Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆ.ಚನ್ನಸಂದ್ರದಲ್ಲಿ ಕಳಪೆ ಕಾಮಗಾರಿ ಸಾರ್ವಜನಿಕರ ಆಕ್ರೋಶ

ಸುದ್ದಿಮೂಲ ವಾರ್ತೆ

ಕೆ.ಆರ್.ಪುರ,ನ.04: ಬಿಬಿಎಂಪಿ ಹೊರಮಾವು ಉಪವಿಭಾಗದ ವ್ಯಾಪ್ತಿಯ ಕೆ.ಚನ್ನಸಂದ್ರದಲ್ಲಿ ರಸ್ತೆ ಗುಂಡಿಗಳಿಗೆ ಹಾಕಿದ ಡಾಂಬರ್ ಕೆಲವೇ ಗಂಟೆಗಳಲ್ಲಿ ಕಿತ್ತು ಬರುತ್ತಿರುವುದನ್ನು ಕಂಡು ಕಳಪೆ ಕಾಮಗಾರಿ ನಡೆಸುತ್ತಿರುವ ಬಿಬಿಎಂಪಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಕೆ.ಆರ್.ಪುರ ಕ್ಷೇತ್ರದ ರಾಮಮೂರ್ತಿನಗರ ವಾರ್ಡಿನ ಕೆ.ಚನ್ನಸಂದ್ರದ‌ ಎಲ್.ಎಲ್.ಎಸ್.ಗುರುಕುಲ ಶಾಲೆ ಸಮೀಪದ ಮುಖ್ಯರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿ ಬಿದ್ದಿರುವ ರಸ್ತೆ ಗುಂಡಿಗಳಿಗೆ ಡಾಂಬರ್ ಹಾಕಲಾಗುತ್ತಿದೆ. ಬಿಬಿಎಂಪಿ ಹಾಕಿರುವ ಡಾಂಬರನ್ನು ಸಾರ್ವಜನಿಕರು ಪರಿಶೀಲಿಸಿದಾಗ ದೊಸೆಯಂತೆ ಕಿತ್ತು ಬಂದಿದೆ. ಕೆಲವೇ ಗಂಟೆಗಳಲ್ಲಿ ಕಿತ್ತು ಬರುತ್ತಿರುವುದನ್ನು ಕಂಡು ಕೂಡಲೇ ಕಳಪೆ ಗುಣಮಟ್ಟದ ಕಾಮಗಾರಿ ನಿಲ್ಲಿಸುವಂತೆ ಆಗ್ರಹಿಸಿದರು.

ಶನಿವಾರ ಬೆಳಿಗ್ಗೆ 8.30 ರ ಸಮಯದಲ್ಲಿ ಬಿಬಿಎಂಪಿ ಡಾಂಬರು ಹಾಕುವ ಕೆಲಸಕ್ಕೆ ಮುಂದಾಗಿತ್ತು. ಸಾರ್ವಜನಿಕರೊಂದಿಗೆ ತೆರಳಿ ಹಾಕಿರುವ ಡಾಂಬರು ಪರಿಶೀಲಿಸಿದಾಗ ಡಾಂಬರು ಹಾಕಿ ಅರ್ಧ ಗಂಟೆಯೊಳಗೆ ಪೇಪರ್ ನಂತೆ ಕಿತ್ತು ಬಂದಿದೆ. ಬಿಬಿಎಂಪಿ ತೋರಿಕೆಗಾಗಿ ಡಾಂಬರು ಕಳಪೆ ಕಾಮಗಾರಿ ನಡೆಸುತ್ತಿದೆ. ಕಳಪೆ ಕಾಮಗಾರಿ ನಡೆಯುತ್ತಿದ್ದರೂ ಪಾಲಿಕೆ ಅಧಿಕಾರಿಗಳು ಸ್ಥಳದಲ್ಲಿದ್ದರೂ ಜಾಣಕುರುಡತನ ಪ್ರದರ್ಶಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದರು.

ರಾಮಮೂರ್ತಿನಗರ ವಾರ್ಡ್ ವ್ಯಾಪ್ತಿಗೆ ಬರುವ ಕೆ.ಚನ್ನಸಂದ್ರದಲ್ಲಿ ರಾಂಪುರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಾಗಿರುವ ಇಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಈ ರಸ್ತೆಯ ಮೂಲಕ ತೆರಳುತ್ತವೆ. ರಸ್ತೆ ಗುಂಡಿಗಳು ಬಿದ್ದಿರುವ ಕುರಿತು ಬಿಬಿಎಂಪಿ ಗಮನಕ್ಕೆ ತರಲಾಗಿತ್ತು. ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿತ್ತು. ಬಿಬಿಎಂಪಿ ರಸ್ತೆ ಗುಂಡಿ ಮುಚ್ಚುವ ಅವಸರದಲ್ಲಿ ಕಳಪೆ ಕಾಮಗಾರಿ ನಡೆಸಿದೆ ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನ ಹರಿಸಬೇಕಾಗಿದೆ ಎಂದು ಸ್ಥಳೀಯ ದಿಲೀಪ್ದೂರಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ