Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಯನಗರ ವಾಣಿಜ್ಯ ಸಂಕೀರ್ಣದ ಒತ್ತುವರಿ ತೆರವಿಗೆ ಸೂಚನೆ

ಸುದ್ದಿಮೂಲ ವಾರ್ತೆ

ಬೆಂಗಳೂರು,ಅ.31: ಜಯನಗರ ವಾಣಿಜ್ಯ ಸಂಕೀರ್ಣ ಹಾಗೂ ಸದರಿ ಸಂಕೀರ್ಣಕ್ಕೆ ಹೊಂದಿಕೊಂಡಂತಿರುವ ಸುತ್ತಮುತ್ತಲಿನ ಪ್ರದೇಶವನ್ನು ಪರಿಶೀಲಿಸಿ, ಜಯನಗರ ವಾಣಿಜ್ಯ ಸಂಕೀರ್ಣದ ಒಳ ಭಾಗದಲ್ಲಿ ವ್ಯಾಪಾರ ನಡೆಸುತ್ತಿರುವ ಮಳಿಗೆದಾರರು ಅನಧಿಕೃತವಾಗಿ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆ ತೆರವುಗೊಳಿಸುವಂತೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಯನಗರ ವಾಣಿಜ್ಯ ಸಂಕೀರ್ಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ಬದಿಯ ವ್ಯಾಪಾರಿಗಳು ರಸ್ತೆ ಹಾಗೂ ಪಾದಚಾರಿ ಮಾರ್ಗದ, ಒತ್ತುವರಿಯನ್ನು ತೆರವುಗೊಳಿಸಲು ಹಾಗೂ ಅನಧಿಕೃತ ಮಳಿಗೆ ಹಾಗೂ ವ್ಯಾಪಾರ ವಹಿವಾಟು ನಡೆಸುತ್ತಿರುವುದನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮುಂದಿನ ದಿನಗಳಲ್ಲಿ ಜಯನಗರ ವಾಣಿಜ್ಯ ಸಂಕೀರ್ಣದ ಒಳಭಾಗದಲ್ಲಿ ಹಾಗೂ ಹೊರಗಿನ ಪ್ರದೇಶಗಳಲ್ಲಿ ರಸ್ತೆ ಹಾಗೂ ಪಾದಚಾರಿ ಮಾರ್ಗಗಳು ವ್ಯಾಪಾರಸ್ಥರಿಂದ , ಬೀದಿ ಬದಿಯ ವ್ಯಾಪಾರಿಗಳಿಂದ ಒತ್ತುವರಿಯಾಗದಂತೆ ಕ್ರಮವಹಿಸಲು ಗಸ್ತಿನಲ್ಲಿರುವ ಮಾರ್ಷಲ್‌ಗಳಿಗೆ ಸೂಚಿಸಲಾಯಿತು.

ಜಯನಗರ ವಾಣಿಜ್ಯ ಸಂಕೀರ್ಣದ ಮೀನು ಮಾರುಕಟ್ಟೆಯ ಸುತ್ತಲಿನ ಪ್ರದೇಶಗಳನ್ನು ಪರಿಶೀಲಿಸಿ, ವಿದ್ಯುತ್ ದೀಪ ವ್ಯವಸ್ಥೆ ಇಲ್ಲದೇ ಇರುವುದನ್ನು ಗಮನಿಸಿ ಕೂಡಲೇ ವಿದ್ಯುತ್ ದೀಪಗಳನ್ನು ಅಳವಡಿಸಿ, ಅನಧಿಕೃತವಾಗಿ ಒಳಬಾರದಂತೆ ಪ್ರವೇಶ ನಿರ್ಭಂದಗೊಳಿಸಲು ಕ್ರಮವಹಿಸಲುವ ಸೂಚಿಸಿದರು.

ಈ ವೇಳೆ ಮಾನ್ಯ ಶಾಸಕರಾದ ಶ್ರೀ ಸಿ.ಕೆ.ರಾಮಮೂರ್ತಿ, ದಕ್ಷಿಣ ವಲಯದ ವಲಯ ಆಯುಕ್ತಾದ ವಿನೋತ್ ಪ್ರಿಯಾ, ಜಂಟಿ ಆಯುಕ್ತರಾದ ಡಾ. ಕೆ. ಜಗದೀಶ್ ನಾಯ್ಕ್, ಮುಖ್ಯ ಅಭಿಯಂತರರಾದ ರಾಜೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ