Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಡಿಯೋ ಸಂವಾದದಲ್ಲಿ ಗಣತಿದಾರರು, ಮೇಲ್ವಿಿಚಾರಕರಿಗೆ ಸೂಚನೆ ರಾಯಚೂರು ಜಿಲ್ಲೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವೇಗಗೊಳಿಸಿ: ನಿತೀಶ್ ಕೆ

ಸುದ್ದಿಮೂಲ ವಾರ್ತೆ ರಾಯಚೂರು, ಸೆ.28:
ಕರ್ನಾಟಕ ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವು ಹಿಂದುಳಿದ ವರ್ಗಗಳ ಆಯೋಗದ ಸೂಚನೆಯಂತೆ ವೇಗವಾಗಿ ನಡೆಯಬೇಕು. ರಾಯಚೂರು ಜಿಲ್ಲೆಯಲ್ಲಿ ಸಮೀಕ್ಷಾ ಕಾರ್ಯದಲ್ಲಿ ಭಾಗಿಯಾದ ಎಲ್ಲ ಗಣತಿದಾರರು, ಮೇಲ್ವಿಿಚಾರಕರು ಚುರುಕಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಸೂಚನೆ ನೀಡಿದರು.
ಸೆ.28ರಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವು ಈಗಾಗಲೇ ಸೆ.22ರಂದೇ ಆರಂಭವಾಗಿದೆ. ಅಕ್ಟೋೋಬರ್ 7ರವರೆಗೆ ಸಮೀಕ್ಷಾ ಕಾರ್ಯ ನಡೆಯಲಿದ್ದು, ಈ ಕಾಲಿಮಿತಿಯೊಳಗೆ ಸಮೀಕ್ಷಾ ಕಾರ್ಯವು ಪೂರ್ಣವಾಗಬೇಕು. ಎಲ್ಲ ಗಣತಿದಾರರು ತಮ್ಮ ಕಾರ್ಯದ ಮಹತ್ವ ಅರಿತು ಸಕ್ರಿಿಯ ಭಾಗಿಯಾಗಬೇಕು.
ಮೇಲ್ವಿಿಚಾರಕರು ಸಹ ಕಾಲಕಾಲಕ್ಕೆೆ ಗಣತಿದಾರರನ್ನು ಸಂಪರ್ಕಿಸಿ ಮಾರ್ಗದರ್ಶನ ಮಾಡಬೇಕು. ಸಮೀಕ್ಷೆ ಕಡಿಮೆಯಾದ ಕಡೆಗಳಲ್ಲಿ ವೇಗಗೊಳಿಸಬೇಕು. ಗಣತಿದಾರರು ಕ್ಷೇತ್ರ ಕಾರ್ಯದಲ್ಲಿದ್ದ ಬಗ್ಗೆೆ ಪ್ರತಿ ದಿನ ಬೆಳಗ್ಗೆೆಯೇ ಮೇಲ್ವಿಿಚಾರಕರು ಕರೆ ಮಾಡಿ ಖಚಿತಪಡಿಸಿಕೊಳ್ಳಬೇಕು. ಸಮೀಕ್ಷಾ ಹಿನ್ನೆೆಲೆಯಲ್ಲಿ ಈಗಾಗಲೇ ತರಬೇತಿ ಪಡೆದು ಬಂದಿರುವ ಮಾಸ್ಟರ್ ಟ್ರೇೇನರ್‌ಗಳ ಸಹಾಯ ಪಡೆದು, ಏನಾದರು ತೊಡಕಗಳು ಇದ್ದಲ್ಲಿ ಕೂಡಲೇ ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಈ ಹಿಂದಿನ ಸಭೆಯಲ್ಲಿ ತಿಳಿಸಿದಂತೆ ನೋಡಲ್ ಅಧಿಕಾರಿಗಳು ಈ ಸಮೀಕ್ಷಾ ಕಾರ್ಯದ ಮೇಲ್ವಿಿಚಾರಣೆ ನಡೆಸಬೇಕು. ಎಲ್ಲಾ ತಾಲೂಕುಗಳಲ್ಲಿ ಸಮೀಕ್ಷಾ ಕಾರ್ಯದ ಪ್ರಗತಿಯು ಏಕಕಾಲಕ್ಕೆೆ ಆಗಬೇಕು. ಆಯಾ ತಾಲೂಕಿನ ಸಮೀಕ್ಷಾ ಕಾರ್ಯದ ಬಗ್ಗೆೆ ಪ್ರತಿ ದಿನ ವರದಿ ಮಾಡಬೇಕು ಎಂದು ಸೂಚನೆ ನೀಡಿದರು.
ವಿಡಿಯೋ ಸಂವಾದದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಈಶ್ವರ್‌ಕಾಂದೂ, ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೋಹಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ, ಸಹಾಯಕ ಆಯುಕ್ತರಾದ ಗಜಾನನ ಬಾಳೆ, ಬಸವಣೆಪ್ಪ ಕಲಶಟ್ಟಿಿ, ತಹಸೀಲ್ದಾಾರ ಸುರೇಶ ವರ್ಮಾ, ಹಿಂದುಳಿದ ವರ್ಗಗಳ ಕಲ್ಯಾಾಣ ಇಲಾಖೆಯ ಅಧಿಕಾರಿ ಸುನೀತಾ ಘಟಕಾಂಬಳೆ ಸೇರಿದಂತೆ ಇನ್ನೀತರ ಇಲಾಖೆಯ ಅಧಿಕಾರಿಗಳು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ