Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೋವಾದಲ್ಲಿ ಕಳ್ಳನನ್ನು ಬಂಧಿಸಿದ ಪೊಲೀಸರು

ಸುದ್ದಿಮೂಲ ವಾರ್ತೆ

ಬೆಂಗಳೂರು ನ. 21 : ಸುಮಾರು 80 ಕೇಸ್ಗಳಲ್ಲಿ ಭಾಗಿಯಾಗಿದ್ದ 70 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಖತರ್ನಾಕ್ ಖದೀಮನನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ.

ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಬಂಧನ. ಈ ಹಿಂದೆ 3 ಬಾರಿ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಗೋವಾದಲ್ಲಿ ಅರೆಸ್ಟ್ ಮಾಡಿ ಬೆಂಗಳೂರಿಗೆ ಕರೆ ತಂದಿದ್ದಾರೆ. ಇನ್ನು ಆರೋಪಿಯಿಂದ 1 ಕೆಜಿ 215 ಗ್ರಾಂ ಚಿನ್ನಾಭರಣ, 3 ಕೆಜಿ 500 ಗ್ರಾಂ ಬೆಳ್ಳಿ ಆಭರಣ ವಶಕ್ಕೆ ಪಡೆಯಲಾಗಿದೆ. ಇವುಗಳ ಒಟ್ಟು ಮೊತ್ತ ಸುಮಾರು 70 ಲಕ್ಷ ರೂಪಾಯಿ ಎಂದು ಹೇಳಲಾಗಿದೆ.

ಪೊಲೀಸರು ವಿಚಾರಣೆ ನಡೆಸಿದಾಗ ಆರೋಪಿಯು ಭಯಾನಕವಾದ ಸತ್ಯಗಳನ್ನು ಬಾಯಿಬಿಟ್ಟಿದ್ದಾನೆ. ಈ ಬಗ್ಗೆ ಮಾತನಾಡಿರುವ ಪೊಲೀಸ್ ಕಮಿಷನರ್ ದಯಾನಂದ್ ಅವರು, ಆರೋಪಿಯು 2005 ರಿಂದ ಕಳ್ಳತನ ಮಾಡುತ್ತಿದ್ದು ಡಬಲ್ ಸೈಟ್ ಇರೋ ಮನೆಗಳನ್ನ ಟಾರ್ಗೆಟ್ ಮಾಡುತ್ತಿದ್ದನು. ರಾತ್ರಿ ವೇಳೆ ಮನೆಗೆ ನುಗ್ಗಿ ಡೋರ್ ಲಾಕ್ ಒಡೆದು ನಂತರ ಕಳ್ಳತನ ಮಾಡುತ್ತಿದ್ದನು. ಈ ವೇಳೆ ಸಿಕ್ಕಂತಹ ಚಿನ್ನಾಭರಣಗಳನ್ನು ರೈಲ್ವೇ ಕಾಲೋನಿಯಲ್ಲಿ ಗುಂಡಿಯನ್ನು ಅಗೆದು ಚಿನ್ನಾಭರಣ ಅದರಲ್ಲಿ ಹಾಕಿ ಮಣ್ಣಿನಿಂದ ಮುಚ್ಚುತ್ತಿದ್ದನು. ಸದ್ಯ ಆರೋಪಿ ಮುಚ್ಚಿಟ್ಟಿದ್ದ ಆಭರಣಗಳನ್ನೆಲ್ಲ ಪೊಲೀಸರು ಹೊರ ತೆಗೆಸಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದಿದ್ದಾರೆ.

ಗೋವಿಂದರಾಜನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಗೋವಾದ ಕೆಸಿನೋದಲ್ಲಿ ಗರ್ಲ್ ಫ್ರೆಂಡ್ ಜೊತೆ ಇದ್ದ ಖದೀಮನನ್ನು ಅರೆಸ್ಟ್ ಮಾಡಿ ನಗರಕ್ಕೆ ಕರೆ ತಂದಿದ್ದಾರೆ. ಒಟ್ಟು 18 ಎನ್‌ ಬಿ ಡಬ್ಲ್ಯೂ ವಾರೆಂಟ್ ಇಶ್ಯೂ ಆಗಿದ್ದವು. ಆದರೂ ಆರೋಪಿ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದನು. ಅಲ್ಲದೇ ಬೆಂಗಳೂರು, ಚೆನ್ನೈ, ತಿರುಪತಿಯಲ್ಲೂ ಕಳ್ಳತನ ಮಾಡುತ್ತಿದ್ದನು. ಸದ್ಯ ಆರೋಪಿ ಜೊತೆ ಇನ್ನಿಬ್ಬರನ್ನು ಕೂಡ ಬಂಧಿಸಿ ಕರೆತರಲಾಗಿದೆ ಎಂದು ಹೇಳಿದ್ದಾರೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ