Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನರ ಸಮಸ್ಯೆಗಳು ಅಲ್ಲಿಯೇ ಇತ್ಯಾರ್ಥವಾಗಬೇಕು- ತಂಗಡಗಿ

ಸುದ್ದಿಮೂಲವಾರ್ತೆ

ಕೊಪ್ಪಳ,ಸೆ.25: ಜನತಾ ದರ್ಶನದಲ್ಲಿ ಬಂದಿರುವ ಸಮಸ್ಯೆಗಳನ್ನು ಅಲ್ಲಿಯೇ ಇತ್ಯಾರ್ಥವಾಗಬೇಕು ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ಅವರು ಇಂದು ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಕಲ್ಪಿಸಿರುವ ಜನತಾ ದರ್ಶನದಲ್ಲಿ ಬಂದಿರುವ ಅಹವಾಲುಗಳನ್ನು ಬೇಗ ಇತ್ಯಾರ್ಥವಾಗಬೇಕು. ಸಮಸ್ಯೆಗಳ ಬಗ್ಗೆ ಉದಾಸೀನ ತೋರಿದರೆ ಕಠಿಣ ಕ್ರಮ ಏದುರಿಸಬೇಕಾಗುತ್ತದೆ ಎಂದರು.

ಜನರು ನಿಮ್ಮ ಕಚೇರಿಗೆ ಬಂದವರಿಗೆ ಹಾರಿಕೆ ಉತ್ತರ ನೀಡಿ ಕಳುಹಿಸಬಾರದು. ಕೆಲವು ಪ್ರಕರಣಗಳಲ್ಲಿ ಕಾನೂನು ತೊಡಕು ಇದ್ದರೂ ಮನವೀಯತೆಯಿಂದ ಕೆಲಸ ಮಾಡಬೇಕು. ಕೊಪ್ಪಳ ಜಿಲ್ಲೆಯಲ್ಲಿ ವಸತಿ ಯೋಜನೆಯಲ್ಲಿಯ ಸಮಸ್ಯೆಯನ್ನು ಬಗೆಹರಿಸಬೇಕು ಎಂದರು.

ಮುಂದಿನ ದಿನಗಳಲ್ಲಿ ತಿಂಗಳಲ್ಲಿ ಎರಡು ಕಡೆ ಜನತಾ ದರ್ಶನ ಮಾಡಲಾಗುವುದು.ಮುಖ್ಯಮಂತ್ರಿಗಳು ಜನಪರ ಕೆಲಸ ಮಾಡಲು ಹೊರಟಿದ್ದಾರೆ ಅದಕ್ಕೆ ಅಧಿಕಾರಿಗಳ ಸಹಕರಿಸಬೇಕೆಂದರು.

ಜನತಾ ದರ್ಶನದ ಅಧ್ಯಕ್ಷತೆಯನ್ನು ಕೊಪ್ಪಳ ಶಾಸಕ ಕೆ ರಾಘವೇಂದ್ರ ಹಿಟ್ನಾಳ ವಹಿಸಿ ಮಾತನಾಡಿದ ಅವರು ಸರಕಾರ ಗ್ಯಾರಂಟಿ ಯೋಜನೆಗಳು ಜನರಿಗೆ ಮುಟ್ಟುತ್ತಿವೆ. ಸಾರ್ವಜನಿಕ ಸಮಸ್ಯೆಗಳಿಗೆ ಅಧಿಕಾರಿಗಳು ಹಾಗು ಜನಪ್ರತಿಗಳು ಬಂಡಿ ಎರಡು ಗಾಲಿಗಳಂತೆ ಇರಬೇಕೆಂದರು.

ಈ ಸಂದರ್ಭದಲ್ಲಿ ಕೊಪ್ಪಳ‌ ಉಸ್ತುವಾರಿ ಕಾರ್ಯದರ್ಶಿ ನವೀನರಾಜ್ ಸಿಂಗ್. ಜಿಲ್ಲಾಧಿಕಾರಿ ನಲಿನಿ ಅತುಲ್, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ರತ್ನಂ ಪಾಂಡೆಯಾ. ಎಸ್ಪಿ ಯಶೋದಾ ವಂಟಿಗೋಡಿ, ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಎಡಿಸಿ ಸಾವಿತ್ರಿ ಕಡಿ, ಉಪವಿಭಾಗಾಧಿಕಾರಿ ಮಹೇಶ ಮಾಲಗಿತ್ತಿ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ