Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ಮುಂದಿನ ಗುರಿ 2024ರ ಲೋಕಸಭಾ ಚುನಾವಣೆ: ಲಕ್ಷ್ಮಿ ಹೆಬ್ಬಾಳ್ಕರ್

ಸುದ್ದಿಮೂಲ ವಾರ್ತೆ

ಬೆಂಗಳೂರು, ಜು.28: ಯುವಕರೇ ದೇಶದ ಆಸ್ತಿ, ಯುವಕರಿಂದಲೇ ದೇಶ ಮುನ್ನಡೆಯಬೇಕು. ದೇಶದ ಉಳಿವಿಗಾಗಿ ಯುವಕರು ಎಚ್ಚೆತ್ತುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಯುವ ಕಾಂಗ್ರೆಸ್ ಆಶ್ರಯದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ 'ಉತ್ತಮ ಭಾರತದ ಅಡಿಪಾಯ' ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, 2024ರ ಚುನಾವಣೆ ನಮ್ಮ ಮುಂದಿನ ಗುರಿಯಾಗಿದ್ದು, ಈ ಗುರಿ ತಲುಪಬೇಕಿದೆ ಎಂದರು.

ಭವಿಷ್ಯದ ನಾಯಕರನ್ನು ರೂಪಿಸಲು ಯುವ ಘಟಕಗಳು ಪ್ರಮುಖ ಪಾತ್ರ ವಹಿಸುತ್ತವೆ. ನಾನು ಕೂಡ ಪಂಚಾಯತಿ ಮಟ್ಟದಲ್ಲಿ ರಾಜಕೀಯ ಆರಂಭಿಸಿ ಇಂದು ಕರ್ನಾಟಕದ ಸಚವೆಯಾಗಿರುವೆ. ಎರಡು ಬಾರಿ ಚುನಾವಣೆಯಲ್ಲಿ ಸೋತರೂ ಎದೆಗುಂದದೆ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಇಂದು ಸಚಿವೆಯಾಗಿರುವೆ ಎಂದರು.

ನಮ್ಮೆಲ್ಲರ ನಾಯಕ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ ಜೈಲಿಗಟ್ಟಿದರೂ ಎದೆಗುಂದದೆ ಮುನ್ನಡೆದರು. ನಮ್ಮ ನಾಯಕ ಸಿದ್ದರಾಮಯ್ಯ ನವರ ಜೊತೆ ಪಕ್ಷ ಕಟ್ಟಿದ ಫಲವಾಗಿ ಕಾಂಗ್ರೆಸ್ ಇಂದು ಕರ್ನಾಟಕದಲ್ಲಿ ಅಧಿಕಾರ ಹಿಡಿದಿದೆ ಎಂದು ಸಚಿವರು ಹೇಳಿದರು.

ಯುವ ಸಮುದಾಯ ಎಂದರೆ ಭವಿಷ್ಯ ಎಂಬುದನ್ನು ಅರಿತ ಇಂದಿರಾ ಗಾಂಧಿ ಅವರು, ಭವಿಷ್ಯದ ನಾಯಕರ ನಿರ್ಮಾಣಕ್ಕೆ ಯುವ ಕಾಂಗ್ರೆಸ್ ಆರಂಭಿಸಿದರು. ಪರಿಣಾಮ ಯುವ ಕಾಂಗ್ರೆಸ್ ನಿಂದ ಅನೇಕ ನಾಯಕರು ಬೆಳೆದು ಬಂದಿದ್ದಾರೆ.

ರಾಜ್ಯದಲ್ಲಿ ನಾನು ಸೇರಿದಂತೆ ಅನೇಕ ನಾಯಕರು ಯುವ ಕಾಂಗ್ರೆಸ್ ನಲ್ಲಿ ಪಳಗಿದವರು. ನಾಯಕತ್ವ, ಹೋರಾಟದ ಗುಣಗಳನ್ನು ಬೇಳೆಯಸಿಕೊಳ್ಳಲು ಯುವ ಕಾಂಗ್ರೆಸ್ ಗರಡಿ ಮನೆಯಂತೆ, ನೀವು ಆ ಗರಡಿ ಮನೆಯಲ್ಲಿ ಎಂತಹ ಪಟ್ಟುಗಳನ್ನು ಕಲಿಯುತ್ತೀರಿ ಎಂಬುದರ ಮೇಲೆ ನಿಮ್ಮ ಭವಿಷ್ಯ ನಿರ್ಧಾರವಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಯುವ ಸಮುದಾಯ ಮನಸ್ಸು ಮಾಡಿದರೆ ಜಗತ್ತನ್ನೇ ಬದಲಿಸುವ ಶಕ್ತಿ ಇದೆ. ಇದಕ್ಕೆ ಇತ್ತೀಚಿನ ರಾಜ್ಯ ವಿಧಾನಸಭೆ ಚುನಾವಣೆ ಸಾಕ್ಷಿ. ರಾಜ್ಯದಲ್ಲಿ ಇಂದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ನಿಮ್ಮ ಪಾತ್ರವೂ ಇದೆ. ಅದಕ್ಕಾಗಿ ಧನ್ಯವಾದಗಳು ಎಂದು ಹೇಳಿದರು.

ಈಗ ನಿಮ್ಮ ನಮ್ಮ ಗುರಿ 2024ರ ಚುನಾವಣೆ. ದೇಶ ಈಗ ಅತ್ಯಂತ ಸಂದಿಗ್ದ ಪರಿಸ್ಥಿತಿಗೆ ಸಿಲುಕಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನ, ಸಾಂವಿಧಾನಿಕ ಸಂಸ್ಥೆಗಳು ಅಪಾಯಕ್ಕೆ ಸಿಲುಕಿವೆ. ಈ ಅಪಾಯದ ಪರಿಸ್ಥಿತಿಯಿಂದ ದೇಶವನ್ನು ಪಾರು ಮಾಡಬೇಕಾದರೆ ಯುವ ಸಮುದಾಯ ಮತ್ತೊಂದು ಸಂಕಲ್ಪ ಮಾಡಲೇಬೇಕು ಎಂದು ಸಚಿವರು ಕರೆಕೊಟ್ಟರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ