Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ತೊರೆಯಬೇಕು : ಆರ್. ರವಿಕುಮಾರ್

ಸುದ್ದಿಮೂಲ ವಾರ್ತೆ

ಹೊಸಕೋಟೆ, ಆ. 17 : ಪೋಷಕರು ತಮ್ಮ ಮಕ್ಕಳಿಗೆ ಮೌಲ್ಯಧಾರಿತ ಶಿಕ್ಷಣ ಕೊಡಿಸುವುದರ ಕಡೆಗೆ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳನ್ನು ದೇಶ ನಿರ್ಮಾಣ ಮಾಡುವ ಶಿಲ್ಪಿಗಳನ್ನಾಗಿಸುವುದು ಶಿಕ್ಷಕರ ಗುರುತರ ಜವಾಬ್ದಾರಿಯಾಗಿದೆ ಎಂದು ತಾವರೆಕೆರೆ ಗ್ರಾಪಂ. ಮಾಜಿ ಅಧ್ಯಕ್ಷ ಆರ್. ರವಿಕುಮಾರ್ ಹೇಳಿದರು.



ಹೊಸಕೋಟೆ ತಾಲ್ಲೂಕಿನ ತಾವರೆಕೆರೆ ಗ್ರಾಪಂ. ವ್ಯಾಪ್ತಿಯ ಯಳಚಹಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಗುರುವಾರ ದಾನಿಗಳಿಂದ ಶಾಲಾ ಬ್ಯಾಗ್ ಹಾಗೂ ನೋಟ್ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು.

ಮಕ್ಕಳು ದೇಶದ ಭವಿಷ್ಯವನ್ನು ರೂಪಿಸುವ ನಿರ್ಮಾಪಕರು, ಸರಕಾರಿ ಶಾಲೆಗಳಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಬೇಕು. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವುದರ ಮೂಲಕ ಸಾಕ್ಷರರನ್ನಾಗಿ ಮಾಡಲು ಶ್ರಮಿಸಬೇಕು ಎಂದರು.

ಮುಖ್ಯ ಶಿಕ್ಷಕಿ ಮಂಜುಳ ಮಾತನಾಡಿ, ಸರ್ಕಾರ ಗ್ರಾಮೀಣಾ ಭಾಗದಲ್ಲಿ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಹಾಗೂ ಮೌಲ್ಯಧಾರಿತ ಶಿಕ್ಷಣಕ್ಕೆ ವಿಶೇಷ ಆದ್ಯತೆಯನ್ನು ನೀಡಿದೆ. ಗುಣಮಟ್ಟದ ಶಿಕ್ಷಣ ಪಡೆಯಲು ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಸೇರಿಸಿ ಸುಶಿಕ್ಷಿತರನ್ನಾಗಿ ಮಾಡಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಇದೇ ಸಂದರ್ಭದಲ್ಲಿ ದಾನಿಗಳಾದ ವೈ.ಎಸ್. ಪ್ರಕಾಶ್‌ರವರು ತಾವರೆಕೆರೆ ಗ್ರಾಪಂ. ಮಾಜಿ ಅಧ್ಯಕ್ಷ ಆರ್. ರವಿಕುಮಾರ್ ನೇತೃತ್ವದಲ್ಲಿ ಶಾಲೆಯ ಮಕ್ಕಳಿಗೆ ಸ್ಕೂಲ್ ಬ್ಯಾಗ್, ನೋಟ್ ಪುಸ್ತಕ ವಿತರಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ