Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಜತೆ ನಿಖಿಲ್ ಕುಮಾರಸ್ವಾಮಿ ಭೇಟಿ

ಲಖನೌ: ಜಾತ್ಯತೀತ ಜನತಾದಳ ರಾಜ್ಯ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಇಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕರಾದ ಅಖಿಲೇಶ್ ಯಾದವ್ ಅವರನ್ನು ಲಖನೌದ ಅವರ ನಿವಾಸದಲ್ಲಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು.

ತಮ್ಮ ನಿವಾಸಕ್ಕೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಅವರನ್ನು ಅತ್ಯಂತ ಪ್ರೀತಿಯಿಂದ ಬರಮಾಡಿಕೊಂಡ ಅಖಿಲೇಶ್ ಯಾದವ್ ಅವರು, ದೀರ್ಘಕಾಲ ಮಾತುಕತೆ ನಡೆಸಿದರು.

ಈ ಬಗ್ಗೆ ಮಾಹಿತಿ ನೀಡಿದ ನಿಖಿಲ್ ಕುಮಾರಸ್ವಾಮಿ ಅವರು; ಅತ್ಯಂತ ವಿಶ್ವಾಸಪೂರ್ವಕ ಹಾಗೂ ಸಹೋದರ ವಾತ್ಸಲ್ಯದೊಂದಿಗೆ ನಡೆದ ಈ ಭೇಟಿಯ ಸಂದರ್ಭದಲ್ಲಿ ಲೋಕಸಭೆ ಚುನಾವಣೆಯೂ ಸೇರಿದಂತೆ ಭವಿಷ್ಯದ ರಾಜಕೀಯ ಬೆಳವಣಿಗೆಗಳ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಲಾಯಿತು ಎಂದಿದ್ದಾರೆ.

ಸಮಾಜವಾದಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರ ಕುಟುಂಬಗಳ ನಡುವಿನ ಬಾಂಧವ್ಯದ ಬಗ್ಗೆ ವಿಶೇಷವಾಗಿ ತಮ್ಮ ನೆನಪುಗಳನ್ನು ಮೆಲುಕು ಹಾಕಿದ ಅಖಿಲೇಶ್ ಯಾದವ್ ಅವರು, ಬಹುಮುಖ್ಯವಾಗಿ ಹೆಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಕ್ಷೇಮವನ್ನು ವಿಚಾರಿಸಿದರು ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ ರಾಷ್ಟ್ರ ಮಟ್ಟದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಾಕಷ್ಟು ವಿಷಯಗಳನ್ನು ಅಖಿಲೇಶ್ ಅವರು ಚರ್ಚೆ ನಡೆಸಿದರು. ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು ಎಂದು ಅವರು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ:

ಅಲ್ಲದೆ, ಮುಂದಿನ ಲೋಕಸಭೆ ಚುನಾವಣೆಯನ್ನು ಎದುರಿಸುವ ಬಗ್ಗೆ ಅಖಿಲೇಶ್ ಅವರು ತಮ್ಮದೇ ಆದ ವಿಶೇಷ ಕಾರ್ಯಸೂಚಿ ರೂಪಿಸಿಕೊಂಡಿದ್ದಾರೆ ಹಾಗೂ ಈಗಿನಿಂದಲೇ ಚುನಾವಣೆಯ ಸಿದ್ಧತೆಗಳನ್ನು ಭರದಿಂದ ನಡೆಸಿದ್ದಾರೆ. ಜತೆಗೆ, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಸಮೀಕರಣಗಳ ಬಗ್ಗೆ ನನ್ನ ಬಳಿ ಕೂಲಂಕಷವಾಗಿ ಚರ್ಚಿಸಿದರು ಎಂದು ನಿಖಿಲ್ ಅವರು ವಿವರಿಸಿದ್ದಾರೆ.

ಮೂಲತಃ ಮೈಸೂರು ನಗರದಲ್ಲಿ ವಿದ್ಯಾಭ್ಯಾಸ ಮಾಡಿದ್ದ ಅಖಿಲೇಶ್ ಅವರು; ಅಂದಿನ ದಿನಗಳನ್ನು ಸ್ಮರಿಸಿಕೊಂಡರು. ಕರ್ನಾಟಕ, ಕನ್ನಡಿಗರ ಬಗ್ಗೆ ತಮಗಿರುವ ಅಪಾರ ಗೌರವ, ಆದರಾಭಿಮಾನವನ್ನು ಹೃದಯಪೂರ್ವಕವಾಗಿ ವ್ಯಕ್ತಪಡಿಸಿದರು. ಅವರ ವಿಶ್ವಾಸ, ಪ್ರೀತಿಗೆ ನಾನು ಅಭಿನಂದನೆಗಳನ್ನು ಸಲ್ಲಿಸಿದ್ದೇನೆ ಎಂದು ನಿಖಿಲ್ ಅವರು ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ