Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್‌ಎಸ್‌ಎಸ್ ನಿಂದನೆ: ಪ್ರಿಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್‌ಗೆ ನೋಟಿಸ್

ಸುದ್ದಿಮೂಲ ವಾರ್ತೆ ಬೆಂಗಳೂರು, ಜ.05:
ಆರ್‌ಎಸ್‌ಎಸ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪಕ್ಕೆೆ ಸಂಬಂಧಿಸಿದಂತೆ ಸಚಿವರಾದ ಪ್ರಿಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್ ಹಾಗೂ ಕಾಂಗ್ರೆೆಸ್ ನಾಯಕ ಮೊಹಮ್ಮದ್ ನಲಪಾಡ್‌ಗೆ ನ್ಯಾಾಯಾಲಯ ನೋಟಿಸ್ ಜಾರಿ ಮಾಡಿದೆ.
ಎ ತೇಜಸ್ ಎಂಬುವವರು ನೀಡಿದ್ದ ಖಾಸಗಿ ದೂರಿನ ಹಿನ್ನೆೆಲೆಯಲ್ಲಿ ವಿಶೇಷ ನ್ಯಾಾಯಾಧೀಶ ಕೆ. ಎನ್. ಶಿವಕುಮಾರ್ ಶನಿವಾರ ಆದೇಶ ಹೊರಡಿಸಿದರು. ಪ್ರಕರಣದ ಮುಂದಿನ ವಿಚಾರಣೆ ಬರುವ ಜನವರಿ 14 ರಂದು ನಡೆಯಲಿದೆ.
ಅಕ್ಟೋೋಬರ್ 4 ರಂದು ಮುಖ್ಯಮಂತ್ರಿಿಗಳಿಗೆ ಪತ್ರ ಬರೆದ ಪ್ರಕರಣದ ಮೊದಲನೇ ಆರೋಪಿ, ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಿಯಾಂಕ್ ಖರ್ಗೆ ಅವರು ಪತ್ರ ಬರೆದು ಆರ್‌ಎಸ್‌ಎಸ್ ಚಟುವಟಿಕೆಗಳ ಮೇಲೆ ನಿರ್ಬಂಧ ಹೇರಬೇಕು ಎಂದು ಕೋರಿದ್ದರು.
ಸರ್ಕಾರಿ ಶಾಲೆ, ಸರ್ಕಾರಿ ಮೈದಾನಗಳಲ್ಲಿ ಅದು ಯಾವುದೇ ಬೈಠಕ್ ನಡೆಸದಂತೆ ನಿರ್ಬಂಧ ವಿಧಿಸಬೇಕು ಎಂದು ಹೇಳಿದ್ದರು. ಸಮಾಜದಲ್ಲಿ ಆರ್‌ಎಸ್‌ಎಸ್ ಸದಸ್ಯರು ಭಯದ ವಾತಾವರಣ ಉಂಟು ಮಾಡುತ್ತಾಾರೆ. ಮಕ್ಕಳು ಮತ್ತು ಯುವಕರಲ್ಲಿ ನಕಾರಾತ್ಮಕ ಶಕ್ತಿಿ ತುಂಬುತ್ತಾಾರೆ. ಮೂಲಭೂತವಾದಿ ಸಿದ್ಧಾಾಂತ ಹೊಂದಿರುತ್ತಾಾರೆ. ಹೀಗಾಗಿ ಅವರ ಚಟುವಟಿಕೆಗಳ ಮೇಲೆ ನಿರ್ಬಂಧ ಹೇರಬೇಕು ಎಂದು ಪತ್ರ ಬರೆದಿದ್ದು ಅದನ್ನು ತಮ್ಮ ಅಧಿಕೃತ ಟ್ವಿಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು ಎಂದು ದೂರುದಾರರು ಆರೋಪಿಸಿದ್ದರು.
ಅಲ್ಲದೇ ಅಕ್ಟೋೋಬರ್ 13 ರಂದು ಆರ್‌ಎಸ್‌ಎಸ್ ಸದಸ್ಯನ ಸ್ನೇಹಿತನಾಗಿರಲಿ, ನಿಮ್ಮ ಕುಟುಂಬದ ಸದಸ್ಯನಾಗಿರಲಿ, ಸಹೋದರನಾಗಿರಲಿ ಅಥವಾ ಮಗನಾಗಿರಲಿ - ಅವರು ನಿಜವಾದ ವಿಷಕಾರಿ ವ್ಯಕ್ತಿಿಗಳು ಮತ್ತು ನಿಜವಾದ ನಿಂದಕರಾಗಿದ್ದಾರೆ. ಕೇರಳದಲ್ಲಿ ತಂತ್ರಜ್ಞರೊಬ್ಬರ ಆತ್ಮಹತ್ಯೆೆಗೆ ಅದು ಹೊಣೆಗಾರ. ಅವರಿಂದ ಲೈಂಗಿಕ ದೌರ್ಜನ್ಯ ಹಾಗೂ ಹಿಂಸೆ ನಡೆದಿದೆ ಎಂದು ಪ್ರಕರಣದ ಮೊದಲನೇ ಆರೋಪಿ ಟ್ವೀಟ್ ಮಾಡಿದ್ದರು ಎಂದಿದ್ದರು. ಅಲ್ಲದೇ ಅಕ್ಟೋೋಬರ್ 14 ರಂದು ಕೂಡ ಆರ್‌ಎಸ್‌ಎಸ್ ವಿರುದ್ಧ ಟ್ವೀಟ್ ಮಾಡಿದ್ದರು ಎಂಬುದಾಗಿ ಅವರು ವಿವರಿಸಿದ್ದರು.
ಈ ಟ್ವೀಟನ್ನು ಅನುಕರಿಸಿದ್ದ ಎರಡನೇ ಆರೋಪಿ ಹಾಗೂ ಸಚಿವ ದಿನೇಶ್ ಗುಂಡೂರಾವ್ ಅವರು ಪನ್ಸಾಾರೆ, ಗೌರಿ ಲಂಕೇಶ್, ಕಲಬುರ್ಗಿ ಅವರ ಹತ್ಯೆೆ ಪ್ರಸ್ತಾಾಪಿಸಿ ಆರ್‌ಎಸ್‌ಎಸ್ ವಿರುದ್ಧ ಆರೋಪ ಮಾಡಿದ್ದರು. ಮೂರನೇ ಆರೋಪಿ ಮಹಮ್ಮದ್ ನಲಪಾಡ್ ಅವರು ಯೂಟ್ಯೂಬ್ ವಾಹಿನಿಯೊಂದರಲ್ಲಿ ಮಾತನಾಡುತ್ತ ಆರ್‌ಎಸ್‌ಎಸ್ ವಿರುದ್ಧ ಅವಹೇಳನ ಮಾಡಿದ್ದರು ಎಂದು ಅರ್ಜಿದಾರ ಆಪಾದಿಸಿದ್ದರು.
ಇವರ ಹೇಳಿಕೆಗಳನ್ನು ರಾಜ್ಯದಾದ್ಯಂತ ಸಾರ್ವಜನಿಕರು ಓದಿದ್ದು, ವೀಕ್ಷಿಸಿದ್ದು ಇದು ಆರ್‌ಎಸ್‌ಎಸ್ ಬಗ್ಗೆೆ ಕೀಳುಭಾವನೆ ಉಂಟು ಮಾಡುವಂತೆ ಮಾಡಿದೆ. ಆರೋಪಿತರು ರಾಜ್ಯದ ಸಚಿವರಾಗಿದ್ದು, ಸಾರ್ವಜನಿಕರ ಮೇಲೆ ಪ್ರಭಾವ ಬೀರುವ ಹುದ್ದೆಯಲ್ಲಿ ಇರುವುದರಿಂದ ಅವರು ನೀಡಿರುವ ಹೇಳಿಕೆಗಳಿಂದ ಸಾರ್ವಜನಿಕರು ಪ್ರಭಾವಿತರಾಗುತ್ತಾಾರೆ. ಹೀಗಾಗಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ಕೋರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ