Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನರು ಭಯಪಡುವ ಅಗತ್ಯವಿಲ್ಲ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅಭಯ

ಸುದ್ದಿಮೂಲ ವಾರ್ತೆ

ಮೈಸೂರು ಸೆ.14 : ನೆರೆಯ ಕೇರಳದಲ್ಲಿ ನಿಫಾ ಎಂಬ ವೈರಸ್‌ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ನಂಜನಗೂಡು ಹಾಗೂ ಹೆಚ್ ಡಿ ಕೋಟೆ ಭಾಗದ ಬಾವಲಿ ಬಳಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಕೇರಳದಿಂದ ಬರುವವರನ್ನು ಪರೀಕ್ಷೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ತಿಳಿಸಿದ್ದಾರೆ.

ಗುರುವಾರ ಹಳೇ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಿಫಾ ವೈರಸ್ ನಿಯಂತ್ರಣ ಕುರಿತು ಹಾಗೂ ಬರ ಘೋಷಣೆ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ವರ್ಚುವಲ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜ್ವರ ತಲೆನೋವು, ಮೈಕೈ ನೋವು ಇದ್ದರೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅರಿವು ಮೂಡಿಸಲಾಗುತ್ತಿದೆ. ಕೇರಳ ಭಾಗದಲ್ಲಿ ನಿಫಾ ವೈರಸ್ ಕುರಿತು ಜನರು ಆತಂಕಪಡುವುದು ಬೇಡ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿದ್ದು, ಜನರು ಯಾವುದೇ ಭಯ ಪಡುವ ಅಗತ್ಯವಿಲ್ಲ. ಮನೆ ಬಳಿ ಬಾವಲಿಗಳು ಇದ್ದರೆ ಎಚ್ಚರಿಕೆ ವಹಿಸಿ, ಪಕ್ಷಿಗಳು ಕಚ್ಚಿರುವ ಹಣ್ಣು ಗಳನ್ನು ಬಳಸಬಾರದು. ಹಣ್ಣುಗಳನ್ನು ತೊಳೆದು ಉಪಯೋಗಿಸಬೇಕು ಎಂದರು.

ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿದ್ದು ಈ ಬಗ್ಗೆ ಆರೋಗ್ಯ ಅಧಿಕಾರಿಗಳು ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ ಡಿಸಿ, ಖಾಸಗಿ ಕ್ಲಿನಿಕ್ ಗಳಲ್ಲಿ ವೈದ್ಯರ ಮಾಹಿತಿ, ಅವರ ವಿದ್ಯಾರ್ಹತೆ, ಅವರ ನೋಂದಣಿ ಸಂಖ್ಯೆಯ ಮಾಹಿತಿಯನ್ನು ಹಾಕಿರಬೇಕು. ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.

ತಾಯಿ ಮಗುವಿನ ಮರಣ ಪ್ರಮಾಣವನ್ನು ಕಡಿಮೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಳ್ಳಿಗಳಲ್ಲಿ ಗರ್ಭಿಣಿ ಸ್ತ್ರೀಯರನ್ನು ಗುರುತಿಸಿ ಅವರಿಗೆ ಸರ್ಕಾರದ ಸೌಲಭ್ಯಗಳು ಹಾಗೂ ವೈದ್ಯಕೀಯ ಸೌಲಭ್ಯಗಳು ಸಿಗುವಂತೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಗಳನ್ನು ವಿತರಣೆ ಮಾಡುವಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ಆರೋಗ್ಯ ಕೇಂದ್ರಗಳು, ಗ್ರಾಮ ಓನ್ ಸೆಂಟರ್, ಗ್ರಾಮ ಪಂಚಾಯತ್ ಗಳಲ್ಲಿ ಆರೋಗ್ಯ ಕಾರ್ಡ್ ಗಳನ್ನು ಮಾಡಿಸಿಕೊಳ್ಳಬಹುದು. ಜಿಲ್ಲೆಗೆ 26 ಲಕ್ಷ ಗುರಿ ಇದ್ದು ಇಲ್ಲಿಯವರೆಗೆ 6 ಲಕ್ಷ ನೋಂದಣಿ ಆಗಿದೆ. ಆದ್ದರಿಂದ ಸರಿಯಾಗಿ ನೋಂದಣಿಗೆ ಸಹಕರಿಸದ ಗ್ರಾಮ ಓನ್ ಸೆಂಟರ್ ಗಳಿಗೆ ನೋಟಿಸ್ ನೀಡಲಾಗುವುದು ಎಂದು ಎಚ್ಚರಿಸಿದರು.

ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬದವರಿಗೆ ಮೊದಲ ಆದ್ಯತೆ ನೀಡಿ ಮುಂದಿನ ಒಂದು ವಾರದೊಳಗೆ ಆರೋಗ್ಯ ಕಾರ್ಡ್ ಗಳನ್ನು ಮಾಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆ.ಆರ್‌.ನಗರ ಬಿಟ್ಟು ಎಲ್ಲಾ ತಾಲೂಕುಗಳು

ಮೈಸೂರು ಜಿಲ್ಲೆಯ ಕೆ ಆರ್ ನಗರ ತಾಲೂಕು ಹೊರತುಪಡಿಸಿ ಉಳಿದ ಎಲ್ಲಾ ತಾಲ್ಲೂಕುಗಳನ್ನು ಬರ ತಾಲ್ಲೂಕುಗಳೆಂದು ಘೋಷಣೆ ಮಾಡಲಾಗಿದೆ. ತಹಶೀಲ್ದಾರರು ಹಾಗೂ ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿಗಳು ತಮ್ಮ ತಾಲ್ಲೂಕಿನ ಗ್ರಾಮಗಳ ವ್ಯಾಪ್ತಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಗುರುತಿಸಬೇಕು. ಗ್ರಾಮಗಳ ಹತ್ತಿರದಲ್ಲಿ ಇರುವ ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಿ ಇಟ್ಟುಕೊಳ್ಳಬೇಕು. ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗಬಾರದು. ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಬೇಕು. ಜಾನುವಾರು ಮೇವು ಲಭ್ಯತೆ ಕುರಿತು ಮಾಹಿತಿ ಇರಬೇಕು. ಮೇವು ಬೆಳೆಯಲು ಮೇವು ಬಿತ್ತನೆ ಬೀಜಗಳ ವಿತರಣೆಯನ್ನು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ಮಾಡಬೇಕು ಎಂದು ಸೂಚನೆ ನೀಡಿದರು.

ಜಿಪಂ ಸಿಇಓಕೆ ಎಂ. ಗಾಯತ್ರಿ ಅವರು ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಕಂಡು ಬಂದರೆ 24 ಗಂಟೆಯೊಳಗೆ ಪರಿಹಾರ ಮಾಡಬೇಕು. ಬರ ಇರುವುದರಿಂದ ನರೇಗಾ ಯೋಜನೆಯಡಿ ಹೆಚ್ಚಿನ ಕೆಲಸ ಮಾಡಿಸಿ, ಹೆಚ್ಚಿನ ಮಾನವ ದಿನಗಳ ಸೃಜನೆ ಮಾಡಿ. ಹಾಸ್ಟೆಲ್ ಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕುಮಾರಸ್ವಾಮಿ ಅವರು ಮಾತನಾಡಿ ಜ್ವರ, ಮೈಕೈ ನೋವು ಇದ್ದವರು ಆಸ್ಪತ್ರೆ ಗಳಿಗೆ ಬಂದು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮಾಹಿತಿ ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ