Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾನೂನುಗಳ ಅರಿವು ಮೂಡಿಸಿದ ನ್ಯಾ. ಅರುಣ್ ಕುಮಾರ್ 

ಸುದ್ದಿಮೂಲ ವಾರ್ತೆ

ಹೊಸಕೋಟೆ, ಜು 23 : ದೇಶದಲ್ಲಿ ಪ್ರತಿಯೊಬ್ಬರಿಗೂ ಪ್ರತಿಯೊಂದು ವಿಚಾರದಲ್ಲೂ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಲು ಕಾನೂನಿದ್ದು, ಅದರ ಬಳಕೆಯನ್ನು ನಾವೇ ಮಾಡಿಕೊಳ್ಳಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಅರುಣ್ ಕುಮಾರ್.ಜಿ ತಿಳಿಸಿದರು.

ತಾಲೂಕಿನ ಕುಂಬಳಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ

ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಫೋಕ್ಸೋ ಕಾಯ್ದೆ ಪ್ರತಿ ಹಂತದಲ್ಲೂ ಹೆಣ್ಣು ಮಕ್ಕಳ ಹಿತಾಸಕ್ತಿಯನ್ನು ಕಾಪಾಡಲಿದೆ. ಪೋಕ್ಸೋ ಕಾಯ್ದೆ ಸಾಕಷ್ಟು ಬಲಿಷ್ಠವಾಗಿದ್ದರೂ ಕೂಡ ಸಾಕಷ್ಟು ಪೋಕ್ಸೋ ಪ್ರಕರಣಗಳು ವರದಿಯಾಗುತ್ತಿವೆ. ಪ್ರಕರಣ ತಡೆಗಟ್ಟಲು ಹಾಗೂ ದೌರ್ಜನಕ್ಕೊಳಗಾದ ಮಕ್ಕಳಿಗೆ ಸೂಕ್ತ ರಕ್ಷಣೆ ಪಡೆಯಲು ಕಾಯ್ದೆ

ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಜೆಎಂಎಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾ. ಬಸವರಾಜ್ ಜಿ ಸನದಿ ಮಾತನಾಡಿ, ಮನುಷ್ಯನ ರಕ್ಷಣೆಗಾಗಿ ಹಲವಾರು ಕಾನೂನುಗಳಿದ್ದರೂ ಕೂಡ ಕಾಲಕ್ಕೆ ಹಾಗೂ ಸಂದರ್ಭಕ್ಕೆ ತಕ್ಕಂತೆ ಬದಲಾಗುತ್ತವೆ. ಆ ಕಾನೂನುಗಳ ಬಗ್ಗೆ ಅರಿವು ಮೂಡಿಸುವ ದೃಷ್ಠಿಯಿಂದ ಸರ್ಕಾರದ ಆದೇಶದಂತೆ ಶಾಲೆಗಳಿಗೆ ತೆರಳಿ ಕಾನೂನು ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೆವೆ. ಮಕ್ಕಳು ಎಂತಹ ಸಂದಿಗ್ದ ಪರಿಸ್ಥಿತಿಯಲ್ಲೂ ತಮ್ಮನ್ನು ತಾವು ರಕ್ಷಿಸಿಕೊಳ್ಳುವುದನ್ನು ಕರಗತ ಮಾಡಿಕೊಂಡಿರಬೇಕು. ಮೊದಲು ದೈಹಿಕವಾಗಿ, ಮಾನಸಿಕವಾಗಿ ಸದೃಡರಾಗಿರಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಕೂಡ ಮಕ್ಕಳಿಗೆ ಶಿಕ್ಷಣದ ಜೊತೆಗೆ ವೃದ್ದಿಸಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಟಸ್ವಾಮಿ, ಉಪಾಧ್ಯಕ್ಷ ಕೆ.ನಾಗರಾಜ್, ಪ್ರ.ಕಾರ್ಯದರ್ಶಿ ಎಂ.ವಿ.ನವೀನ್ ಕುಮಾರ್, ಜಂಟಿ ಕಾರ್ಯದರ್ಶಿ ಟಿ.ಕೆ.ಮುನಿರಾಜು, ಖಜಾಂಚಿ ರವಿಕುಮಾರ್, ಸಂಪನ್ಮೂಲ ವ್ಯಕ್ತಿ ಅನಿತಾ ನಾಗರಾಜ್, ಮುಖ್ಯ ಶಿಕ್ಷಕಿ ಅನಸೂಯಮ್ಮ, ದೈಹಿಕ ಶಿಕ್ಷಕ ರಾಜೇಶ್, ಸಹ ಶಿಕ್ಷಕಿಯರಾದ ವಿದ್ಯಾ, ಆಶಾ,ಪುಷ್ಪರಾಣಿ, ಸುವರ್ಣ ಹಾಜರಿದ್ದರು.

 

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ