ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕೆ ಸೂಚನೆ
ಸುದ್ದಿಮೂಲ ವಾರ್ತೆ
ತುಮಕೂರು, ಅಗಸ್ಟ್ 4 : ಕೇಂದ್ರ ಸರ್ಕಾರದಿಂದ ಜನ ಕಲ್ಯಾಣಕ್ಕಾಗಿ ಹಲವು ಯೋಜನೆಗಳ ಜಾರಿಗೆ, ಅನುದಾನ ಬಿಡುಗಡೆ ಮಾಡಲಾಗಿದೆ. ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ
ಖಾತೆ ರಾಜ್ಯ ಸಚಿವ ಹಾಗೂ ಜಿಲ್ಲಾ ದಿಶಾ ಸಮಿತಿ ಅಧ್ಯಕ್ಷರಾದ
ಎ.ನಾರಾಯಣಸ್ವಾಮಿ ಸೂಚಿಸಿದರು.
ಜಿಲ್ಲಾ ಪಂಚಾಯತ್ ಕಛೇರಿಯ ಸಭಾಂಗಣದಲ್ಲಿ ನಡೆದ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಪ್ರಗತಿ ಪರಿಶೀಲನಾ ಸಭೆಯ
ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಜನರ ಸಮಸ್ಯೆಯನ್ನು ಬಗೆಹರಿಸಲು ಹಾಗೂ ಅಭಿವೃದ್ಧಿಗೆ ಆದ್ಯತೆ ನೀಡಿ ಹಲವಾರು ಯೋಜನೆಗಳನ್ನು ಜಿಲ್ಲೆಗೆ ತರಲಾಗಿದೆ.
ತುಮಕೂರು-ರಾಯದುರ್ಗ ರ‍್ಯೆಲು ಮಾರ್ಗ ಶೀಘ್ರ ಪೂರ್ಣಗೊಳಿಸುವಲ್ಲಿ ಸಾಕಷ್ಟು ಶ್ರಮಿಸುತ್ತಿದ್ದೆನೆ. ಜಿಲ್ಲೆಯ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮವಹಿಸಲಾಗಿದೆ. ಅನುದಾನವನ್ನು ಪ್ರಮುಖವಾಗಿ ಮೂಲಭೂತ ಸೌಕರ್ಯಗಳನ್ನು
ಒದಗಿಸಲು ಹಾಗೂ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ಸರಿಯಾಗಿ ತಲುಪಿಸಲು ಕ್ರಮವಹಿಸಬೇಕು ಎಂದರು.
ವಿವಿಧ ಯೋಜನೆಗಳ ಹಣ ಫಲಾನುಭವಿಗಳಿಗೆ ನಿಗದಿತ ಸಮಯದಲ್ಲಿ ಪಾವತಿಯಾಗಬೇಕು. ಲಿಖಿತ ರೂಪದಲ್ಲಿ ಮಾಹಿತಿ ಪಡೆದು ಸಲ್ಲಿಸಲು ಲೀಡ್ ಬ್ಯಾಂಕ್ ಮ್ಯಾನೇಜರ್‌ಗೆ ಸೂಚಿಸಿದರು. ಭದ್ರಾ ಮೇಲ್ದಂಡೆ ಯೋಜನೆಯಡಿ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಿರುವ ಮಾಹಿತಿ ಪಡೆದ ಸಚಿವರು, ಬಾಕಿ ಇರುವ ಭೂಸ್ವಾಧೀನವನ್ನು ಪೂರ್ಣಗೊಳಿಸಿ ಯೋಜನೆಯನ್ನು ಪೂರ್ಣವಾಗಿ
ಅನುಷ್ಠಾನಗೊಳಿಸುವಂತೆ ಸೂಚಿಸಿದರು.
ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ ರಾಜ್ಯದ ಹಲವಡೆ ಕಲಬೆರಕೆ ಹಾಲು ಬಳಕೆ ಕಂಡು ಬಂದಿದ್ದು, ಅಧಿಕಾರಿಗಳು ಜಿಲ್ಲೆಯಲ್ಲಿ ತಪಾಸಣೆ ಹೆಚ್ಚುಗೊಳಿಸಬೇಕು ಹಾಗೂ ಸಾರ್ವಜನಿಕರು
ಗುಣ್ಣಮಟ್ಟದಿಂದ ಕೂಡಿರುವ ನಂದಿನಿ ಹಾಲನ್ನು ಬಳಸುವಂತೆ ಕರೆ ನೀಡಿದರು.
ಶಾಸಕ ಚಿದಾನಂದ ಎಂ. ಗೌಡ ಮಾತನಾಡಿ ಎತ್ತಿನಹೊಳೆ ಯೋಜನೆ ಜಾರಿಗೊಳಿಸುವಲ್ಲಿ ರ‍್ಯೆತರ ಜಮೀನುಗಳಿಗೆ ಭೂಗತ ಕೊಳವೆ ಪೈಪ್ ಆಳವಡಿಸಲಾಗುತ್ತಿದೆ. ಆದರೆ ಯಾವುದೇ ಪರಿಹಾರ ರೈತರಿಗೆ
ಪಾವತಿಯಾಗುತ್ತಿಲ್ಲ ಎಂಬುದರ ಕುರಿತು ಸಭೆಯ ಗಮನಕ್ಕೆ ತಂದರು, ಅಧ್ಯಕರು ಮಾತನಾಡಿ ಈ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖಾಧಿಕಾರಿಗಳು ತಮ್ಮ ತಮ್ಮ
ಇಲಾಖೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬಂದಿರುವ ಅನುದಾನದ ಮಾಹಿತಿ ನೀಡಿ ಅನುದಾನವನ್ನು ಸದ್ಭಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರಗತಿ ವರದಿ ನೀಡಿದರು.
ಸಭೆಯಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಮಹಾಪೌರರಾದ ಪ್ರಭಾವತಿ ಸುಧೀಶ್ವರ್, ಕೆ.ಎ ತಿಪ್ಪೇಸ್ವಾಮಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು.ಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್, ಮಹಾನಗರ ಪಾಲಿಕೆ ಆಯುಕರು ಅಶ್ವಿಜ ಬಿ.ವಿ., ಉಪವಿಭಾಗಾಧಿಕಾರಿ ರಿಷಿ ಆನಂದ್, ಜಿಲ್ಲಾ ಪಂಚಾಯಿತ್‌ನ ಐಇಸಿ ಸಂಯೋಜಕ ಉಮೇಶ್, ಕೃಷಿ ಇಲಾಖೆಯ ಉಪ ನಿದೇರ್ಶಕರಾದ ಅಶೋಕ್, ದೀಪಶ್ರಿ, ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು,ಮತ್ತಿತರರು ಉಪಸ್ಥಿತರಿದ್ದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.