Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದ 'ನೀರೋ' ಸಿಎಂ ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.22: ರೋಮ್ ನಗರ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ. ಜನ ಸಂಕಷ್ಟದಲ್ಲಿದ್ದರೆ ಕರ್ನಾಟಕದ ನೀರೋ ಕ್ರಿಕೆಟ್ ಮ್ಯಾಚ್ ನೋಡುತ್ತಿದ್ದ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಾವು ವೆಸ್ಟಂಡ್ ಹೋಟೆಲ್ನಲ್ಲಿ ಕೂತು ಸರಕಾರ ನಡೆಸುತ್ತಿಲ್ಲ, ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ಹೇಳಿಕೆ ನೀಡಿದ್ದ ಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ವೆಸ್ಟಂಡ್‌ನಲ್ಲಿ ಆಡಳಿತ ನಡೆಸಿಲ್ಲ ಎನ್ನುವ ಗಿಲೀಟು ಗಿರಾಕಿ, ಆವತ್ತು ಮುಖ್ಯಮಂತ್ರಿ ನಿವಾಸವನ್ನೇಕೆ ತೆರವು ಮಾಡಲಿಲ್ಲ? ಐದು ವರ್ಷ ಸರಕಾರ ಕೊಟ್ಟ ಸಿದ್ದಪುರುಷ ಇನ್ನೊಬ್ಬರ ಹೆಸರಿನಲ್ಲಿ ಭಂಗಲೆ ಪಡೆದು ಸಾಸಿವೆ ಕಾಳಷ್ಟೂ ಸಂಕೋಚವಿಲ್ಲದೆ ಅದೇ ಜಾಗದಲ್ಲಿ ಹೆಗ್ಗಣವಾಗಿ ಮೈತ್ರಿ ಸರಕಾರಕ್ಕೆ ಕನ್ನ ಕೊರೆದಿದ್ದನ್ನು ಕನ್ನಡಿಗರು ಮರೆತಿಲ್ಲ. ಹೇಳಿದ್ದೇ ಹೇಳುವ ಕಿಸುಬಾಯಿ ದಾಸನಿಗೆ ಗೊತ್ತಿರುವುದು ಎರಡೇ; ಒಂದು:ವೆಸ್ಟ್ ಎಂಡ್ ಎರಡು: ಬಿಜೆಪಿ ಬಿ ಟೀಂ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಡೋಂಗೀ ಸಮಾಜವಾದಿ, ಪುಲ್ ಟೈಂ ಮೀರುಸಾದಿಕವಾದಿಗೆ ವೆಸ್ಟ್ ಎಂಡ್ ಸೋಂಕು ಮತ್ತೆ ತಗುಲಿದೆ. ಐಎನ್‌ಡಿಐಎ ಕೂಟದ ಸಭೆಯನ್ನು ಇದೇ ವೆಸ್ಟ್ ಎಂಡ್ ಬದಲಿಗೆ, ತಮ್ಮ ಸುತ್ತ ಕೆನೆಪದರ, ಒಳಪದರ, ತೆಳುಪದರದಂತೆ ತಲೆ ಎತ್ತಿರುವ ʼಪರ್ಸಂಟೇಜ್ ಪಟಾಲಂʼ ಏಳುಸುತ್ತಿನ ಕೋಟೆಯ ವಠಾರದಲ್ಲಿಯೇ ನಡೆಸಬೇಕಿತ್ತು. ಏಕೆ ನಡೆಸಲಿಲ್ಲ? ಎಂದು ಮುಖ್ಯಮಂತ್ರಿಗಳನ್ನು ಅವರು ನೇರವಾಗಿ ಪ್ರಶ್ನಿಸಿದ್ದಾರೆ.

ಆಧುನಿಕ ಭಾರತದ ಈಸ್ಟ್ ಇಂಡಿಯಾ ಕಂಪನಿ ಕಾಂಗ್ರೆಸ್ʼಗೆ ಕರ್ನಾಟಕ ಪೊಗದಸ್ತು ಹುಲ್ಲುಗಾವಲು. ಸಿದ್ದಪುರುಷ ಅಲಿಯಾಸ್ ಶೋಕಿಪುರುಷನೇ ಈ ಹುಲ್ಲುಗಾವಲಿನ ಮೇಟಿ. ವಿದ್ಯುತ್ ಕ್ಷಾಮ ಮತ್ತು ಬರದಲ್ಲಿ ಜನರು ಬೆಯುತ್ತಿದ್ದರೆ ದಿನಪೂರ್ತಿ ಕೂತು ಕ್ರಿಕೆಟ್ ನೋಡುವಷ್ಟು ಶೋಕಿದಾರ! ರೋಮ್ ನಗರ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ. ಜನ ಸಂಕಷ್ಟದಲ್ಲಿದ್ದರೆ ಕರ್ನಾಟಕದ ನೀರೋ ಕ್ರಿಕೆಟ್ ಮ್ಯಾಚ್ ನೋಡುತ್ತಿದ್ದ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಐದು ತಿಂಗಳಿಂದ ವಿದ್ಯುತ್ ಉತ್ಪಾದನೆ ಅಲಕ್ಷಿಸಿದ್ದೇಕೆ? ಹಾಹಾಕಾರ ಎದ್ದ ಮೇಲೆ ಅದು ಮಾಡಿದ್ದೇವೆ, ಇದು ಮಾಡಿದ್ದೇವೆ ಎಂದರೆ ಲೋಡ್ ಶೆಡ್ಡಿಂಗ್ ಏಕೆ ಬಂತು? 2013-2018ರಲ್ಲಿ 12,000 ಮೆ.ವ್ಯಾ. ಉತ್ಪಾದಿಸಿದ್ದೇವೆ ಎಂದು ನೀವೇ ಹೇಳಿದ್ದೀರಿ, ಸರಿ. ಈಗ ಮಳೆ ಕಡಿಮೆಯಾಗಿ ಜಲವಿದ್ಯುತ್ ಉತ್ಪಾದನೆ ಕುಸಿದಿದೆ, ನನಗೂ ಗೊತ್ತಿದೆ. ಅದರಲ್ಲಿ 3,000 ಮೆ.ವ್ಯಾ. ಇಲ್ಲ ಎಂದರೂ ಸಾರ್ವಜನಿಕ & ಖಾಸಗಿ ವಲಯ ಸೇರಿ ಒಟ್ಟು 29,000 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಆಗಲೇಬೇಕಿತ್ತು. ಆಗಿಲ್ಲವೇಕೆ? ಏಕಾಎಕಿ ಉತ್ಪಾದನೆ ನಿಲ್ಲಿಸಿದ್ದೇಕೆ? ಜಲವಿದ್ಯುತ್ ಕೈಕೊಡುತ್ತದೆ ಎಂದು ಗೊತ್ತಿದ್ದರೂ ಕಲ್ಲಿದ್ದಲ ಸಂಗ್ರಹ ಇಟ್ಟುಕೊಳ್ಳಲಿಲ್ಲವಲ್ಲ, ಏಕೆ? ಎಂದು ಕುಮಾರಸ್ವಾಮಿ ಅವರು ಕೇಳಿದ್ದಾರೆ.

ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ ನಂತರ ಇಂ'ಧನ' ಇಲಾಖೆಯಲ್ಲೂ ನೀವು ನಗದೀಕರಣಕ್ಕೆ ನಾಂದಿ ಹಾಡಿದ್ದೀರಿ. ಖರೀದಿ ಖುಷಿಯಲ್ಲಿ ಪರ್ಸಂಟೇಜ್ ಪಟಾಲಂ ಸಂಭ್ರಮಿಸುತ್ತಿದೆ ಎಂದು ಆರೋಪಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ