Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಡದಿವರೆಗೂ ಮೆಟ್ರೊ: ಡಿಪಿಆರ್‌ಗೆ ಸೂಚನೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ನ.10: ನಮ್ಮ ಮೆಟ್ರೋವನ್ನು ಬಿಡದಿವರೆಗೂ ವಿಸ್ತರಣೆ ಮಾಡಲು ಸರ್ವೇ ಮಾಡಿಸುತ್ತಿದ್ದು, ಈ ವಿಚಾರವಾಗಿ ಡಿಪಿಆರ್ ಸಿದ್ಧಪಡಿಸಲು ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಬಿಡದಿಯ ಟೊಯೋಟಾ- ಕಿರ್ಲೋಸ್ಕರ್ ಸಂಸ್ಥೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ತರಬೇತಿ ಕಟ್ಟಡವನ್ನು ಉದ್ಘಾಟಿಸಿದ ನಂತರ ಮಾತನಾಡಿದರು.

ಬಿಡದಿಯ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಜನರು ಕೆಲಸ ಮಾಡುತ್ತಿದ್ದಾರೆ. ಇವರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಲು ಮೆಟ್ರೊ ಯೋಜನೆ ಇಲ್ಲಿಯ ತನಕ ವಿಸ್ತರಿಸುವಂತೆ ಶಾಸಕರು, ಸಂಸದರು ಮನವಿ ಸಲ್ಲಿಸಿದ್ದರು. ಹೀಗಾಗಿ ಬಿಎಂಆರ್‌ಸಿಎಲ್ ಅವರಿಗೆ ಯೋಜನಾ ವರದಿ ಸಿದ್ದಪಡಿಸಲು ತಿಳಿಸಿದ್ದೇನೆ ಎಂದು ಹೇಳಿದರು.

ಈ ವಿಚಾರವಾಗಿ ಸ್ಥಳೀಯ ಭಾಗದ ಜನರನ್ನು ಕೇಳುತ್ತಿದ್ದೇನೆ. ಸಮೀಕ್ಷೆ ಮಾಡಿಸಿ, ಜನರಿಂದ ಅಭಿಪ್ರಾಯ ಪಡೆದು ಅವರ ಆಸೆ ಆಕಾಂಕ್ಷೆಗಳನ್ನು ತಿಳಿಯುತ್ತಿದ್ದೇನೆ. ಜನರ ಅಭಿಪ್ರಾಯ ಪಡೆದು ನಂತರ ಸರ್ಕಾರದ ಮುಂದೆ ಈ ಪ್ರಸ್ತಾವನೆ ಇಡುತ್ತೇನೆ ಎಂದು ಹೇಳಿದರು.

ಗ್ರೇಟರ್ ಬೆಂಗಳೂರು:

ಬಿಡದಿ ಯೋಜನಾ ಪ್ರಾಧಿಕಾರವನ್ನು ತೆಗೆದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ ಮಾಡುತ್ತೇವೆ. ಬಿಡದಿಯಲ್ಲಿ ಸುಮಾರು 10,000 ಎಕರೆ ಸ್ವಾಧೀನ ಪಡಿಸಿಕೊಂಡಿರುವ ಭೂಮಿಯನ್ನು, ಯಾವುದೇ ಉದ್ದೇಶಕ್ಕೆ ಬಳಕೆ ಮಾಡಿಲ್ಲ. ಬೆಂಗಳೂರಿನಲ್ಲಿ ಸಿಗುವ ಸೌಲಭ್ಯ ಈ ಭಾಗದಲ್ಲೂ ಸಿಗಬೇಕು ಎನ್ನುವ ಉದ್ದೇಶ ನಮ್ಮದು. ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿ ಈ ಎರಡು ಯೋಜನೆಗಳನ್ನು ಈ ಶುಭದಿನದಂದು ಘೋಷಿಸುತ್ತೇನೆ. ಈ ಯೋಜನೆಗಳ ಮೂಲಕ ಈ ಭಾಗ ಅಭಿವೃದ್ಧಿ ಆಗಬೇಕು, ಈ ಭಾಗದ ಜನರ ಆಸ್ತಿ ಮೌಲ್ಯ ಹೆಚ್ಚಾಗಬೇಕು ಎಂದರು.

ಟೊಯೋಟಾ ಸಂಸ್ಥೆ ಹೆಣ್ಣುಮಕ್ಕಳ ತರಬೇತಿ ಕೇಂದ್ರ ತೆರೆದಿರುವುದು ಸಂತೋಷದ ವಿಚಾರ. ಮಹಿಳೆಯರಿಗೆ ಶಕ್ತಿ ತುಂಬುವುದು ನಮ್ಮ ಸರ್ಕಾರದ ಸಂಕಲ್ಪ. ಶಕ್ತಿ ಯೋಜನೆ ಮೂಲಕ ಉಚಿತ ಬಸ್ ಪ್ರಯಾಣ ಮಾಡಿದ ಪರಿಣಾಮ ಮೈಸೂರು ದಸರಾ ಆಚರಣೆ ವೇಳೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಇದರಿಂದ ಪ್ರವಾಸೋದ್ಯಮ, ವ್ಯಾಪಾರ ವಹಿವಾಟು ಹೆಚ್ಚಾಗುತ್ತಿದೆ. ಮುಂದಿನ ಚುನಾವಣೆ ವೇಳೆಗೆ ಮಹಿಳೆಯರಿಗೆ ರಾಜಕೀಯದಲ್ಲೂ ಶೇ.33ರಷ್ಟು ಮೀಸಲಾತಿ ಜಾರಿಗೆ ತಂದು ಈ ಭಾಗದಲ್ಲಿ ಮಹಿಳಾ ಪ್ರತಿನಿಧಿಗಳು ಆಯ್ಕೆಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.

ಭೂಮಿ ಕಳೆದುಕೊಂಡವರಿಗೆ ಉದ್ಯೋಗ ಕೊಡಿ

ನಾನು ಟೊಯೋಟಾ ಸಂಸ್ಥೆಗೆ ಕಿವಿಮಾತು ಹೇಳಿದ್ದೇನೆ. ಯಾರು ಕೈಗಾರಿಕೆಗಳ ಅಭಿವೃದ್ಧಿಗೆ ಭೂಮಿ ಕಳೆದುಕೊಳ್ಳುತ್ತಾರೋ ಅವರಿಗೆ ಹಾಗೂ ಅವರ ಮಕ್ಕಳಿಗೆ ಕೆಲಸದಲ್ಲಿ ಮೊದಲ ಆದ್ಯತೆ ನೀಡಬೇಕು. ಈ ವಿಚಾರವಾಗಿ ಸರ್ಕಾರದ ಕಾನೂನು ಕೂಡ ಇದೆ. ಕೇವಲ ಟೊಯೋಟಾ ಮಾತ್ರವಲ್ಲ ಎಲ್ಲಾ ಸಂಸ್ಥೆಗಳ ಜೊತೆ ಚರ್ಚೆ ಮಾಡಿ ಒಂದು ಪ್ರಕ್ರಿಯೆ ಮೂಲಕ ಸ್ಥಳೀಯರಿಗೆ ಉದ್ಯೋಗ ಆದ್ಯತೆ ನೀಡುವಂತೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಬೆಂಗಳೂರು ದಕ್ಷಿಣ ಎಂದು ಹೆಸರು ಬದಲಾದರೆ ಕೈಗಾರಿಕೆಗಳು ಹೆಚ್ಚು ಬರುತ್ತವೆಯೇ ಎಂಬ ಪ್ರಶ್ನೆಗೆ, ನಾವೆಲ್ಲರೂ ಬೆಂಗಳೂರಿನವರು. ನಮ್ಮ ಜಿಲ್ಲಾ ಕೇಂದ್ರ ರಾಮನಗರದಲ್ಲೇ ಇರಲಿ. ನಮ್ಮ ಅಭ್ಯಂತರವಿಲ್ಲ. ನಾವು ಬೆಂಗಳೂರಿನ ಹೆಸರನ್ನು ಕಳೆದುಕೊಳ್ಳಲು ಇಷ್ಟವಿಲ್ಲ".
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ