Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಎಪಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ: ಬೆಂಗಳೂರಿನಲ್ಲಿ ಸಂಭ್ರಮ

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.12: ಚುನಾವಣಾ ಆಯೋಗವು ಆಮ್‌ ಆದ್ಮಿ ಪಾರ್ಟಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ಘೋಷಿಸಿರುವುದಕ್ಕೆ ರಾಜ್ಯ ನಾಯಕರು ಹರ್ಷ ವ್ಯಕ್ತಪಡಿಸಿದರು.

ಎಎಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ, ಜನರ ಬೆಂಬಲ ಹಾಗೂ ದೇವರ ದಯೆಯಿಂದಾಗಿ ಆಮ್‌ ಆದ್ಮಿ ಪಾರ್ಟಿಯು ಈ ಪ್ರಮಾಣದ ಯಶಸ್ಸಿಗಳಿಸಿ ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆದಿದೆ. ಹತ್ತು ವರ್ಷಗಳ ಹಿಂದೆ ಹಣಬಲ, ತೋಳ್ಬಲ, ರಾಜಕೀಯ ಹಿನ್ನೆಲೆಯಿಲ್ಲದ ವ್ಯಕ್ತಿ ಚುನಾವಣೆಯಲ್ಲಿ ಗೆಲ್ಲುವುದು ಅಸಾಧ್ಯವೆಂದು ಭಾವನೆಯಿತ್ತು. ಅದು ಸುಳ್ಳೆಂದು ಎಎಪಿ ಸಾಬೀತುಪಡಿಸಿದೆ ಎಂದು ಹೇಳಿದರು.

ಖಾಸಗಿ ಶಾಲೆಗಳಿಗಿಂತಲೂ ಚೆನ್ನಾಗಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಸಾಧ್ಯವಿದೆ ಎಂಬುದನ್ನೂ ನಾವು ತೋರಿಸಿಕೊಟ್ಟಿದ್ದೇವೆ. ದುಡ್ಡು ಹಂಚದೇ, ದ್ವೇಷ ಹರಡದೇ ಕೂಡ ಗೆಲುವು ಸಾಧಿಸಬಹುದು ಎಂಬುದು ಆಮ್‌ ಆದ್ಮಿ ಪಾರ್ಟಿಯು ಸಾಬೀತುಪಡಿಸಿದೆ. ಎಲ್ಲಕ್ಕಿಂತ ಮುಖ್ಯವಾಗಿ ಬೇರೆ ಪಕ್ಷಗಳು ಕೂಡ ಇಂದು ಸರ್ಕಾರಿ ಶಾಲೆಗಳ ಬಗ್ಗೆ ಮಾತನಾಡುವಂತಾಗಿದೆ. ಇದು ಎಎಪಿಗೆ ದೊರೆತ ದೊಡ್ಡ ಗೆಲುವು ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಮಾತನಾಡಿ, ರಾಷ್ಟ್ರೀಯ ಪಕ್ಷದ ಮಾನ್ಯತೆಗೆ ಅರ್ಹವಾಗಲು ಅನೇಕ ಪಕ್ಷಗಳ ಅನೇಕ ದಶಕಗಳನ್ನು ತೆಗೆದುಕೊಂಡಿವೆ. ಆದರೆ ಅರವಿಂದ್‌ ಕೇಜ್ರಿವಾಲ್‌ರವರು ಜನಪರ ಹಾಗೂ ಪ್ರಾಮಾಣಿಕ ಆಡಳಿತದಿಂದಾಗಿ ಆಮ್‌ ಆದ್ಮಿ ಪಾರ್ಟಿಯು ಕೇವಲ ಹತ್ತು ವರ್ಷಗಳಲ್ಲಿ ಈ ಗುರಿ ಸಾಧಿಸಿದೆ. ಈ ಬೆಳವಣಿಗೆಯಿಂದಾಗಿ ನ್ಯಾಯಾಂಗದ ಮೇಲೆ ನಮಗಿದ್ದ ವಿಶ್ವಾಸ, ನಂಬಿಕೆ ಹೆಚ್ಚಾಗಿದೆ. ಸತ್ಯಕ್ಕೆ ಸಾವಿಲ್ಲ ಎಂಬುದು ಸಾಬೀತಾಗಿದೆ ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ, ಮಾಧ್ಯಮ ವಕ್ತಾರೆ ಉಷಾ ಮೋಹನ್‌ ಮತ್ತಿತರರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ