Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಸಂಪುಟ ವಿಸ್ತರಣೆಯಾದರೆ ಡಿಕೆಶಿಗೆ ಪಂಗನಾಮ: ಅಶೋಕ್ ಟೀಕೆ

ಸುದ್ದಿಮೂಲ ವಾರ್ತೆ ಬೆಂಗಳೂರು, ನ.17:
ಸಚಿವ ಸಂಪುಟ ವಿಸ್ತರಣೆಯಾದರೆ ಡಿ.ಕೆ.ಶಿವಕುಮಾರ್‌ಗೆ ಪಂಗನಾಮ ಸಿಗಲಿದೆ. ದೇವಸ್ಥಾಾನಗಳಿಗೆ ಹೋಗಿ ಪೂಜೆ ಮಾಡಿದ್ದು ವ್ಯರ್ಥವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ವ್ಯಂಗ್ಯವಾಡಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನವೆಂಬರ್‌ನಲ್ಲಿ ಮುಖ್ಯಮಂತ್ರಿಿ ಬದಲಾಗಲಿದ್ದಾರೆ ಎಂದು ನಾನು ಪದೇ ಪದೆ ಹೇಳಿದ್ದೆ. ಆದರೂ ಆ ರೀತಿ ಇಲ್ಲ ಎಂದು ಕಾಂಗ್ರೆೆಸ್ ನಾಯಕರು ಹೇಳಿದ್ದಾರೆ. ಈಗ ಡಿ.ಕೆ.ಶಿವಕುಮಾರ್ ಸೋದರರು ದೆಹಲಿಗೆ ಹೋಗಿ ಕುಳಿತಿದ್ದಾರೆ. ಸಿಎಂ ಬದಲಾವಣೆ ಇಲ್ಲವೆಂದ ಮೇಲೆ ಎಲ್ಲರೂ ಮಲ್ಲಿಕಾರ್ಜುನ ಖರ್ಗೆಯವರನ್ನು ಏಕೆ ಭೇಟಿಯಾಗುತ್ತಿಿದ್ದಾರೆ? ಎಂದು ಪ್ರಶ್ನಿಿಸಿದರು.
ಕಬ್ಬು ಬೆಳೆಗಾರರ ಸಮಸ್ಯೆೆ ಬಗೆಹರಿದಿಲ್ಲ, ವನ್ಯಜೀವಿ-ಮಾನವ ಸಂಘರ್ಷ ಜೋರಾಗಿದೆ, ಮಳೆ ಹಾನಿ ಪರಿಹಾರ ನೀಡಿಲ್ಲ. ಹೀಗೆ ಅನೇಕ ಸಮಸ್ಯೆೆಗಳಿದ್ದರೂ ಸಿಎಂ ಕುರ್ಚಿಗಾಗಿ ಮ್ಯೂಸಿಕಲ್ ಚೇರ್ ಸ್ಪರ್ಧೆ ನಡೆಯುತ್ತಿಿದೆ. ಸಚಿವ ಸಂಪುಟ ವಿಸ್ತರಣೆಯಾದರೆ ಡಿ.ಕೆ.ಶಿವಕುಮಾರ್‌ಗೆ ಪಂಗನಾಮ ಸಿಗಲಿದೆ. ದೇವಸ್ಥಾಾನಗಳಿಗೆ ಹೋಗಿ ಪೂಜೆ ಮಾಡಿದ್ದು ವ್ಯರ್ಥವಾಗಲಿದೆ ಎಂದರು.
ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಬಗ್ಗೆೆ ಅರಣ್ಯ ಸಚಿವರು ಉತ್ತರ ನೀಡಬೇಕಿದೆ. ಇದು ಆಘಾತಕಾರಿ ಸಂಗತಿಯಾಗಿದ್ದು, ಈ ಬಗ್ಗೆೆ ಅಧಿಕಾರಿಗಳು ಮುನ್ನೆೆಚ್ಚರಿಕೆ ಕ್ರಮ ವಹಿಸಬೇಕಿದೆ. ಬೆಳಗಾವಿ ಅಧಿವೇಶನದಲ್ಲಿ ಆರಂಭದಿಂದಲೇ ಉತ್ತರ ಕರ್ನಾಟಕದ ಸಮಸ್ಯೆೆಗಳ ಬಗ್ಗೆೆ ಚರ್ಚೆಯಾಗಬೇಕಿದೆ. ಕಳೆದ ಬಾರಿ ಚರ್ಚೆಯಾದ ಸಮಸ್ಯೆೆಗಳನ್ನು ಪರಿಹರಿಸಲಾಗಿದೆಯೇ ಎಂದು ತಿಳಿಸಬೇಕು. ಕಬ್ಬು ಬೆಳೆಗಾರರ ಸಮಸ್ಯೆೆ, ಕಾನೂನು ಸುವ್ಯವಸ್ಥೆೆ ಬಗ್ಗೆೆ ಚರ್ಚೆ ಮಾಡಲಾಗುವುದು. ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಾಮಿ ಅವರ ಜೊತೆ ಈ ಬಗ್ಗೆೆ ಮತ್ತೊೊಮ್ಮೆೆ ಚರ್ಚೆ ಮಾಡಲಾಗುವುದು ಎಂದರು.
ಚಾಮರಾಜನಗರದಲ್ಲಿ ರೈತರನ್ನು ಭೇಟಿ ಮಾಡಿದ್ದು, ಬೆಳೆ ಪರಿಹಾರ ಹಾಗೂ ಇತರೆ ಸಮಸ್ಯೆೆಗಳ ಬಗ್ಗೆೆ ಚರ್ಚಿಸಿದ್ದೇನೆ. ಪರಿಹಾರ ನೀಡದೆಯೇ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿಿದೆ. ಸಿಎಂ ಸಿದ್ದರಾಮಯ್ಯ ಪುಟಗಟ್ಟಲೆ ಭಾಷಣ ಮಾಡುತ್ತಾಾರೆಯೇ ಹೊರತು ಪರಿಹಾರ ನೀಡುವುದಿಲ್ಲ. ಜಿಎಸ್ಟಿಿ ಸಮಿತಿಯ ಸಭೆಗೆ ಹೋಗದೆ, ಸಲಹೆ ನೀಡಬೇಕಾದ ಸಭೆಗೆ ಹೋಗದೆ ಈಗ ಇಲ್ಲಿ ಬಂದು ಆರೋಪ ಮಾಡುತ್ತಾಾರೆ. ಇರುವ ಅವಕಾಶಗಳನ್ನು ಬಳಸಿಕೊಳ್ಳದೆಯೇ ಈಗ ಮಾತಾಡಿ ಪ್ರಯೋಜನವಿಲ್ಲ. ಸಿಎಂ ಸಿದ್ದರಾಮಯ್ಯ ಮನವಿ ಕೊಟ್ಟು ಬಂದು ನಾಟಕವಾಡುತ್ತಿಿದ್ದಾರೆ. ಮನವಿ ಕೊಟ್ಟು ಹೊರಗೆ ಬಂದ ನಂತರ ವಂಚನೆಯಾಗಿದೆ ಎಂದು ಆರೋಪ ಮಾಡುತ್ತಾಾರೆ ಎಂದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ