Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ: ಒಂದು ಬಾರಿ ಅನ್ವಯವಾಗುವಂತೆ ಅವಕಾಶ ಸರ್ಕಾರಿ ನೌಕರಿಗೆ 3 ವರ್ಷ ವಯೋಮಿತಿ ಸಡಿಲಿಕೆ

ಸುದ್ದಿಮೂಲ ವಾರ್ತೆ ಬೆಂಗಳೂರು , ಸೆ.29:
ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಮೂಲಕ ನಡೆಸುವ ನೇರ ನೇಮಕಾತಿಗಳಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಮೂರು ವರ್ಷ ಸಡಿಲಿಕೆ ಮಾಡಿ ಆದೇಶ ಹೊರಡಿಲಾಗಿದೆ.
ಕನಿಷ್ಠ ಐದು ವರ್ಷ ವಯೋಮಿತಿ ಸಡಿಲಿಕೆ ಮಾಡಬೇಕು ಎಂದು ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಹಾಗೂ ವಿದ್ಯಾಾರ್ಥಿ ಸಂಘಟನೆಗಳ ಆಗ್ರಹವಿತ್ತು. ಸರ್ಕಾರ ಈಗ ಅಂತಿಮವಾಗಿ ಮೂರು ವರ್ಷಗಳ ವಯೋಮಿತಿ ಸಡಿಲ ಮಾಡಿರುವುದು ಉದ್ಯೋೋಗಾಂಕ್ಷಿಗಳಿಗೆ ತುಸು ನೆಮ್ಮದಿ ಮೂಡಿಸಿದೆ.
ಕೋವಿಡ್ ಹಾಗೂ ಒಳ ಮೀಸಲಾತಿ ಕಾರಣದಿಂದ ಸರ್ಕಾರವು ಸರಿಯಾದ ನೇಮಕಾತಿ ಅಧಿಸೂಚನೆ ಹೊರಡಿಸಿಲ್ಲ. ಆದ್ದರಿಂದ ಸರ್ಕಾರ ಕನಿಷ್ಠ ಐದು ವರ್ಷ ವಯೋಮಿತಿ ಸಡಿಲಿಕೆ ಮಾಡಬೇಕು ಎಂದು ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಹಾಗೂ ವಿದ್ಯಾಾರ್ಥಿ ಸಂಘಟನೆಗಳು ಆಗ್ರಹಿಸಿದ್ದವು. ಆದರೆ, ಸರ್ಕಾರ ಮೂರು ವರ್ಷ ಸಡಿಲಿಕೆ ಮಾಡಿರುವುದು ವಿದ್ಯಾಾರ್ಥಿಗಳಲ್ಲಿ ಅಸಮಾಧಾನ ಹೆಚ್ಚಾಾಗುವಂತೆ ಮಾಡಿದೆ.
ಆದೇಶದಲ್ಲಿ ಇರುವುದೇನು?
ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಾಕ್ ಲಾಗ್ ಹುದ್ದೆ ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆ ಮಾಡದಂತೆ 2024 ಅ.28 ರಂದು ಎಲ್ಲಾ ನೇಮಕಾತಿ ಪ್ರಾಾಧಿಕಾರಗಳಿಗೆ ಸೂಚಿಸಲಾಗಿತ್ತು.
ನ್ಯಾಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಆ. 25ರ ಸರ್ಕಾರದ ಆದೇಶದಲ್ಲಿ ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಿಗೆ ಪ್ರವರ್ಗ- ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಿತ್ತು. ಶಿಕ್ಷಣ ಮತ್ತು ಉದ್ಯೋೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇ. 17 ರಷ್ಟು ಮೀಸಲಾತಿಯನ್ನು ಪ್ರವರ್ಗ-ಎ ರಲ್ಲಿನ ಸಮುದಾಯಗಳಿಗೆ ಶೇ. 6 ರಷ್ಟು, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇ. 6 ರಷ್ಟು ಮತ್ತು ಪ್ರವರ್ಗ - ಸಿ ಯಲ್ಲಿ ಸಮುದಾಯಗಳಿಗೆ ಶೇ. 5 ರಷ್ಟು ನಿಗದಿಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿತ್ತು.
ಎರಡು ವರ್ಷ ಸಡಿಲಿಕೆ ನೀಡಿದ್ದ ಸರ್ಕಾರ
ಕಳೆದೊಂದು ವರ್ಷದಿಂದ ಯಾವುದೇ ನೇಮಕಾತಿ ನಡೆಯದಿರುವ ಕಾರಣ ನೇರ ನೇಮಕಾತಿ ಪ್ರಕ್ರಿಿಯೆಯಲ್ಲಿ ಆಯ್ಕೆೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಕ್ರಮವಾಗಿ ಸೆ.6 ರಿಂದ 2027 ಡಿ. 31 ರವರೆಗೆ ಹೊರಡಿಸುವ ಎಲ್ಲಾ ನೇಮಕಾತಿಗಳಿಗೂ 2 ವರ್ಷಗಳ ಸಡಿಲಿಕೆ ನೀಡಲು ಸರ್ಕಾರ ತೀರ್ಮಾನಿಸಿತ್ತು.
ಈ ಮಧ್ಯೆೆ ರಾಜ್ಯ ಸರ್ಕಾರ ಎರಡು ವರ್ಷ ವಯೋಮಿತಿ ಸಡಿಲಕೆ ಮಾಡಿದ ನಂತರ ಹಲವಾರು ಜನಪ್ರತಿನಿಧಿಗಳು ಮತ್ತು ಸಂಘ ಸಂಸ್ಥೆೆಗಳು ಮನವಿ ಸಲ್ಲಿಸಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ನೀಡುವಂತೆ ಕೋರಿದ್ದರು. ಈ ಎಲ್ಲಾ ಮನವಿಗಳನ್ನು ಸರ್ಕಾರ ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ಮಾಡಲು ತೀರ್ಮಾನಿಸಿದೆ.
ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 2027 ಡಿ.31 ರವರೆಗೆ ನಡೆಯುವ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆೆ ಪ್ರಕ್ರಿಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ ಮೂರು ವರ್ಷಗಳ ಸಡಿಲಿಕೆ ನೀಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸರ್ಕಾರದ ವಿಶೇಷ ಕಾರ್ಯದರ್ಶಿ ಆದೇಶ ಹೊರಡಿಸಿ ಆದೇಶಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ