'ಯತೀಂದ್ರ ಅವರು ಯಾವ ಅಧಿಕಾರಿ ಹೆಸರು, ಯಾವ ಹುದ್ದೆ, ಎಷ್ಟು ಲಂಚ ಎಂದು ಎಲ್ಲಿ ಹೇಳಿದ್ದಾರೆ. ಕುಮಾರಸ್ವಾಮಿ ಸುಮ್ಮನೆ ಪ್ರಚಾರ ಮಾಡಿ ನಮ್ಮ ಹುಡುಗನನ್ನು (ಯತೀಂದ್ರ) ನಾಯಕನ್ನನ್ನಾಗಿ ಬೆಳೆಸುತ್ತಿದ್ದಾರೆ. ಆರೋಪ ಮಾಡಲಿ ಬಿಡಿ' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಮಾಜಿ ಶಾಸಕ ತಂದೆಯ ಜವಾಬ್ದಾರಿ ತೆಗೆದುಕೊಂಡು ತಮ್ಮ ಕ್ಷೇತ್ರದ ಶಾಲೆಗಳ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. ನಾನು ಬೆಳಿಗ್ಗೆಯೇ ಆ ವಿಡಿಯೋ ನೋಡಿದೆ. ವರ್ಗಾವಣೆ ದಂಧೆ ಎನ್ನಲು ಅವರು ಯಾವ ಅಧಿಕಾರಿ, ಯಾವ ಹುದ್ದೆ ಎಂದು ಉಲ್ಲೇಖವನ್ನೇ ಮಾಡಿಲ್ಲವಲ್ಲ. ಮಾಜಿ ಶಾಸಕರಾಗಿ ಯತೀಂದ್ರ ಅವರು ಒಂದು ವೇಳೆ ತಮ್ಮ ಕ್ಷೇತ್ರಕ್ಕೆ ಬೇಕಾದ 4-5 ಅಧಿಕಾರಿಗಳನ್ನು ವರ್ಗಾವಣೆ ಮಾಡಿಸಿಕೊಂಡರೆ ಅದರಲ್ಲಿ ತಪ್ಪೇನಿದೆ? ಎಂದು ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.