Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರ ಪ್ರದೇಶಗಳಲ್ಲಿ ಅಂಗನವಾಡಿ ಕಟ್ಟಡಗಳಿಗೆ ನಿವೇಶನ ಗುರುತಿಸುವಂತೆ ಸೂಚನೆ 

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ. 13 : ನಗರ ಪ್ರದೇಶಗಳಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಲು ಅಗತ್ಯ ನಿವೇಶನಗಳನ್ನು ಗುರುತಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒ ಗಳಿಗೆ ಸೂಚಿಸಿದರು.

ವಿಧಾನಸೌಧದ ಸಭಾಂಗಣ ಕೊಠಡಿಯಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ನಗರ ಪ್ರದೇಶದಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ನಿವೇಶನದ ಕೊರತೆ ಇದೆ. ಸರ್ಕಾರಿ‌ ಪ್ರಾಥಮಿಕ ಶಾಲೆಗಳು, ಸರ್ಕಾರದ ಸಮುದಾಯ ಭವನಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಅನುಮತಿ ನೀಡಬೇಕೆಂದು ಸಚಿವರು ಮುಖ್ಯಮಂತ್ರಿ ಬಳಿ ಮನವಿ ಮಾಡಿದರು.

ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳನ್ನು ಶೀಘ್ರದಲ್ಲೇ ತುಂಬಲಾಗುವುದು ಎಂದು ಹೆಬ್ಬಾಳಕರ್ ತಿಳಿಸಿದರು.

ಇದೇ ಸಂದರ್ಭದಲ್ಲಿ ಮೈಸೂರಿನಲ್ಲಿ ಆ. 30 ರಂದು ನಡೆದ 'ಗೃಹಲಕ್ಷ್ಮಿ' ಯೋಜನೆಯ ಸೌಲಭ್ಯಗಳ ವಿತರಣೆ ಸಮಾರಂಭದ ಯಶಸ್ಸಿಗೆ ಸಹಕರಿಸಿದ ಸಚಿವ ಸಂಪುಟದ ಸಹೋದ್ಯೋಗಿಗಳು, ಶಾಸಕರು ಹಾಗೂ ಅಧಿಕಾರಿಗಳಿಗೆ ಸಚಿವರು ಈ ವೇಳೆ ಧನ್ಯವಾದ ಅರ್ಪಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ