Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿಗಳಿಗೆ ಕಳಪೆ ಮೊಬೈಲ್ ಪ್ರತಿಭಟನೆ

ಸುದ್ದಿಮೂಲವಾರ್ತೆ

ಕೊಪ್ಪಳ ಜು 10: ಸರಕಾರದ ವಿವಿಧ ಯೋಜನೆ ಹಾಗು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕೆಲಸದೊಂದಿಗೆ ವಿವಿಧ ಕೆಲಸ ಮಾಡುವ ಅಂಗನವಾಡಿ ಕಾರ್ಯಕರ್ತೆಯರಿಗೆ ಇಲಾಖೆಯಲ್ಲಿ ಡಾಟಾ ಎಂಟ್ರಿಗೆ ನೀಡಿರುವ ಮೊಬೈಲ್ ತೀರಾ ಕಳಪೆ ನೀಡಲಾಗಿದೆ. ಈ ಮೊಬೈಲ್ ಗಳು ನಮಗೆ ಬೇಡ ಎಂದು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ಸರಕಾರವು ಇತ್ತೀಚಿಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮಕ್ಕಳು. ಮಹಿಳೆಯರ ಆರೋಗ್ಯ ಸೇರಿದಂತೆ ಅಂಗನವಾಡಿಗಳಲ್ಲಿ ನಡೆಯುವ ಕಾರ್ಯ ಚಟುವಟಿಕೆಗಳನ್ನು ದಾಖಲಿಸಲು ಮೊಬೈಲ್ ನೀಡಿದ್ದಾರೆ. ಈ ಮೊಬೈಲ್ ಗಳು ಸರಿ ಇಲ್ಲ ನಮಗೆ ಬೇಡ ಎಂದು ಪ್ರತಿಭಟಿಸಿದರು.

ಇಂದು ಕೊಪ್ಪಳ ತಾಲೂಕಾ ಅಂಗನವಾಡಿ ಕಾರ್ಯಕರ್ತೆಯರು ಸಿಡಿಪಿಒ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿಸದರು. ಕಾರ್ಯಕರ್ತೆಯರಿಗೆ ಕಳಪೆ ಮೊಬೈಲ್ ನೀಡಲಾಗಿದೆ.

ಮೊಬೈಲ್ ನಲ್ಲಿ ಇಲಾಖೆಗೆ ಸಂಬಂಧಿಸಿದ ಡಾಟಾ ಎಂಟ್ರಿಗೆ ಅವಕಾಶ ಮಾತ್ರ ನೀಡಲಾಗಿದೆ. ಆದರೆ ಅಂಗನವಾಡಿ ಕಾರ್ಯಕರ್ತೆಯರನ್ನು ಇಲಾಖೇತರ ಕೆಲಸಕ್ಕೆ ನಿಯೋಜನೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತರು ಎರೆಡೆರಡು ಮೊಬೈಲ್ ಇಟ್ಟುಕೊಳ್ಳುವಂತಾಗಿದೆ.ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ನೀಡಿದ ಮೊಬೈಲ್ ಸರಿಯಾಗಿ ಆಪರೇಟ್ ಆಗೋದಿಲ್ಲ. ಇನ್ನೂ

ಗ್ರಾಮೀಣ ಪ್ರದೇಶದಲ್ಲಿ ನೆಟ್ ವರ್ಕ ಸಮಸ್ಯೆ ಇದೆ ಇದರಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಕಿರಿಕಿರಿಯಾಗುತ್ತದೆ. ಈ ಕಾರಣಕ್ಕಾಗಿ ನಮಗೆ ಈ ಮೊಬೈಲ್ ಬೇಡ ಎಂದು ವಾಪಸ್ಸು ನೀಡಿದರು.

ಇದೇ ವೇಳೆ ಹಿಂದಿನ ಸರಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಸಾವಿರ ರೂಪಾಯಿ ಗೌರವಧನ ಹೆಚ್ಚಿಸಲು ನಿರ್ಧರಿಸಿದ್ದರು.ಈಗ ನಮ್ಮ ಸರಕಾರವಿಲ್ಲ ಎಂದು ಸಾಬೂಬು ಹೇಳುತ್ತಿದ್ದಾರೆ. ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿ ಗೌರವ ಧನ ನೀಡಬೇಕು.ಬಾಡಿಗೆಯಲ್ಲಿರುವ ಅಂಗನವಾಡಿಗಳಿಗೆ 8 ತಿಂಗಳಿನಿಂದ ಬಾಡಿಗೆ ನೀಡಿಲ್ಲ ಬಾಡಿಗೆಯನ್ನು ಅಂಗನವಾಡಿ ಕಾರ್ಯಕರ್ತೆಯರೇ ಕಟ್ಟುತ್ತಿದ್ದಾರೆ. ಆಹಾರ ಪದಾರ್ಥ ಸಹ ಕಳಪೆ‌ ನೀಡಲಾಗುತ್ತಿದೆ. ಇದರಿಂದ ಅಂಗನವಾಡಿ ಕಾರ್ಯಕರ್ತೆಯರು ಸ್ಥಳೀಯರೊಂದಿಗೆ ವಾಗ್ವಾದ ಮಾಡುವಂತಾಗಿದೆ. ಗುಣಮಟ್ಟದ ಆಹಾರ ಪದಾರ್ಥಗಳನ್ನು ನೀಡಬೇಕು.ಅಂಗನವಾಡಿ ಕಾರ್ಯಕರ್ತೆಯರ ಮೇಲೆ ದೌರ್ಜನ್ಯ ತಡೆಯಲು ಆಗ್ರಹಿಸಿ ಮನವಿ ಸಲ್ಲಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ