Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್ಲರಿಗೂ ಒಂದೇ ಕಾನೂನು: ಸಿಎಂ ಬೊಮ್ಮಾಯಿ

ಬೆಂಗಳೂರು, ಮಾರ್ಚ್ 25: ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ರಾಹುಲ್ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದಿಲ್ಲ. ದೇಶದಲ್ಲಿ ಕಾನೂನು ವ್ಯವಸ್ಥೆಯಿದ್ದು ಕಾನೂನಿನ ಪ್ರಕಾರ ಎಲ್ಲಾ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮಾಧ್ಯಮದವರಿಗೆ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಏನು ಮಾತನಾಡಿದರೂ ನಡೆಯುತ್ತದೆ ಎನ್ನುವ ಭಾವನೆ ಇದೆ . ಅವರಿಗೆ ಸರಿಪಡಿಸಿಕೊಳ್ಳಲು ಅವಕಾಶವಿತ್ತು. ಆದರೆ ಅವರು ಸರಿಪಡಿಸಿಕೊಳ್ಳಲಿಲ್ಲ. ವಿರೋಧ ಪಕ್ಷದದವರನ್ನ ಚುನಾವಣೆಯಲ್ಲಿ ಸೋಲಿಸಬೇಕು ಅಥವ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು. ಅದು ಬಿಟ್ಟು ಹಾದಿಬೀದಿಯಲ್ಲಿ ವೈಯಕ್ತಿಕ ನಿಂಧನೆ ಮಾಡಿ ಮಾತನಾಡಿದರೆ, ಖಂಡಿತವಾಗಿಯೂ ಅದಕ್ಕೆ ಕಾನೂನು ಇದೆ ಎಂದರು.

ರಾಹುಲ್ ಗಾಂಧಿ ಕೇವಲ ವ್ಯಕ್ತಿಯ ವಿರುದ್ಧ ಅಲ್ಲ ಒಂದು ವರ್ಗದ ವಿರುದ್ಧ ಮಾತನಾಡಿದ್ದಾರೆ. ಬಹಳ ಜನರಿಗೆ ಇದರಿಂದ ನೋವಾಗಿದೆ. ಅವರಲ್ಲರೂ ಪ್ರಕರಣ ದಾಖಲಿಸಿ ನ್ಯಾಯಾಲಯ ತೀರ್ಪು ನೀಡಿದೆ ಎಂದರು.

ಕಾದು ನೋಡಿ

ಕಾಂಗ್ರೆಸ್ ನಿಂದ ಮೊದಲ ಪಟ್ಟಿ ಬಿಡುಗಡೆಯಾಗಿರುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ. ಅದರಲ್ಲಿ ಹೊಸತನವೇನಿಲ್ಲಾ

ಬಿಜೆಪಿ ಪಟ್ಟಿ ಬಿಡುಗಡೆ ಕುರಿತು ಕಾದು ನೋಡಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆ ನಿಶ್ಚಿತ

ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದು, 10 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಪ್ರಧಾನಿ ಮೋದಿ ಯವರು ಬಿಜೆಪಿಯ ವಿಜಯದ ಕಹಳೆಯನ್ನು ಊದಲಿದ್ದಾರೆ ಎಂದರು. ದಾವಣಗೆರೆಯಿಂದ ವಿಜಯದ ಯಾತ್ರೆ ಪ್ರಾರಂಭವಾಗಲಿದ್ದು, ಪ್ರಧಾನಿ ಮೋದಿಯ ದೊಡ್ಡ ಬಲ ನಮಗೆ ಇದೆ. ಡಬಲ್ ಇಂಜಿನ್ ಸರ್ಕಾರದ ಒಳ್ಳೆಯ ಕೆಲಸ ಇಟ್ಟುಕೊಂಡು ಜನರ ಆಶಿರ್ವಾದ ಪಡೆಯುತ್ತೇವೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಯಾಗುವುದು ನಿಶ್ಚಿತ. ಮೇ ತಿಂಗಳಲ್ಲಿ ಮತ್ತೊಮ್ಮೆ ವಿಜಯೋತ್ಸವಕ್ಕೆ ಮೋದಿಯವರನ್ನ ಕರೆಯುತ್ತೇವೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ