ಬೆಂಗಳೂರು ಉಪನಗರ ರೈಲ್ವೆ ಕಾಮಗಾರಿ ವೀಕ್ಷಣೆ
ಬೆಂಗಳೂರು ಉಪನಗರ ರೈಲ್ವೆ ಯೋಜನೆಯ ಚಿಕ್ಕಬಾಣಾವಾರ- ಬೆನ್ನಿಗಾನಹಳ್ಳಿ ನಡುವಿನ ಕಾಮಗಾರಿಯನ್ನು ವೀಕ್ಷಿಸಿದೆ. ಸರ್ವಜ್ಞನಗರ ಶಾಸಕರು ಹಾಗೂ ಇಂಧನ ಸಚಿವರಾದ ಶ್ರೀ ಕೆ.ಜೆ.ಜಾರ್ಜ್, ಶಾಸಕ ಮುನಿರತ್ನ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶ್ರೀ ಗೌರವ ಗುಪ್ತ ಸೇರಿದಂತೆ ಇತರ ಅಧಿಕಾರಿಗಳು ಜೊತೆಗಿದ್ದರು.
ಶ್ರೀ ಜಾರ್ಜ್ ಅವರ ಕ್ಷೇತ್ರವ್ಯಾಪ್ತಿಯ ಲಿಂಗರಾಜಪುರದಲ್ಲಿ ರೈಲ್ವೆ ತಡೆಗೋಡೆ, ಸೋಂಪುರದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿಗಳನ್ನು ಪರಿಶೀಲಿಸಿದೆವು. ಬಳಿಕ ಹೆಬ್ಬಾಳದಲ್ಲಿ ಉದ್ದೇಶಿತ ರೈಲ್ವೆ ನಿಲ್ದಾಣದ ಕಾಮಗಾರಿ ವೀಕ್ಷಣೆ ಮಾಡಿದೆವು. ಯಶವಂತಪುರದಲ್ಲಿ ಪರಿವೀಕ್ಷಣೆ ನಂತರ ಕಾಂಕ್ರೀಟ್ ಮಿಕ್ಸಿಂಗ್ ಪ್ಲಾಂಟ್ ಗೆ ಚಾಲನೆ, ಗುಣಮಟ್ಟ ಪರಿಶೀಲಿಸುವ ಪ್ರಯೋಗಾಲಯ ವೀಕ್ಷಿಸಿದೆ.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.