Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ನೇತೃತ್ವದ ಸರ್ಕಾರಗಳಿಂದ ಅನೈತಿಕ ಆಡಳಿತ - ನವಲಿ ಹಿರೇಮಠ

ಸುದ್ದಿಮೂಲ ವಾರ್ತೆ ಲಿಂಗಸುಗೂರು, ಫೆ. 11:
ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಪರೇಷನ್ ಕಮಲದ ಮೂಲಕ ಅಧಿಕಾರ ಚುಕ್ಕಾಣಿ ಹಿಡಿದು ಅನೈತಿಕವಾಗಿ ಆಡಳಿತ ನಡೆಸುತ್ತಿವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ರುದ್ರಯ್ಯ ನವಲಿ ಹಿರೇಮಠ ಆರೋಪಿಸಿದರು.
ಶನಿವಾರ ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಮಾಜಿ ಸಿಎಂ ಸಿದ್ಧರಾಮಯ್ಯ ಆಡಳಿತ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ 15-20 ಪರ್ಸೆಂಟೇಜ್ ಸರ್ಕಾರವೆಂದು ಲೇವಡಿ ಮಾಡಿದ್ದರು. ಆದರೆ ಇದೀಗ ತಮ್ಮದೇ ಆದ ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ ದಂಧೆಯಲ್ಲಿ ತೊಡಗಿದೆ ಎಂದು ನೇರವಾಗಿ ಆರೋಪಿಸಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರನ್ನು ಬಂಧಿಸಲಾಗಿದೆ.
ರಾಜ್ಯದ ನಾನಾ ಕ್ಷೇತ್ರಗಳ ಶಾಸಕರಾದ ಬಳಿಕ ಬೆಂಗಳೂರಲ್ಲಿ ಮನೆ ಮಾಡಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ ವಿನಃ ತಮ್ಮ ತಮ್ಮ ಕ್ಷೇತ್ರದ ಜನರ ಆಶೋತ್ತರಗಳ ಮತ್ತು ಅಭಿವೃದ್ಧಿ ಕಡೆಗೆ ಗಮನ ಹರಿಸುತ್ತಿಲ್ಲ. ಅಧಿವೇಶನದ ವೇಳೆ ಬಹುತೇಕ ಶಾಸಕರು ಸದನಕ್ಕೆ ಗೈರು ಹಾಜರಾಗುತ್ತಾರೆ. ನಾನಾ ರಾಜ್ಯಗಳಲ್ಲಿ ಶಾಸಕರನ್ನು ಖರೀದಿಸಿ ಬಿಜೆಪಿ ಸರ್ಕಾರ ರಚನೆಗೆ ಗಮನ ಹರಿಸುತ್ತಿದೆಯೆಂದು ಟೀಕಿಸಿದರು.
ದೆಹಲಿಯಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಕುಡಿಯುವ ನೀರು, ವಸತಿ, ಶಿಕ್ಷಣ, ಆರೋಗ್ಯ ಸೇರಿ ನಾನಾ ಯೋಜನೆಗಳ ಜಾರಿಗೆ ಸಾಲ ಮಾಡದೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಇದಕ್ಕೆ ಅಡ್ಡಿ ಪಡಿಸುತ್ತಿದೆ. ಆದರೆ ಇದಕ್ಕೆ ಹೆದರದೆ ಸಮರ್ಥವಾಗಿ ಆಪ್ ಸರ್ಕಾರ ನಡೆಸುತ್ತಿದೆ. ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್ ದುರಾಡಳಿತ ಮತ್ತು ಭ್ರಷ್ಟಾಚಾರದಿಂದ ರೋಸಿ ಹೋದ ಜನತೆ ಅತ್ಯಂತ ಪಾರದರ್ಶಕ ಮತ್ತು ಭ್ರಷ್ಟಾಚಾರ ರಹಿತ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷದ ಕಡೆಗೆ ಒಲವು ತೋರಿಸುತ್ತಿದ್ದಾರೆ. ಜನತೆ ಬದಲಾವಣೆ ಬಯಸುತ್ತಿದ್ದಾರೆ. ಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ದೇಶಾದ್ಯಂತ ಪಕ್ಷ ಸಂಘಟನೆಗೆ ಆಮ್ ಆದ್ಮಿ ಪಕ್ಷ ಮುಂದಾಗಿದ್ದು, ಮಾ.4 ರಂದು ದಾವಣೆಗೆರೆ ನಗರಕ್ಕೆ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಕ್ಷದ ವರಿಷ್ಠರು ಆಗಮಿಸಲಿದ್ದು, ಚುನಾವಣಾ ಪ್ರಚಾರಾರ್ಥ ರಾಯಚೂರು, ಲಿಂಗಸುಗೂರು ಮತ್ತು ಸಿಂಧನೂರು ನಗರಗಳಿಗೆ ಆಗಮಿಸುವಂತೆ ಸಿಎಂ ಅರವಿಂದ್ ಕೇಜ್ರಿವಾಲ್‌ರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಪಕ್ಷದ ತಾಲೂಕು ಅಧ್ಯಕ್ಷ ಎಂ.ಆರ್.ಪಾಟೀಲ್, ಮುಖಂಡರಾದ ಶಿವಪುತ್ರ ಗಾಣದಾಳ, ವೆಂಕನಗೌಡ, ಮಹಾಬಲೇಶ್ವರ, ಬೋಧು ನಾಯ್ಕ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ