Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನಲ್ಲಿ ಜುಲೈ 16 ರಂದು ದಿವ್ಯಾಂಗರ ಅಂಗ ಮಾಪನ ಶಿಬಿರ – ಸಚಿವ ಬಿ. ನಾಗೇಂದ್ರ ಭಾಗಿ

ಬೆಂಗಳೂರು, ಜು, 14; ಉದಯ್‌ ಪುರದ ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಸ್ವಯಂ ಸೇವಾ ಸಂಸ್ಥೆ ನಾರಾಯಣ್‌ ಸೇವಾ ಸಂಸ್ಥಾನ್‌ ನಿಂದ ಜುಲೈ 16 ರಂದು ಬೆಂಗಳೂರಿನಲ್ಲಿ ದಿವ್ಯಾಂಗರಿಗೆ ಹೊಂದಿಕೆಯಾಗುವಂತೆ ಅಂಗಾಂಗ ಜೋಡಣೆಗಾಗಿ ಅಂಗಾಂಗ ಮಾಪನ ಶಿಬಿರ ಆಯೋಜಿಸಲಾಗಿದೆ. ವಿಶೇಷವಾಗಿ ಕರ್ನಾಟಕದ ಜನರಿಗಾಗಿ ಈ ಬೃಹತ್‌ ಶಿಬಿರ ಏರ್ಪಡಿಸಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾರಾಯಣ್‌ ಸೇವಾ ಸಂಸ್ಥಾನದ ಸಾರ್ವಜನಿಕ ಸಂಪರ್ಕಾಧಿಕಾರಿ ಭಗವಾನ್‌ ಪ್ರಸಾದ್‌ ಗೌರ್‌, ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ, ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ತೇಜಸ್ವಿನಿ ಅನಂತ್ ಕುಮಾರ್, ಆಚಾರ್ಯ ವಿಮಲ್ ಸಾಗರ್ ಮಹಾರಾಜ್ ಅವರು ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಅರ್ಹ ಫಲಾನುಭವಿಗಳಿಗೆ ಹೊಂದಿಕೆಯಾಗುವಂತೆ ಕೃತಕ ಅಂಗಾಂಗಗಳ ಅಳತೆ ತೆಗೆದುಕೊಂಡು ನಂತರ ಸಿದ್ಧಪಡಿಸಿ ಇನ್ನೊಂದು ತಿಂಗಳಲ್ಲಿ ನಡೆಯಲಿರುವ ಬೃಹತ್‌ ಶಿಬಿರದಲ್ಲಿ ಅಳವಡಿಸಲಾಗುವುದು ಎಂದರು.

ಕಳೆದ 38 ವರ್ಷಗಳಿಂದ ಅಪಘಾತ ಮತ್ತಿತರ ಅವಘಡಗಳಲ್ಲಿ ಅಂಗಾಂಗ ಕಳೆದುಕೊಂಡವರಿಗೆ ಕೃತಕ ಅಂಗಾಂಗ ಜೋಡಣೆ ಮಾಡುತ್ತಿದ್ದು, ಬೆಂಗಳೂರಿನ ವಿವಿಪುರದಲ್ಲಿರುವ ಅರಸೋಜಿ ರಾವ್‌ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿಶೇಷ ಚೇತನರಿಗೆ ಪರಿಣಿತ ವೈದ್ಯರು ಅಳವಡಿಕೆಮಾಡಲಿರುವ ಅಂಗಾಂಗಗಳ ಅಳತೆ ತೆಗೆದುಕೊಳ್ಳಲಿದ್ದಾರೆ. ಇದು ನಾರಾಯಣ್‌ ಸೇವಾ ಸಂಸ್ಥಾನ್‌ ನ 988 ನೇ ಶಿಬಿರವಾಗಿದ್ದು, ಶೀಘ್ರದಲ್ಲೇ ಈ ಸಂಖ್ಯೆ ಸಾವಿರದ ಗಡಿ ದಾಟಲಿದೆ ಎಂದರು.

ನಾರಾಯಣ್‌ ಸೇವಾ ಸಂಸ್ಥಾನ್‌ ನ ವಕ್ತಾರ ರಜತ್‌ ಗೌರ್‌ ಮಾತನಾಡಿ, ಸಂಸ್ಥೆಯ ಅನುಭವಿ ಮೂಳೆ ತಜ್ಞರು, ಪ್ರಾಸ್ತೆಟಿಕ್ ವೈದ್ಯರ ತಂಡದಿಂದ ವಿಕಲಚೇತನರಿಗಾಗಿ ಆರೈಕೆ ಜೊತೆಗೆ ಅಂಗಾಂಗ ಅಳವಡಿಸಲು ನೆರವು ನೀಡಲಾಗುವುದು. ರೋಗಿಗಳು ತಮ್ಮ ಅಗತ್ಯತೆಗಳಿಗೆ ಅನುಗುಣವಾಗಿ ಉತ್ತಮ ಗುಣಮಟ್ಟದ ಹಗುರ ಮತ್ತು ದೀರ್ಘಕಾಲ ಬಾಳಿಕೆ ಬರುವ ಕೃತಕ ಅಂಗಾಂಗಳನ್ನು ತಯಾರಿಸಿ ಅಳವಡಿಸಲಾಗುವುದು ಎಂದರು.

ಶಿಬಿರದ ಸಮನ್ವಯಕಾರ ರೋಹಿತ್‌ ತಿವಾರಿ ಮಾತನಾಡಿ, ಫಲಾನುಭವಿಗಳು ಶಿಬಿರಕ್ಕೆ ಆಧಾರ್‌ ಕಾರ್ಡ್‌, ವಿಕಲಚೇತನ ಇಲಾಖೆ ನೀಡಿರುವ ಪ್ರಮಾಣ ಪತ್ರ, ತಮ್ಮ ಅಂಗಾಂಗ ನ್ಯೂನತೆ ಪ್ರತಿಬಿಂಬಿಸುವ ಎರಡು ಭಾವಚಿತ್ರ ತರಬೇಕು. ಶಿಬಿರದಲ್ಲಿ ಉಚಿತ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ