Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಶಾಸಕರ ಕುತಂತ್ರದಿಂದ ಕಾಂಗ್ರೆಸ್ ಗೆಲುವು: ಪಿ.ಎನ್. ಕೇಶವರೆಡ್ಡಿ ಆರೋಪ


ಸುದ್ದಿಮೂಲ ವಾರ್ತೆ




ಚಿಕ್ಕಬಳ್ಳಾಪುರ, ಜೂ.11: ಮಾಜಿ ಶಾಸಕ  ಬಚ್ಚೇಗೌಡ ಅವರ ರಾಜಕೀಯ ಕುತಂತ್ರದಿಂದ ಹಾಗೂ 5 ಗ್ಯಾರಂಟಿಗಳ ಘೋಷಣೆಯಿಂದ ಕಾಂಗ್ರೆಸ್ ಗೆದ್ದಿದೆ .ಆದರೂ,  ನಾವು ಜನರ ವಿಶ್ವಾಸವನ್ನು ಉಳಿಸಿಕೊಂಡಿದ್ದೇವೆ ಎಂದು ಮಾಜಿ ಸಚಿವ ಡಾ. ಕೆ ಸುಧಾಕರ್ ಅವರ ತಂದೆ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಎನ್. ಕೇಶವರೆಡ್ಡಿ ಹೇಳಿದರು.


ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕ ಪೈಲಗುರ್ಕಿಯ ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ತಮ್ಮ 88ನೇ ಹುಟ್ಟುಹಬ್ಬವನ್ನು ಬಿಜೆಪಿ ಕಾರ್ಯಕರ್ತರೊಂದಿಗೆ ಆಚರಿಸಿಕೊಂಡರು.


ಬಳಿಕ  ಮಾತನಾಡಿದ ಅವರು, ಡಾ. ಕೆ ಸುಧಾಕರ್ ಅವರು ತಮ್ಮದೇ ಆದ ರೀತಿಯಲ್ಲಿ ಸೇವೆಯನ್ನು ಮಾಡಿದ್ದಾರೆ. ಕ್ಷೇತ್ರದ ಜನ 75 ಸಾವಿರಕ್ಕೂ ಅಧಿಕ ಮತ ನೀಡಿದ್ದಾರೆ. ಆದರೆ, ಚುನಾವಣೆಯಲ್ಲಿ ಮಾಜಿ ಶಾಸಕ ಕೆ.ಪಿ ಬಚ್ಚೇಗೌಡರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಿ ಎಂದು ಹೇಳಿದ ಪರಿಣಾಮದಿಂದಾಗಿ ನಾವು ಸೋತಿದ್ದೇವೆ ಎಂದು ಆರೋಪಿಸಿದರು.



ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ದೊರೆಯುತ್ತದೆ ಎಂದು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ ಅದು ಸಹ ನಾವು ಸೋಲಲು ಕಾರಣವಾಯಿತು. ಹೊರತು ಜನರ ಪ್ರೀತಿ ಕಮ್ಮಿಯಾಗಿಲ್ಲ ಮುಂದಿನ ಚುನಾವಣೆಗಳಲ್ಲಿ ಮತ್ತೊಮ್ಮೆ ಜಯ ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ ವಿ ನಾಗರಾಜ್, ಭಾಜಪ ಮುಖಂಡ ಆನಂದ್, ಗಿರೀಶ್ ಹರಿಸ್ಥಳ, ಚಿಕ್ಕಬಳ್ಳಾಪುರ ನಗರಸಭೆಯ ಮಾಜಿ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ ಬಾಬು, ನಗರಸಭಾ ಸದಸ್ಯರು, ಬಿಜೆಪಿಯ ಮುಖಂಡರು ಉಪಸ್ಥಿತರಿದ್ದರು.


ಸಿಕೆಬಿಪಿ02


ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕ ಪೈಲಗುರ್ಕಿಯ ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಎನ್. ಕೇಶವರೆಡ್ಡಿ ಅವರು ತಮ್ಮ 88ನೇ ಹುಟ್ಟುಹಬ್ಬವನ್ನು ಬಿಜೆಪಿ ಕಾರ್ಯಕರ್ತರೊಂದಿಗೆ ಆಚರಿಸಿಕೊಂಡರು.







Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ