Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಲಿತರಿಗೆ ನ್ಯಾಯ ಕೊಡಿಸುವಲ್ಲಿ ಪೋಲೀಸ್ ಇಲಾಖೆ ವಿಫಲ: ಕೆ ಶಿವರಾಮ್





ಸುದ್ದಿಮೂಲ ವಾರ್ತೆ

ಹೊಸಕೋಟೆ, ಮೇ 17: ತಾಲೂಕಿನಲ್ಲಿ ಅನ್ಯಾಯವನ್ನು ಖಂಡಿಸಿ ದಲಿತರಿಗೆ ನ್ಯಾಯಕೊಡಿಸುವಲ್ಲಿ ಪೋಲಿಸ್ ಇಲಾಖೆ ವಿಪಲವಾಗಿರುವುದು ಎದ್ದು ಕಾಣುತ್ತಿದೆ ಎಂದು ಛಲವಾದಿ ಮಹಾಸಭಾದ ರಾಜ್ಯಾಧ್ಯಕ್ಷ ಡಾ.ಕೆ. ಶಿವರಾಮ್ ತಿಳಿಸಿದ್ದಾರೆ.

ತಾಲೂಕಿನ ನಗರೇನಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿದ್ದ ನಿವಾಸಕ್ಕೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿ ಆರ್ಥಿಕ ನೆರವನ್ನು ನೀಡಿ ಮಾತನಾಡಿದರು.

ನಗರೇನಹಳ್ಳಿಯಲ್ಲಿ ಇದೇ 13ನೇ ತಾರೀಖು ಮೇಲ್ಜಾತಿಗೆ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ದಲಿತರ ಮನೆ ಮುಂಭಾಗದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸುವ ವೇಳೆ ಮನೆಯಲ್ಲಿ ಪುಟ್ಟ ಮಗು ಇದೆ ಎಂದು ಮನವಿ ಮಾಡಿದ್ದಕ್ಕೆ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಸೂಲಿಬೆಲೆ ಠಾಣೆಯಲ್ಲಿ ದೂರು ದಾಖಲಾಗಿದ್ದರೂ ಆರೋಪಿಗಳನ್ನು ಇದುವರೆಗೆ ಬಂಧಿಸದಿರುವುದು ಪೋಲಿಸ್ ಇಲಾಖೆಯ ವೈಪಲ್ಯ ಎದ್ದು ಕಾಣುತ್ತಿದೆ. ಸ್ವಾತಂತ್ರ‍್ಯ ಬಂದು 76 ವರ್ಷಕಳೆದರೂ ಅಲ್ಲಲ್ಲಿ ಅಸ್ಪೃಶ್ಯತೆ ಜೀವಂತವಾಗಿರುವುದು ಖೇದದ ಸಂಗತಿಯಾಗಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಸಿದ್ದೇಶ್ ಮಾತನಾಡಿ, ಘಟನೆ ನಡೆದ ಮರುದಿನವೇ ಹಲ್ಲೆಗೊಳಗಾದವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದು ಪೋಲೀಸ್ ಇಲಾಖೆಗೂ ಮಾಹಿತಿ ನೀಡಿ ಒತ್ತಾಯಿಸಿದ್ದು ನಮ್ಮ ಇಲಾಖೆಯಿಂದ ಇಪ್ಪತ್ತು ಸಾವಿರ ರೂಪಾಯಿ ನೆರವನ್ನು ನೀಡಲಾಗುವುದು ಎಂದರು.

ಈ ಸಂಧರ್ಭದಲ್ಲಿ ಹೋರಾಟಗಾರರಾದ ಕೊರಳೂರು ಶ್ರೀನಿವಾಸ್, ಚಿನ್ನಸ್ವಾಮಿ, ಆಲಗೊಂಡನಹಳ್ಳಿ ಮುನಿಸ್ವಾಮಿ ಅಶ್ವಥ್, ಬಿಸನಹಳ್ಳಿ ಮೂರ್ತಿ ರಮೇಶ್, ಚಂದ್ರು ನಾರಾಯಣಸ್ವಾಮಿ ಸುಬ್ಬು ಸೇರಿದಂತೆ ಇತರರು ಇದ್ದರು.






Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ