ್ರಸಾದ, ಮಲ್ಲಿಕಾರ್ಜುನ ರಡ್ಡಿ, ಕೊಪ್ಪಳ ಹೊಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ಮಲ್ಲಿಕಾರ್ಜುನ ಬಂಡಿ, ತೋಟಗಾರಿಕೆ ಸಹಾಯಕ ತಾಜುದ್ದೀನ್‌, ಕರವಸೂಲಿಗಾರ ಕೊಟ್ರೇಶ್‌ ಹಾಗು ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಗ್ರಾಮ ಕಾಯಕ ಮಿತ್ರರು ಸಂಜಿವಿನಿ ಯೋಜನೆಯ ಮಹಿಳೆಯರು, ರೈತರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ