ಬಿಬಿಎಂಪಿ: ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ
ಸುದ್ದಿಮೂಲ ವಾರ್ತೆ
ಬೆಂಗಳೂರು, ಜೂ.27: ನಾಡಪ್ರಭು ಕೆಂಪೇಗೌಡರ 514ನೇ ಜಯಂತಿಯ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಛೇರಿಯ ಮುಂಭಾಗದ ಉದ್ಯಾನದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾಲಾರ್ಪಣೆ ಮಾಡಿ ಪುಷ್ಪನಮನ ಅರ್ಪಿಸಿದರು.
ಇದೇ ವೇಳೆ ಕೆಂಪೇಗೌಡರ ಸೊಸೆ ಮಹಾತ್ಯಾಗಿ ಲಕ್ಷ್ಮೀದೇವಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಅರ್ಪಿಸಲಾಯಿತು.
ಈ ವೇಳೆ ವಿಶೇಷ ಆಯುಕ್ತರಾದ ಡಾ. ಹರೀಶ್ ಕುಮಾರ್, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.