Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತಮ ಆಡಳಿತ ನೀಡುವುದು ನಮ್ಮ ಗುರಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಸುದ್ದಿಮೂಲ ವಾರ್ತೆ

ತಿಪಟೂರು,ಆ. 28 : ಸಮಾಜದಲ್ಲಿ ಯಾರು ಸೇವೆ ಮಾಡುತ್ತಾರೆಯೋ ಅವರನ್ನು ಜನ ಗುರುತಿಸುತ್ತಾರೆ ಎಂಬುದಕ್ಕೆ ಆಂಜನೇಯನೇ ಸಾಕ್ಷಿ. ಪೂಜ್ಯರ ಹಾಗೂ ಶಿವಾಚಾರ್ಯರು ನನ್ನ ಮೇಲಿಟ್ಟಿರುವ ನಂಬಿಕೆಯ ಜೊತೆಗೆ ನಮ್ಮ ಜನತೆ ನೀಡಿರುವ ಜವಾಬ್ದಾರಿಯನ್ನು ಅತ್ಯಂತ ನಂಬಿಕಾರ್ಹನಾಗಿ ಜನರ ನಿರೀಕ್ಷೆಗಿಂತಲೂ ಉತ್ತಮ ಆಡಳಿತವನ್ನು ನೀಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ತಾಲೂಕಿನ ನೊಣವಿನಕೆರೆಯಲ್ಲಿ ಕರುವಗಲ್ ಆಂಜನೇಯಸ್ವಾಮಿ ನೂತನ ದೇವಾಲಯದ ಉದ್ಘಾಟನಾ ಮಹೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಧರ್ಮಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಶ್ರೀರಾಮನ ತಂದೆ ದಶರಥ ಮಹಾರಾಜನ ದೇವಸ್ಥಾನ ಎಲ್ಲೂ ಕಂಡುಬರುವುದಿಲ್ಲ. ಸ್ವತಃ ಶ್ರೀರಾಮನ ದೇವಾಲಯಗಳಿಗಿಂತ ಹೆಚ್ಚಾಗಿ ರಾಮಭಕ್ತ ಆಂಜನೇಯನ ದೇವಸ್ಥಾನಗಳನ್ನು ಜನ ನಿರ್ಮಿಸಿದ್ದಾರೆ ಎಂದರೆ ರಾಮನ ಸೇವೆಗೆ ಮುಡಿಪಾಗಿದ್ದ ಆಂಜನೇಯನ ಭಕ್ತಿ ಮತ್ತು ಸೇವೆಗೆ ಮೆಚ್ಚಿ ಎಂದು ಅಭಿಪ್ರಾಯಪಟ್ಟರು.

ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಶಕ್ತಿ ಬಹಳಷ್ಟು ಜನರಿಗೆ ಗೊತ್ತಿಲ್ಲ.ನಾನು ಈ ಮಠಕ್ಕೆ ಬಂದು ೨೦ ವರ್ಷಗಳಾಯಿತು. ಈ ಅವಧಿಯಲ್ಲಿ ನನಗೆ ಮಾರ್ಗದರ್ಶನ ಮಾಡಿದ ಶ್ರೀಮಠ ಇದು. ಶ್ರೀಗಳು ನನ್ನ ಗುರುಗಳು. ಇವರ ಮಾರ್ಗದರ್ಶನ ಪಡೆದುಕೊಂಡೇ ನಾನು ಮತ್ತು ನನ್ನ ಕುಟುಂಬ ಜೀವನ ನಡೆಸುತ್ತಿದ್ದೇವೆ. ನಮ್ಮ ಮನೆಯನ್ನು ಕಾಪಾಡುವ ಶಕ್ತಿ ಇದಕ್ಕಿದೆ. ನಾವು ಈ ಮಠವನ್ನು ಕಾಪಾಡಬೇಕಿದೆ ಎಂದು ತಿಳಿಸಿದರು.

ಕಾಡಸಿದ್ದೇಶ್ವರ ಮಠದ ಡಾ.ಕರಿವೃಷಭದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು. ರಾಜಕೀಯದಲ್ಲಿ ಧರ್ಮವಿರಲಿ ಆದರೆ ಧರ್ಮದಲ್ಲಿ ರಾಜಕೀಯ ಬೇಡ ಎಂದರು.

ಶಾಸಕ ಕೆ.ಷಡಕ್ಷರಿ ಮಾತನಾಡಿ, ಕಾಡಸಿದ್ದೇಶ್ವರ ಮಠ ತಾಲೂಕಿನ ಪ್ರಸಿದ್ದ ಪುಣ್ಯಕ್ಷೇತ್ರ. ಈ ದೇವರನ್ನು ನಂಬಿದರೆ ಕೈಬಿಡುವುದಿಲ್ಲ ಎಂಬುದಕ್ಕೆ ಇಲ್ಲಿನ ಪರಮಭಕ್ತರಾಗಿರುವ ಡಿ.ಕೆ.ಶಿವಕುಮಾರ್ ಸಾಕ್ಷಿ. ಇಲ್ಲಿ ಆಶೀವಾದ ಪಡೆಯದೇ ಅವರು ಯಾವ ಕೆಲಸವನ್ನೂ ಮಾಡುವುದಿಲ್ಲ.ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕೆಂಬ ಆಸೆಯನ್ನು ಗಂಗಾಧರ ಅಜ್ಜಯ್ಯ ಈಡೇರಿಸುತ್ತಾನೆ ಎಂದು ನಂಬಿದ್ದೇನೆ. ಈ ಬಾರಿ ತಿಪಟೂರು ತಾಲೂಕು ಹೆಚ್ಚು ಅಭಿವೃದ್ಧಿ ಕಾಣಲಿದೆ ಎಂದರು.

ಈ ಸಂದರ್ಭದಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಬೆಂಗಳೂರು ವಿಭೂತಿಪುರ ಮಠದ ಮಹಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಬೆಲಗೂರಿನ ವಿಜಯ ಮಾರುತಿಶರ್ಮ ಸ್ವಾಮೀಜಿ, ಕಿರಿಯ ಸ್ವಾಮೀಜಿ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ,ಹೆಗ್ಗಡಹಳ್ಳಿಮಠದ ಷಡ್ಡಾವರಹಿತೇಶ್ವರ ಸ್ವಾಮೀಜಿ, ಕಾಂಗ್ರೆಸ್ ಮುಖಂಡರಾದ ಲೋಕೇಶ್ವರ, ಮುರಳೀಧರ ಹಾಲಪ್ಪ, ಶಾಸಕ ತಮ್ಮಯ್ಯ ಇನ್ನಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ