Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಧಾನಿಯಲ್ಲಿ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದ ಎನ್‌ಐಎ

ಸುದ್ದಿಮೂಲ ವಾರ್ತೆ

ಬೆಂಗಳೂರು, ನ. 08 : ನಗರದ 15ಕ್ಕೂ ಹೆಚ್ಚು ಕಡೆಗಳಲ್ಲ ರಾಷ್ಟ್ರೀಯ ತನಿಖಾ ದಳ ಮಂಗಳವಾರ ರಾತ್ರಿ ದಾಳಿ ಮಾಡಿದೆ. ಎಂಟು ಮಂದಿ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದು ಎನ್‌ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಅಕ್ರಮ ಬಾಂಗ್ಲಾ ವಲಸಿಗರು ಮಾನವ ಕಳ್ಳಸಾಗಾಣಿಕೆ ಮತ್ತು ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸಂಬಂಧ ವಿಶೇಷ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆಧಾರದ ಮೇಲೆ 15 ತಂಡಗಳಿಂದ ಏಕಕಾಲಕ್ಕೆ ದಾಳಿ ನಡೆದಿದೆ. ಬೆಂಗಳೂರಿನ ಸೋಲದೇವನಹಳ್ಳಿ, ಕೆಆರ್ ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬಾಂಗ್ಲಾ ದೇಶದಿಂದ ನೂರಾರು ಮಂದಿಯನ್ನು ಭಾರತಕ್ಕೆ ಅಕ್ರಮವಾಗಿ ಕರೆ ತರುವುದು, ಇಲ್ಲಿ ಅವರನ್ನು ಉಗ್ರಗಾಮಿ ಚಟುವಟಿಕೆಗಳಿಗೆ ಬಳಸುವುದು ಇವರ ಮೇಲಿನ ಪ್ರಧಾನ ಆರೋಪವಾಗಿದೆ. ಉದ್ಯೋಗದ ಆಮಿಷ ಒಡ್ಡಿ ಅವರನ್ನು ಇಲ್ಲಿಗೆ ಕರೆತಂದು ಬಳಿಕ ಅವರಿಗೆ ಉಗ್ರ ತರಬೇತಿ ನೀಡಿ ದುಷ್ಕೃತ್ಯಗಳಿಗೆ ಬಳಸುವ ವಿದ್ಯಮಾನಗಳು ನಡೆಯುತ್ತಿರುವ ಬಗ್ಗೆ ದೂರುಗಳು ದಾಖಲಾಗಿದ್ದವು.

ಬೆಂಗಳೂರಿನ ನಾನಾ ಭಾಗಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇರುವ ಬಗ್ಗೆ ಕಾಲ ಕಾಲಕ್ಕೆ ವರದಿಗಳು ಬರುತ್ತಲೇ ಇವೆ. ಆದರೆ, ರಾಜಕಾರಣಿಗಳು ಕೂಡಾ ಇವರನ್ನು ಮತ ಬ್ಯಾಂಕ್‌ ಆಗಿ ಬಳಸುತ್ತಿರುವುದರಿಂದ ಅದರ ಬಗ್ಗೆ ಯಾರೂ ಹೆಚ್ಚಿನ ಗಮನ ನೀಡುತ್ತಿಲ್ಲ. ಅವರಲ್ಲಿ ಕೆಲವರು ಅಪಾಯಕಾರಿ ದುಷ್ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಮಾಹಿತಿ ಇದೆ. ಕೆಲವರು ಕಳ್ಳತನ, ದರೋಡೆ ಕೃತ್ಯಗಳಲ್ಲಿ ಶಾಮೀಲಾದರೆ ಇನ್ನು ಕೆಲವರು ಕೊಲೆ, ಉಗ್ರ ಕೃತ್ಯಗಳಲ್ಲೂ ಭಾಗಿಯಾಗುತ್ತಿದ್ದಾರೆ.

ರಾಮನಗರ ಮತ್ತಿತರ ಪ್ರದೇಶಗಳಲ್ಲಿ ಅವರು ತಮ್ಮದೇ ಆದ ಕಾಲೊನಿಗಳನ್ನು ಸೃಷ್ಟಿಸಿಕೊಂಡು ರಕ್ಷಣೆ ಪಡೆಯುತ್ತಿದ್ದಾರೆ ಎಂಬ ಬಗ್ಗೆ ಗಂಭೀರವಾದ ಆರೋಪಗಳು ಕೇಳಿಬಂದಿದ್ದವು. ಆದರೆ, ಎಲ್ಲವೂ ಒಂದು ಹಂತದಲ್ಲಿ ದೊಡ್ಡ ಸುದ್ದಿಯಾಗಿ ಬಳಿಕ ತಣ್ಣಗಾಗುವುದರಿಂದ ಅವರು ಮತ್ತೆ ಮತ್ತೆ ಚಿಗುರುತ್ತಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ