Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಒಂದು ಲಕ್ಷ ಎಕರೆ ಅರಣ್ಯ ಒತ್ತುವರಿ: ಖಂಡ್ರೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.5: ರಾಜ್ಯದಲ್ಲಿ ಲಕ್ಷ ಎಕರೆಗೂ ಹೆಚ್ಚು ಅರಣ್ಯ ಭೂಮಿ ಒತ್ತುವರಿ ಆಗಿದ್ದು, ಅರಣ್ಯ ಭೂಮಿ ಮತ್ತು ಅರಣ್ಯ ಸಂಪತ್ತು ಕಾಪಾಡಲು ಎಲ್ಲ ಸಾಧ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಕಳೆದ 30ರಂದು ನಿವೃತ್ತರಾದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯಪಡೆ ಮುಖ್ಯಸ್ಥ ರಾಜೀವ್ ರಂಜನ್ ಅವರ ಸ್ಥಾನದಲ್ಲಿ ಅಧಿಕಾರ ವಹಿಸಿಕೊಂಡ ನೂತನ ಅರಣ್ಯ ಪಡೆ ಮುಖ್ಯಸ್ಥ ಬ್ರಿಜೇಶ್ ಕುಮಾರ್ ದೀಕ್ಷಿತ್ ಅವರು ಸಚಿವರನ್ನು ಭೇಟಿ ಮಾಡಿದಾಗ ಈ ಸೂಚನೆ ನೀಡಿದ್ದಾರೆ.

ನೂತನವಾಗಿ ಅರಣ್ಯ ಪಡೆ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಬ್ರಿಜೇಶ್ ಕುಮಾರ್ ದೀಕ್ಷಿತ್ ಅವರಿಗೆ ಸಚಿವರು ಶುಭಕೋರಿದರು.

ರಾಜ್ಯದಲ್ಲಿ ಈ ಬಾರಿ ಮಳೆಯ ಕೊರತೆಯಾಗಿದ್ದು, ವನ್ಯಜೀವಿಗಳು ಆಹಾರ ಮತ್ತು ನೀರು ಅರಸಿ ನಾಡಿಗೆ ಬಂದು ಜೀವಹಾನಿ, ಬೆಳೆಹಾನಿ ಮಾಡುವುದನ್ನು ತಡೆಯಲು ಅರಣ್ಯದೊಳಗೆ ಮೇವು ಮತ್ತು ನೀರು ಲಭ್ಯವಾಗುವಂತೆ ಕ್ರಮ ವಹಿಸುವಂತೆ ಎಲ್ಲ ವಲಯಗಳಿಗೆ ಸೂಚಿಸುವಂತೆ ಸಚಿವರು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು, ಕೊಣಾಜೆ, ಸುಬ್ರಹ್ಮಣ್ಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಮರಳಿಸುವಂತೆ ಮತ್ತು ನಾಡಿಗೆ ಬಾರದಂತೆ ಕ್ರಮ ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಸಚಿವ ಈಶ್ವರ ಖಂಡ್ರೆ ಸುಳ್ಯ ಶಾಸಕರಿಗೆ ಭರವಸೆ ನೀಡಿದರು.

ಬೆಂಗಳೂರಿನ ವಿಕಾಸಸೌಧದ ಕಚೇರಿಯಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಮನವಿ ಸ್ವೀಕರಿಸಿದ ಸಚಿವರು, ಈ ವರ್ಷ ಮಳೆಯ ಪ್ರಮಾಣ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ನೀರು, ಆಹಾರ ಅರಸಿ ಆನೆಗಳು ಕಾಫಿ ತೋಟಗಳಿಗೆ ಬರುತ್ತಿವೆ. ಆನೆಗಳು ನಾಡಿಗೆಬಾರದಂತೆ ತಡೆಯಲು ರೈಲ್ವೆ ಬ್ಯಾರೀಕೇಡ್ ನಿರ್ಮಾಣವೇ ಪರಿಹಾರವಾಗಿದ್ದು, ಆದ್ಯತೆಯ ಮೇಲೆ ಈ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಅರಣ್ಯದೊಳಗೆ ಆನೆಗಳಿಗೆ ನೀರು ಆಹಾರ ಸಿಗುವಂತೆ ಕ್ರಮ ವಹಿಸಲೂ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ