Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಒಂದಲ್ಲಾ ಒಂದು ದಿನ ಕನಕಪುರ ಬೆಂಗಳೂರಿಗೆ ಸೇರುತ್ತದೆ

ಸುದ್ದಿಮೂಲ ವಾರ್ತೆ

ರಾಮನಗರ, ಅ.24: ಕನಕಪುರ ಬೆಂಗಳೂರು ಸೇರುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡುವುದು ರಾಮನಗರ ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಕನಕಪುರ ತಾಲ್ಲೂಕಿನ ಶಿವನಹಳ್ಳಿ ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಭೂಮಿ ಪೂಜೆ ಮತ್ತು ಶಿಲಾ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಕನಕಪುರ ಬೆಂಗಳೂರು ಸೇರುತ್ತದೆ, ಬೆಂಗಳೂರಿಗರಿಗೆ ನಿಮ್ಮ ಭೂಮಿ ಮಾರಾಟ ಮಾಡಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿವಿಮಾತು ಹೇಳಿದರು. ಡಿಸಿಎಂ ಹೇಳಿಕೆ ಬೆನ್ನಲ್ಲೇ ರಾಮನಗರದಿಂದ ಕನಕಪುರ ಕೈತಪ್ಪುತ್ತದೆಯೇ ಎಂಬ ಚರ್ಚೆಗಳು ಆರಂಭವಾಗಿವೆ.

ಶಿವಕುಮಾರ್ ಹೇಳಿದ್ದೇನು?

ಶಿವನಹಳ್ಳಿ ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಭೂಮಿ ಪೂಜೆ ಮತ್ತು ಶಿಲಾ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು "ಕೆಎಂಎಫ್ ಡೇರಿ ಇದೆ, ಕನಕಪುರ ಪಟ್ಟಣವಾಗಿ ಇಲ್ಲಿಯ ತನಕ ಬೆಳೆಯಲಿದೆ ಆದ್ದರಿಂದ, ಎಲ್ಲರಲ್ಲಿ ಮನವಿ ಮಾಡುತ್ತೇನೆ, ಭೂಮಿ ಮಾರಾಟ ಮಾಡಬೇಡಿ. ಸಿಂಧ್ಯಾ ಅವರು ಇದನ್ನೇ ದಶಕಗಳಿಂದ ಹೇಳುತ್ತಾ ಬಂದಿದ್ದರು ಎಂದರು.

ನಿಮ್ಮ ಜೇಬಿಗೆ ನಾನು ನೇರವಾಗಿ ದುಡ್ಡು ಹಾಕಲು, ಮನೆ ಕಟ್ಟಿಸಿಕೊಡಲು ಆಗುವುದಿಲ್ಲ, ನಿಮ್ಮ ಆಸ್ತಿ ಮೌಲ್ಯಗಳನ್ನ ಹತ್ತು ಪಟ್ಟು ಹೆಚ್ಚು ಮಾಡುವ ಶಕ್ತಿ ದೇವರು ನೀಡಿದ್ದಾನೆ. ನಿಮ್ಮ ಮಕ್ಕಳು, ಮೊಮ್ಮಕ್ಕಳಿಗೆ ವಿದ್ಯೆ ನೀಡಬಹುದು ಅಷ್ಟೇ. ಕನಕಪುರದವರು ರಾಮನಗರ ಜಿಲ್ಲೆಯವರಲ್ಲ, ಬೆಂಗಳೂರು ಜಿಲ್ಲೆಯವರು ಎಂಬುದನ್ನು ನೆನಪಿನಲ್ಲಿ ಇಟ್ಟುಕೊಳ್ಳಿ ಎಂದು ಕಿವಿಮಾತು ಹೇಳಿದರು.

ಒಂದಲ್ಲ ಒಂದು ದಿನ ಇಲ್ಲಿನ ಗ್ರಾಮಗಳು ಬೆಂಗಳೂರು ಆಗೇ ಆಗುತ್ತವೆ, ಪ್ರತಿ ಅಡಿ ಲೆಕ್ಕದಲ್ಲಿ ಬೆಲೆ ಕಟ್ಟಲಾಗುತ್ತದೆ. ಆದ ಕಾರಣ ನನ್ನ ಮಾತನ್ನು ನೆನಪಿನಲ್ಲಿ ಇಟ್ಟುಕೊಳ್ಳಿ, ಕನಕಪುರ ಜಿಲ್ಲಾ ಕೇಂದ್ರ ಮಾಡುವ ಕುರಿತು ಸಾರ್ವಜನಿಕವಾಗಿ ಚರ್ಚೆ ಮಾಡಲು ಹೋಗುವುದಿಲ್ಲ ಎಂದರು.

ತಮ್ಮ ಖಜಾನೆ ತುಂಬಿಸಿಕೊಳ್ಳುವ ಹುನ್ನಾರ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆಯಿಂದ ಕನಕಪುರ ತಾಲೂಕನ್ನು ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ನೀಡಿರುವ ಹೇಳಿಕೆ ಸರಿಯಲ್ಲ. ಕನಕಪುರ ಸುತ್ತಮುತ್ತ ಇರುವ ತಮ್ಮ ಆಸ್ತಿಗಳ ಮೌಲ್ಯವನ್ನು ಹೆಚ್ಚಿಸಿಕೊಂಡು ತಮ್ಮ ಖಜಾನೆ ವೃದ್ಧಿ ಮಾಡಿಕೊಳ್ಳುವ ಏಕೈಕ ದುರುದ್ದೇಶದಿಂದ ಅವರು ಕನಕಪುರ ಜನರ ನೆಪ ಹೇಳಿಕೊಂಡು ಈ ಹೊಸ ನಾಟಕ ಶುರು ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

ಕನಕಪುರದವರು ರಾಮನಗರ ಜಿಲ್ಲೆಯವರಲ್ಲ, ಬೆಂಗಳೂರು ಜಿಲ್ಲೆಯವರು ಎಂಬುದನ್ನು ನೆನಪಿಟ್ಟುಕೊಳ್ಳಿ ಎನ್ನುವ ಅವರ ಮಾತು ರಾಮನಗರ ಜಿಲ್ಲೆಗೆ ಎಸಗುವ ಮಹಾದ್ರೋಹ. ಅಷ್ಟೇ ಅಲ್ಲ; ಕನಕಪುರ ಜನರಿಗೆ ಮಂಕುಬೂದಿ ಎರಚುವ ಹುನ್ನಾರ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನಕಪುರ ಸುತ್ತಮುತ್ತ ಯಾರ ಆಸ್ತಿಗಳಿವೆ? ಅದರಲ್ಲಿ ಬೇನಾಮಿಗಳು ಎಷ್ಟು? ಎಲ್ಲೆಲ್ಲಿ ಅಕ್ರಮವಾಗಿ ಬೇಲಿ ಹಾಕಲಾಗಿದೆ? ಅವೆಲ್ಲಾ ಅಕ್ರಮಗಳನ್ನು ಸಕ್ರಮ ಮಾಡಿಕೊಳ್ಳಲು ಬೆಂಗಳೂರು ಸೇರ್ಪಡೆಯ ನಾಟಕವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಟಾಂಗ್ ನೀಡಿರುವ ಎಚ್‌ಡಿಕೆ ಕನಕಪುರ ತಾಲ್ಲೂಕು ರಾಮನಗರ ಕ್ಷೇತ್ರದಲ್ಲಿಯೇ ಉಳಿಯಬೇಕು ಎಂದು ಎಂದು ಹೇಳಿದ್ದಾರೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ