Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆೆಸ್ ಕಲಹದಲ್ಲಿ ಸ್ವಾಾಮೀಜಿಗಳ ಮಧ್ಯಪ್ರವೇಶ ಅಗತ್ಯವಿಲ್ಲ: ಕುಮಾರಸ್ವಾಾಮಿ

ಸುದ್ದಿಮೂಲ ವಾರ್ತೆ ಬೆಂಗಳೂರು, ನ.29:
ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು ಯಾರೋ ಒಬ್ಬರ ಪರ ಅಭಿಪ್ರಾಾಯ ವ್ಯಕ್ತಪಡಿಸುವ ವ್ಯಾಾಮೋಹ ಬಿಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಾಮಿ ಹೇಳಿದರು.
ಬೆಂಗಳೂರಿನಲ್ಲಿ ನಡೆದ ಎನ್ಡಿಿಎ ಸಮನ್ವಯ ಸಮಿತಿ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆೆಸ್ ಪಕ್ಷದಲ್ಲಿ ನಡೆಯುತ್ತಿಿರುವ ಆಂತರಿಕ ಕಲಹದ ವಿಚಾರದಲ್ಲಿ ಸ್ವಾಾಮೀಜಿಗಳು ಮಧ್ಯ ಪ್ರವೇಶ ಮಾಡುವುದು ಅನಗತ್ಯ. ಅವರಿಗೆ ಇದರಲ್ಲಿ ಏನೂ ಕೆಲಸ ಇಲ್ಲ ಎಂದು ಅಭಿಪ್ರಾಾಯಪಟ್ಟರು.
ನಾನು ಎರಡು ಬಾರಿ ಮುಖ್ಯಮಂತ್ರಿಿ ಆಗಿದ್ದೆ. ಅಧಿಕಾರ ಹೋದಾಗ ಯಾವ ಮಠಾಧಿಪತಿಗಳ ನೆರವನ್ನು ನಾನು ಕೇಳಲಿಲ್ಲ. ರಾಜಕಾರಣಿಗಳ ಕೆಲಸವೇ ಬೇರೆ, ಸ್ವಾಾಮೀಜಿಗಳ ಕೆಲಸವೇ ಬೇರೆ. ಒಕ್ಕಲಿಗ ಸಮಾಜ ಅಷ್ಟೇ ಅಲ್ಲ, ಬೇರೆ ಯಾವುದೇ ಸಮಾಜದ ಬಗ್ಗೆೆ ನಾನು ಮಾತನಾಡಲು ಹೋಗುವುದಿಲ್ಲ. ಜಾತಿ ಧರ್ಮಗಳ ವಿಚಾರ ಹೇಳಿಕೊಂಡು ಧಾರ್ಮಿಕ ಕ್ಷೇತ್ರಗಳನ್ನ ದುರುಪಯೋಗಪಡಿಸಿಕೊಂಡು, ರಾಜಕಾರಣ ಮಾಡೋದು ಯಾರಿಗೂ ಶೋಭೆ ತರುವುದಿಲ್ಲ ಎಂದು ಎಂದು ಕೇಂದ್ರ ಸಚಿವರು ಹೇಳಿದರು.
ಸಮಾಜದಲ್ಲಿ ಜಾತಿ ಸಂಘರ್ಷಕ್ಕೆೆ ಅವಕಾಶ ಇರಬಾರದು. ಅದಕ್ಕೆೆ ಯಾರೂ ಕಾರಣ ಆಗಬಾರದು. ನಾನು ಧರ್ಮಗುರುಗಳಿಗೆ ಮನವಿ ಮಾಡುವುದು ಇಷ್ಟೇ. ಸಮಾಜದಲ್ಲಿ ಶಾಂತಿ ನೆಮ್ಮದಿ ಮುಖ್ಯ. ಜಾತಿ ಮತ್ತು ಧರ್ಮ ಸಂಘರ್ಷ ಮಾಡಬಾರದು. ಅದು ರಾಜ್ಯಕ್ಕೆೆ ಒಳ್ಳೆೆಯದಲ್ಲ. ಕಾಂಗ್ರೆೆಸ್ ಪಕ್ಷದ ಕಲಹದಲ್ಲಿ ಜಾತಿ ಧರ್ಮಗಳನ್ನು ಎಳೆದು ತರೋದು ಬೇಕಾಗಿಲ್ಲ ಎಂದು ಕೇಂದ್ರ ಸಚಿವರು ಹೇಳಿದರು.
ರಾಜ್ಯದಲ್ಲಿ ಈಗ ದೊಡ್ಡ ಮಟ್ಟದಲ್ಲಿ ಜಾತಿ ರಾಜಕಾರಣ ನಡೆಯುತ್ತಿಿದೆ. ಇದರಿಂದ ನಷ್ಟ ರಾಜಕಾರಣ ಮಾಡುವವರಿಗೆ ಆಗುವುದಿಲ್ಲ. ರಾಜ್ಯಕ್ಕೆೆ ದೊಡ್ಡ ನಷ್ಟ ಆಗುತ್ತದೆ. ರಾಜ್ಯದಲ್ಲಿ ಸಮಾಜಗಳ ನಡುವೆ ಸಂಘರ್ಷಕ್ಕೆೆ ಎಡೆಮಾಡಿಕೊಟ್ಟಿಿದೆ. ಇದರ ಅವಶ್ಯಕತೆ ಇಲ್ಲ. ಇದು ಕಾಂಗ್ರೆೆಸ್ ಪಕ್ಷಕ್ಕೆೆ ಆಗುವ ಮುಜುಗರ ಅಲ್ಲ. ಕರ್ನಾಟಕ ಜನತೆಗೆ ಆಗುವ ಮುಜುಗರ ಎಂದು ಕುಮಾರಸ್ವಾಾಮಿ ಅವರು ವಾಗ್ದಾಾಳಿ ನಡೆಸಿದರು.
ಈ ಸರ್ಕಾರಕ್ಕೆೆ ರಾಜ್ಯದ ಜನ 140 ಸ್ಥಾಾನ ನೀಡಿದ್ದರು. ಅಷ್ಟು ಬಹುಮತ ಕೊಟ್ಟರೂ ಜನರ ನಿರೀಕ್ಷೆ ಹುಸಿ ಮಾಡಿದ್ದಾರೆ. ಕಳೆದ ಎರಡೂವರೆ ವರ್ಷದಿಂದ ಇವರು ಮಾಡಿದ್ದು ಏನು? ಕುರ್ಚಿಗಾಗಿ ಕಿತ್ತಾಾಟ ಮಾಡುತ್ತಿಿದ್ದಾರೆ. ರಾಜ್ಯದ ಬಗ್ಗೆೆ ಇವರಿಗೆ ಕಾಳಜಿ ಇಲ್ಲ. ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗಬೇಕು ಎನ್ನುವ ಪರಿಜ್ಞಾನ ಇವರಿಗೆ ಇಲ್ಲ. ನನ್ನ ಪ್ರಕಾರ ಈ ಸರ್ಕಾರದ ಬಗ್ಗೆೆ ಚರ್ಚೆ ಮಾಡುವ ಅವಶ್ಯಕತೆಯೇ ಇಲ್ಲ ಎಂದು ಅವರು ಕಿಡಿಕಾರಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ