Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನನಗೀಗ 20-20 ಮ್ಯಾಚ್‌ ಆಡುವ ಜವಾಬ್ದಾರಿ

ಸುದ್ದಿಮೂಲ ವಾರ್ತೆ

ಮೈಸೂರು, ನ.19 : ಪಕ್ಷದ ಹಿರಿಯ ಮುಖಂಡ ಯತ್ನಾಳ್‌ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ ಎಂದು ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.



ಭಾನುವಾರ ಮೈಸೂರಿನಲ್ಲಿ ರಾಜಕೀಯ ಮುಖಂಡರು ಮತ್ತು ಸ್ವಾಮೀಜಿಗಳನ್ನು ಭೇಟಿ ಮಾಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರು ನೂತನ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಅಸಮಾಧಾನಗೊಂಡಿದ್ದಾರೆ ಎಂಬುದನ್ನು ತಪ್ಪಾಗಿ ಅರ್ಥೈಸಲಾಗಿದೆ. ಅವರ ಅಭಿಪ್ರಾಯವನ್ನ ಹೇಳಲು ಸ್ವತಂತ್ರರಿದ್ದಾರೆ ಎಂದು ವಾದಿಸಿದರು.

ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಅವರವರ ಅಭಿಪ್ರಾಯಗಳು, ಅನಿಸಿಕೆ ಇರುವುದು ಸಹಜ. ಎಲ್ಲರ ಅಭಿಪ್ರಾಯದ ಮೇರೆಗೆ ಕೇಂದ್ರದ ವರಿಷ್ಠರು ತೀರ್ಮಾನ ಮಾಡಿದ್ದಾರೆ. ಯತ್ನಾಳ್ ಜೀ ಕೆಲವು ವೇಳೆ ನೋವಿನಿಂದ ಮಾತನಾಡಿರಬಹುದು. ಕೆಲವು ಸಮಸ್ಯೆಗಳನ್ನು ಹೇಳಿಕೊಂಡಿರಬಹುದು. ಎಲ್ಲವನ್ನು ಹಿರಿಯರು ಕುಳಿತು ಸಮಾಲೋಚನೆ ಮಾಡಿ ಉತ್ತರ ಕಂಡುಕೊಳ್ಳುವರು ಎಂದರು.

ನನಗೀಗ ಸದ್ಯ ರಾಜಕೀಯದ 20- 20 ಮ್ಯಾಚ್ ಆಡುವ ಜವಾಬ್ದಾರಿಯನ್ನ ಪಕ್ಷ ವಹಿಸಿದೆ. ಆ ದೃಷ್ಟಿಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸುತ್ತಿದ್ದೇನೆ. ಇಂದು ನಾನು ರಾಜಕೀಯ ಮಾತನಾಡಲ್ಲ ನಾಳೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತೇನೆ ಎಂದು ಹೇಳಿದರು.

ಶಾಸಕಾಂಗ ಪಕ್ಷದ ನಾಯಕನ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಾರ ಸಾಮರ್ಥ್ಯ ಏನೆಂಬುದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರು ತೀರ್ಮಾನ ಮಾಡುತ್ತಾರೆ. ಅದನ್ನು ಆಡಳಿತ ಪಕ್ಷದವರು, ಬೇರೆ ಯಾರೂ ತೀರ್ಮಾನ ಮಾಡಲ್ಲ ಎಂದು ತಿರುಗೇಟು ನೀಡಿದರು.

ಅದ್ದೂರಿ ಸ್ವಾಗತ

ಮೈಸೂರು ನಗರ ಪ್ರವೇಶದಲ್ಲಿ ಇರುವ ಮೈಸೂರು - ಬೆಂಗಳೂರು ಹೆದ್ದಾರಿಯಲ್ಲಿರುವ ಏಟ್ರಿಯಾ ಹೋಟೆಲ್ ಗೆ ಭೇಟಿ ನೀಡಿದರು. ಈ ವೇಳೆ ಕ್ರೇನ್ ಮೂಲಕ ಹೂವಿನ ಮಳೆಗೆರೆದು ಕಾರ್ಯಕರ್ತರು, ಬೃಹತ್ ಸೇಬಿನ ಹಾರ ಹಾಕಿ, ಬೆಳ್ಳಿ ಗದೆ ನೀಡಿ ಅದ್ಧೂರಿ‌ ಸ್ವಾಗತಿಸಿದರು. ಬಳಿಕ ತೆರೆದ ವಾಹನದಲ್ಲಿ ಮೆರವಣಿಗೆ ಹೊರಟ ಬಿ.ವೈ.ವಿಜಯೇಂದ್ರ‌. ಸಂಸದ ಪ್ರತಾಪ್ ಸಿಂಹ ಸೇರಿ‌ ಗಣ್ಯರಿಂದ ಸ್ವಾಗತ. ಮಾಜಿ ಶಾಸಕರು, ಸಂಸದ ಪ್ರತಾಪ್‌ ಸಿಂಹ ಮತ್ತಿತರರರು ಇದ್ದರು.

ಆಶ್ರಮಕ್ಕೆ ಭೇಟಿ

ಮೈಸೂರು ನಂಜನಗೂಡು ಮುಖ್ಯ ರಸ್ತೆಯಲ್ಲಿರುವ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ವಿಜಯೇಂದ್ರ ಭೇಟಿ ನೀಡಿ, ಸ್ವಾಮಿಗಳ ಆಶೀರ್ವಾದ ಪಡೆದರು. ಅಲ್ಲದೇ ಹಿರಿಯ ಮುಖಂಡರಾದ ಸಂಸದ ಶ್ರೀನಿವಾಸ್‌ಪ್ರಸಾದ್‌ ಅವರನ್ನು ಸಹ ಭೇಟಿ ಮಾಡಿ ಮಾತುಕತೆ ನಡೆಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ