Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಪೊಲೀಸರ ವಿರುದ್ಧ ಕಠಿಣ ಕ್ರಮ: ಪರಮೇಶ್ವರ್

 ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.18:
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವಂತಹ ಅಧಿಕಾರಿಗಳ ಪೊಲೀಸರು ಮತ್ತು ಅಧಿಕಾರಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಂಡು ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ವಿಧಾನ ಪರಿಷತ್ತಿಿನಲ್ಲಿ ಗುರುವಾರ ಶಾಸಕ ಶರವಣ ಟಿ. ಎ. ಅವರ ಪ್ರಶ್ನೆೆಗೆ ಉತ್ತರಿಸಿದ ಸಚಿವರು, ಪ್ರಸ್ತುತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 88 ಪೊಲೀಸರು-ಅಧಿಕಾರಿಗಳ ವಿರುದ್ಧ ಕ್ರಿಿಮಿನಲ್ ಕೇಸ್ ದಾಖಲಿಸಿ, ಎ್ಐಆರ್ ದಾಖಲಿಸಿ, ಬಂಧನ ಮಾಡಿ, ಅಮಾನತು ಸಹ ಮಾಡಲಾಗಿದೆ. ಪ್ರಕರಣ ಸಾಬೀತಾದಲ್ಲಿ ಅವರನ್ನು ಸೇವೆಯಿಂದ ವಜಾ ಗೊಳಿಸಲಾಗುವುದು ಎಂದರು.
ರಾಜ್ಯದ ಪೊಲೀಸರು,ಅಧಿಕಾರಿಗಳು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವುದನ್ನು ತಡೆಗಟ್ಟಲು ರಾಜ್ಯದ ಎಲ್ಲಾ ಘಟಕದ ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳಿಗೆ ಕರ್ತವ್ಯ ಪಾಲನೆಯ ಕುರಿತು ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ. ಇಂತಹ ಪ್ರಕರಣಗಳಲ್ಲಿ ಪೊಲೀಸ್ ಅಧಿಕಾರಿ-ಸಿಬ್ಬಂದಿ ಮೇಲೆ ಉನ್ನತಾಧಿಕಾರಿಗಳು ನಿಗಾವಹಿಸುವಂತೆ ಸೂಚನೆ ನೀಡಲಾಗಿದೆ ಎಂದರು.
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ದುರ್ನಡತೆ, ಅಕ್ರಮ ಚಟುವಟಿಕೆಗಳು ಹಾಗೂ ಅಪರಾಧಿಕ ಕೃತ್ಯಗಳಲ್ಲಿ ತೊಡಗಿರುವ ಮಾಹಿತಿಗಳನ್ನು ಜಿಲ್ಲಾ ಮಟ್ಟದ ಉನ್ನತಾಧಿಕಾರಿಗಳು ತಕ್ಷಣವೇ ಪೊಲೀಸ್ ಪ್ರಧಾನ ಕಛೇರಿಗೆ ವರದಿ ಮಾಡುವಂತೆ ಸೂಚಿಸಲಾಗಿದೆ. ಎಲ್ಲಾ ಘಟಕದ ಅಧಿಕಾರಿಗಳಿಂದ ಅಧೀನದ ಪೊಲೀಸ್ ಅಧಿಕಾರಿ ಸಿಬ್ಬಂದಿಯ ಪೂರ್ವಾಪರಗಳ ಪರಿಶೀಲನೆ ಮತ್ತು ಸಮಗ್ರತೆಯ ಮೌಲ್ಯಮಾಪನಗಳನ್ನು ನಿಯತವಾಗಿ ನಡೆಸಲಾಗುತ್ತಿಿದೆ. ನೈತಿಕ ಮಾನದಂಡಗಳು, ಕಾನೂನು ಬದ್ಧ ಕರ್ತವ್ಯಗಳು, ಮತ್ತು ಭ್ರಷ್ಟಾಾಚಾರ- ಅಪರಾಧಗಳ ಕುರಿತು ಜಾಗೃತಿ ಮೂಡಿಸಲು ತರಬೇತಿ ಕಾರ್ಯಕ್ರಮಗಳ ಮೂಲಕ ಪೊಲೀಸ್ ಸಿಬ್ಬಂದಿಗೆ ತಿಳುವಳಿಕೆ ನೀಡಲಾಗುತ್ತಿಿದೆ ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ