Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಕೀಯ ವಿವಾದ ಪಡೆದ ಗುತ್ತಿಗೆದಾರರ ಬಾಕಿ ಪಾವತಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.10: ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರು ಈಗ ಕಾಂಗ್ರೆಸ್ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. ತಮ್ಮ ಬಾಕಿ ಪಾವತಿಗೆ ಸರ್ಕಾರ ಮತ್ತು ಬಿಬಿಎಂಪಿ ಅನಗತ್ಯ ವಿಳಂಬ ಮಾಡುತ್ತಿದ್ದೆ ಎಂಬ ಆರೋಪಗಳನ್ನು ನಿರಂತರವಾಗಿ ಮಾಡುತ್ತಿದ್ದು, ಪ್ರತಿಪಕ್ಷಗಳಿಗೆ ಇದು ಈಗ ಅಸ್ತ್ರವಾಗಿದೆ.

ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ತಂಡ ನಿನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿತ್ತು. ಅದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿತ್ತು. ಈಗ ಗುತ್ತಿಗೆದಾರರ ಬಾಕಿ ಪಾವತಿ ವಿಚಾರ ರಾಜಕೀಯ ವಿಯವಾಗಿ ಮಾರ್ಪಟ್ಟಿದೆ.

ರಾಹುಲ್‌ಗಾಂಧಿ ಮಧ್ಯ ಪ್ರವೇಶಿಸಲಿ:

ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಕಾಂಗ್ರೆಸ್ ಸರ್ಕಾರದಲ್ಲಿ 65% ಕಮಿಷನ್ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ‌ನಾಯಕ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ. ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದೇ‌ ಇದ್ದರೇ ತಕ್ಷಣ ಮಧ್ಯ ಪ್ರವೇಶ ಮಾಡಿ, ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಸೂಚಿಸಬೇಕು. ಇಲ್ಲದಿದ್ದರೆ ಕರ್ನಾಟಕ ಕಾಂಗ್ರೆಸ್ ನ ಎಟಿಎಂ ಎನ್ನುವುದು ಸಾಬೀತಾದಂತೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಬಿಬಿಎಂಪಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಮನವಿ ಸ್ವೀಕರಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಬಿಎಂಪಿಯಲ್ಲಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ಭೇಟಿ ಮಾಡಿದ್ದಾರೆ. ಅವರು ಮಾಡಿರುವ ಕೆಲಸಕ್ಕೆ ಹಣ ಬಿಡುಗಡೆ ಮಾಡಿಸಲು ಸರ್ಕಾರವನ್ನು ಆಗ್ರಹಿಸಲು ಮನವಿ‌ ಮಾಡಿದ್ದಾರೆ.

ನಾನು ಸಿಎಂ ಇದ್ದಾಗ ಬಿಲ್ ಪಾವತಿಗೆ ಆನ್ಲೈನ್ ಮಾಡಿ ಸ್ಟ್ರೀಮ್ ಲೈನ್ ಮಾಡಿದ್ದೆ‌. ಹಿರಿತನದ ಆಧಾರದ ಮೇಲೆ ಹಣ ಬಿಡುಗಡೆ ಮಾಡಲಾಗುತ್ತಿತ್ತು.‌ ಇದರಿಂದ ಅವರ ಬಾಕಿ ಕೂಡ ಕಡಿಮೆ ಉಳಿದಿತ್ತು ಎಂದರು.

ಸಿಎಂ ಮೌನ, ಸಮ್ಮತಿ ಲಕ್ಷಣ:

ಗುತ್ತಿಗೆದಾರರು ಹಿಂದಿನ ಸರ್ಕಾರದ ಅವಧಿಯಲ್ಲಿ ಮಾಡಿದ ಕೆಲಸಕ್ಕೆ ಈಗ ಲಂಚ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರು ಆರೋಪಿಸಿದ್ದಾರೆ. ಎಲ್ಲ ಇಲಾಖೆಗಳಲ್ಲಿ ಹಿಂದಿನ ಸರ್ಕಾರದ ಅವಧಿಯ ಕಾಮಗಾರಿಗಳಿಗೆ ಲಂಚ ಕೇಳುತ್ತಿರುವುದು ಸರ್ವವಿಧಿತವಾಗಿದೆ. ಮುಖ್ಯಮಂತ್ರಿಗಳು ಇದರ ಬಗ್ಗೆ ಮೌನ ವಹಿಸಿದ್ದಾರೆ. ಇದು ಅವರ ಸಮ್ಮತಿ ಅಂತ ಸೂಚಿಸುತ್ತದೆ ಎಂದು ಆರೋಪಿಸಿದರು‌.

ಸಿಎಂ ವರ್ಗಾವಣೆಗೆ ಹಣ ಪಡೆದಿಲ್ಲ ಅಂತ ಹೇಳಿದ್ದಾರೆ‌. ಆದರೆ, ಅವರ ಕಚೇರಿಯಿಂದ ವರ್ಗಾವಣೆ ಆಗಿರುವ ಆದೇಶಗಳು ಯಾಕೆ ಬದಲಾವಣೆ ಆಗುತ್ತಿವೆ? ನಮ್ಮ ಅವಧಿಯಲ್ಲಿ ಕಾಮಗಾರಿಗಳಲ್ಲಿ ಪಾರದರ್ಶಕತೆ ತರಲು 3 ಜನರ ಸಮಿತಿ ರಚನೆ ಮಾಡಿದ್ದೆವು. ಆ ಆದೇಶಗಳನ್ನು ಈಗ ಪಾಲನೆ ಮಾಡುತ್ತಿಲ್ಲ ಎಂದು ಹೇಳಿದರು.

ಗುತ್ತಿಗೆದಾರರು ಕೆಲಸ ನಿಲ್ಲಿಸಿದರೆ ಬ್ರ್ಯಾಂಡ್ ಬೆಂಗಳೂರು ಸ್ಥಗಿತ ಆಗುತ್ತದೆ. ಕಮಿಷನ್ ಎಷ್ಟು ಪಡೆಯಬೇಕು ಎನ್ನುವುದು ಸ್ಯಾಂಗ್ರಿಲಾ ಹೊಟೆಲ್ ನಲ್ಲಿ ಮಾತುಕತೆ ನಡೆಯುತ್ತಿದೆಯಂತೆ ಎಷ್ಟಕ್ಕೆ ಆಗುತ್ತದೆಯೋ ನೊಡೊಣ ಲಂಚ ಪಡೆಯುವುದು ಕೊಡುವುದು ಎರಡೂ ಅಪರಾಧ. ಗುತ್ತಿಗೆದಾರರು ಎಷ್ಟು ಪರ್ಸೆಂಟೇಜಿಗೆ ಒಪ್ಪುತ್ತಾರೊ, ಭ್ರಷ್ಟಾಚಾರದ ಭಾಗವಾಗುತ್ತಾರೊ, ಇಲ್ಲವೋ ನೋಡೊಣ ಎಂದು ಹೇಳಿದರು.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಕುರಿತು‌ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೆಂಪಣ್ಣ ದೊಡ್ಡವರು, ಅವರೇ ಆರೋಪ ಮಾಡಿದ್ದರಲ್ಲಾ ಎಂದರು.

ಕೆಂಪಣ್ಣ ದೂರಿಗೆ ನ್ಯಾಯ ಒದಗಿಸಬೇಕು

ಕಾಮಗಾರಿಗಳ ಟೆಂಡರ್ ವಿಚಾರದಲ್ಲಿ ಭ್ರಷ್ಟಾಚಾರದ ಬಗ್ಗೆ ಕೆಂಪಣ್ಣ ಅವರು ದೂರು ನೀಡಿದ್ದು ಅವರಿಗೆ ನ್ಯಾಯ ಒದಗಿಸಬೇಕು. ಅದಕ್ಕಾಗಿ ಕಾನೂನು ಪ್ರಕಾರ ತನಿಖೆ ಮಾಡಲು ಹೇಳಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಗುತ್ತಿಗೆದಾರರು ಪ್ರತಿ ಪಕ್ಷ ನಾಯಕರ ಭೇಟಿ ವಿಚಾರವಾಗಿ ಪ್ರಶ್ನೆ ಮಾಡಿದಾಗ ಸರಿಯಾಗಿ ಕೆಲಸ ಮಾಡಿರುವ ಗುತ್ತಿಗೆದಾರರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ. ಕೆಲವು ಗುತ್ತಿಗೆದಾರರನ್ನು ಮಾಧ್ಯಮಗಳ ಮುಂದೆ ಯಾರು ಮಾತನಾಡುತ್ತಿದ್ದಾರೆ, ದೆಹಲಿಗೆ ಯಾರು ಕರೆಯುತ್ತಿದ್ದಾರೆ, ಯಾವ ನಾಯಕರ ಮನೆಗೆ ಯಾರು ಕಳಿಸುತ್ತಿದ್ದಾರೆ ಎಂಬ ವಿಚಾರ ನನಗೆ ಗೊತ್ತಿದೆ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ