Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರೀಯ ಅಂಚೆ ಸಪ್ತಾಹ, ಮೇಘದೂತ್ ಪ್ರಶಸ್ತಿ ಪ್ರದಾನ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ. 09 : ರಾಷ್ಟ್ರೀಯ ಅಂಚೆ ಸಪ್ತಾಹ ಅ.9 ರಿಂದ ಅ.13ರ ವರೆಗೆ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರು ಜಿ.ಪಿ.ಓ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಂಚೆ ಸಪ್ತಾಹ ಅಂಗವಾಗಿ ಅಂಚೆ ಇಲಾಖೆ ಪೊಸ್ಟ್ ಕಾರ್ಡುಗಳ ಪ್ರದರ್ಶನ, ರಸಪ್ರಶ್ನೆ, ಶಾಲೆಗಳಲ್ಲಿ ಪತ್ರ ಬರೆಯುವ ಸ್ಪರ್ಧೆ, ಅಂಚೆ ಸಂಗ್ರಹಕರಿಗೆ ವಿಚಾರ ಸಂಕಿರಣ, ಡಿಜಿಟಲ್ ಪಾವತಿಯಲ್ಲಿ ಅನುಸರಿಸಬೇಕಾದ ಸುರಕ್ಷಾ ಕ್ರಮಗಳ ಅನ್‍ಲೈನ್ ವಂಚನೆಗಳ ಕುರಿತು ಗ್ರಾಮೀಣ ಪ್ರದೇಶಗಳಲ್ಲಿ ಅರ್ಥಿಕ ಸಾಕ್ಷರತಾ ಅಭಿಯಾನ ಆಯೋಜಿಸಲಾಗಿದೆ.

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಆಚರಣೆಗೆ “ಮೇರಿ ಮಿಟ್ಟಿ ಮೇರಿ ದೇಶ್” ಅಭಿಯಾನ ಸಹ ದೇಶದ್ಯಾಂತ ನಡೆಯಲಿದೆ. ಮನೆ ಮನೆಯಿಂದ ಮಣ್ಣನ್ನು ತಂದು ಒಗ್ಗೂಡಿಸಿ ಗಿಡ ನೆಡುವುದು, ದೇಶಕ್ಕೆ ತಮ್ಮ ಪ್ರಾಣ ತೆತ್ತ ಸ್ವಾತಂತ್ರ ಯೋಧರ ಸ್ಮರಣಾರ್ಥ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಅಲ್ಲದೆ ಫಿಟ್ ಇಂಡಿಯಾ ಅಭಿಯಾನ ಹಾಗೂ ಸ್ವಚ್ಛತಾ ಸೇವಾ ಅಭಿಯಾನಕ್ಕೂ ಸಹ ಅಂಚೆ ಇಲಾಖೆ ಕೈಜೋಡಿಸಿದೆ.

ಇದೇ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಮೇಘದೂತ್ ಪ್ರಶಸ್ತಿಯನ್ನು ಬೆಂಗಳೂರು ಜಿ.ಪಿ.ಓ ಸೂಪರ್‍ವೈಸರ್ ಎಸ್. ರಮೇಶ್‍ಬಾಬು ಹಾಗೂ ಕರ್ನಾಟಕ ಪೊಸ್ಟಲ್ ಸರ್ಕಲ್ ಮೈಸೂರು ಕಚೇರಿಯ ಸಹಾಯಕ ಅಧೀಕ್ಷರಾದ ವಿನಾಯಕಶೆಟ್ಟಿ ಅವರಿಗೆ ನೀಡಿ ಗೌರವಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಕಾರದೊಂದಿಗೆ ಬಾಲಕಿಯರ ಏಳಿಗೆಗಾಗಿ ಸುಕನ್ಯ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ. ಇತ್ತೀಚೆಗೆ ಮಹಿಳಾ ಸನ್ಮಾನ್ (ಉಳಿತಾಯ ಯೋಜನೆ) ಪತ್ರಗಳನ್ನು ಸಹ ಜಾರಿಗೊಳಿಸಲಾಗಿದೆ. ಸಾಮಾಜಿಕ ಜಾಗೃತಿ ವಿಷಯಗಳನ್ನು ಒಳಗೊಂಡ ವಿಭಿನ್ನ ಕಾರ್ಯಕ್ರಮಗಳನ್ನು ಅಂಚೆ ಕಚೇರಿ ಆಯೋಜಿಸಿದೆ.

ವಿಭಿನ್ನ ವ್ಯಕ್ತಿತ್ವವುಳ್ಳ ವ್ಯಕ್ತಿಗಳ 25 ವಿಶೇಷ ಲಕೋಟೆ, 24 ವಿಶೇಷ ರದ್ದತಿ ಮತ್ತು ಕೆ.ಎ.ಎಸ್ ಅಧಿಕಾರಿಗಳ ಸಂಘದ ಕಾರ್ಪೊರೇಟ್ ಮೈ ಸ್ಟಾಂಪ್‍ನ್ನು ಬಿಡುಗಡೆ ಮಾಡಲಾಗಿದೆ. ಯಶಸ್ವಿ ಚಂದ್ರಯಾನ – 3ರ ಸ್ಮರಣಾರ್ಥ ವಿಶೇಷ ರದ್ದತಿಯೊಂದಿಗೆ ಕಳೆದ ಆಗಸ್ಟ್ 23 ರಂದು ವಿಶೇಷ ಲಕೋಟೆ ಬಿಡುಗಡೆ ಮಾಡಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರಕುಮಾರ್, ಜನರಲ್ ಮ್ಯಾನೇಜರ್ ಜೂಲಿಯಾ ಮಹಾಪಾತ್ರ, ಉತ್ತರ ಕರ್ನಾಟಕ ಪ್ರದೇಶದ ಜನರಲ್ ಪೋಸ್ಟ್ ಮಾಸ್ಟರ್ ಸುಶೀಲ್ ಕುಮಾರ್, ಬೆಂಗಳೂರು ಕೇಂದ್ರ ಕಚೇರಿ ಪೋಸ್ಟ್ ಮಾಸ್ಟರ್ ಜನರಲ್ ಎಲ್. ಕೆ. ದಾಶ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ