Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಓಲಾ ಎಲೆಕ್ಟ್ರಿಿಕ್ ಕಂಪನಿ ಸಿಇಒಗೆ ಪೊಲೀಸರು ಕಿರುಕುಳ ನೀಡಬಾರದು: ಹೈಕೋರ್ಟ್

ಸುದ್ದಿಮೂಲ ವಾರ್ತೆ ಬೆಂಗಳೂರು, ಅ.21:
ಉದ್ಯೋೋಗಿಯೊಬ್ಬರ ಆತ್ಮಹತ್ಯೆೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಓಲಾ ಎಲೆಕ್ಟ್ರಿಿಕ್ ಕಂಪನಿಯ ಮಾಲೀಕ ಭವೀಶ್ ಅಗರ್‌ವಾಲ್ ಸೇರಿ ಮೂವರ ವಿರುದ್ಧ ದಾಖಲಾಗಿರುವ ಎ್ಐಆರ್ ಸಂಬಂಧ ಅವರಿಗೆ ಕಿರುಕುಳ ನೀಡಬಾರದು ಎಂದು ಸುಬ್ರಹ್ಮಣ್ಯಪುರ ಪೊಲೀಸರಿಗೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.
ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎ್ಐಆರ್ ರದ್ದುಪಡಿಸುವಂತೆ ಕೋರಿ ಭಾವಿಶ್ ಅಗರ್‌ವಾಲ್, ಸುಬ್ರತ್ ಕುಮಾರ್ ದಾಸ್ ಮತ್ತು ಓಲಾ ಎಲೆಕ್ಟ್ರಿಿಕ್ ಟೆಕ್ನಾಾಲಜೀಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಾಯಮೂರ್ತಿ ಮೊಹಮ್ಮದ್ ನವಾಜ್ ಅವರ ಏಕಸದಸ್ಯ ಪೀಠ ನಡೆಸಿತು.
ತನಿಖೆಯ ನೆಪದಲ್ಲಿ ಪೊಲೀಸರು ಅರ್ಜಿದಾರರಿಗೆ ಕಿರುಕುಳ ನೀಡಬಾರದು. ಸರ್ಕಾರದ ವಕೀಲರು ತಕ್ಷಣ ಈ ಆದೇಶವನ್ನು ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯ ಪೊಲೀಸರಿಗೆ ತಿಳಿಸಬೇಕು ಎಂದು ಆದೇಶಿಸಿರುವ ನ್ಯಾಾಯಾಲಯ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆ ಮುಂದೂಡಿದೆ.
ಪ್ರಕರಣದ ಹಿನ್ನೆೆಲೆ: ಅರವಿಂದ್ ಸಹೋದರ ಅಶ್ವಿಿನ್ ಕಣ್ಣನ್ ಅವರು ದಾಖಲಿಸಿರುವ ದೂರಿನಲ್ಲಿ, ಓಲಾ ಎಲೆಕ್ಟ್ರಿಿಕ್ ಕಂಪನಿಯ ಹೋಮೋ ಲೋಗೇಷನ್ ಎಂಜಿನಿಯರ್ ಆಗಿದ್ದ ಸಹೋದರ ಕೆ ಅರವಿಂದ್ ಅವರು 2025ರ ಸೆಪ್ಟೆೆಂಬರ್ 28 ರಂದು ಆತ್ಮಹತ್ಯೆೆ ಮಾಡಿಕೊಂಡಿದ್ದರು. ಆದರೆ, ಸೆಪ್ಟೆೆಂಬರ್ 30ರಂದು ಕಂಪನಿಯು 17,46,313 ರೂಪಾಯಿಯನ್ನು ಅರವಿಂದ್ ಅವರ ಖಾತೆಗೆ ನ್ಟ್‌ೆ ಮಾಡಿದೆ. ಈ ಕುರಿತು ಅಕ್ಟೋೋಬರ್ 1ರಂದು ಕಂಪನಿಯ ಹೋಮೋಲೋಗೇಷನ್ ವಿಭಾಗದ ಮುಖ್ಯಸ್ಥ ಸುಬ್ರತ್ ಕುಮಾರ್ ದಾಸ್ ಅವರನ್ನು ವಿಚಾರಿಸಲಾಗಿ, ಇದಕ್ಕೆೆ ಕಂಪನಿಯ ಮಾನವ ಸಂಪನ್ಮೂಲದವರು ಪ್ರತಿಕ್ರಿಿಯಿಸಿದ್ದರು. ಆನಂತರ ಕಂಪನಿಯ ಪ್ರತಿನಿಧಿಗಳಾದ ಕೃತೇಶ್ ದೇಸಾಯಿ, ಪರಮೇಶ್ ಮತ್ತು ರೋಷನ್ ಅವರು ಹಣಕಾಸಿನ ಬಗ್ಗೆೆ ಅಸ್ಪಷ್ಟವಾಗಿ ಮಾಹಿತಿ ನೀಡಿದ್ದು, ಕಂಪನಿಯ ತಪ್ಪುುಗಳನ್ನು ಮರೆಮಾಚುವ ಪ್ರಯತ್ನದಂತೆ ಕಂಡು ಬಂದಿರುವುದು ಅನುಮಾನಾಸ್ಪದವಾಗಿದೆ ಎಂದಿದ್ದಾರೆ.
ಡೆತ್ ನೋಟ್‌ನಲ್ಲಿ ಅರವಿಂದ್ ಅವರು ಸುಬ್ರತ್ ದಾಸ್ ಮತ್ತು ಭಾವಿಶ್ ಅಗರ್‌ವಾಲ್ ಕೆಲಸದಲ್ಲಿ ಒತ್ತಡ ಹೇರಿದ್ದು, ತನಗೆ ನೀಡಬೇಕಾದ ವೇತನ ಮತ್ತು ಭತ್ಯೆೆ ನೀಡದೇ ಕಿರುಕುಳ ನೀಡಿದ್ದಾರೆ. ಇದರಿಂದ ಬೇಸತ್ತು ಆತ್ಮಹತ್ಯೆೆ ಮಾಡಿಕೊಳ್ಳುತ್ತಿಿರುವುದಾಗಿ ಹೇಳಿದ್ದಾರೆ. ಹೀಗಾಗಿ, ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅಕ್ಟೋೋಬರ್ 6ರಂದು ಅರವಿಂದ್ ಸಹೋದರ ಅಶ್ವಿಿನ್ ಕಣ್ಣನ್ ದೂರಿನಲ್ಲಿ ವಿವರಿಸಿದ್ದಾರೆ.
ಇದರ ಅನ್ವಯ ಸುಬ್ರತ್ ಕುಮಾರ್ ದಾಸ್, ಭಾವಿಶ್ ಅಗರ್‌ವಾಲ್ ಮತ್ತು ಓಲಾ ಎಲೆಕ್ಟ್ರಿಿಕ್ ವಿರುದ್ಧ ಬಿಎನ್ಎಸ್ ಸೆಕ್ಷನ್ 108 ಜೊತೆಗೆ 3(5)ರ ಅಡಿ ಪ್ರಕರಣ ದಾಖಲಿಸಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ