Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಿಎಸ್‌ಐ ಪರೀಕ್ಷೆ ಮುಂದೂಡಿಕೆ

ಬೆಂಗಳೂರು, ಸೆ.12:  ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪಿಎಸ್ಐ ಹುದ್ದೆಗಳಿಗೆ  ಸೆ.22ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.

ರಾಜ್ಯದ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ. ಮುಖ್ಯ ಪರೀಕ್ಷೆಗೆ  ಮತ್ತು ಪಿಎಸ್‌ಐ ಪರೀಕ್ಷೆ ಸೆ.22ರಂದು ನಿಗದಿಯಾಗಿರುವುದರಿಂದ ಎರಡು ಪರೀಕ್ಷೆ ಬರೆಯಲು ಆಗುವುದಿಲ್ಲ. ಯಾವುದಾದರು ಒಂದು ಪರೀಕ್ಷೆ ಅವಕಾಶ ಕೈತಪ್ಪುತ್ತದೆ. ಹೀಗಾಗಿ ಪಿಎಸ್ಐ ಪರೀಕ್ಷೆ ಮುಂದೂಡುವಂತೆ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲ ಪರೀಕ್ಷೆ ಮುಂದೂಡಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಸೆ.22ರಂದು ನಿಗದಿಯಾಗಿರುವ ಪರೀಕ್ಷೆಯನ್ನು ಮುಂದೂಡಿ ಸೆ.28ರಂದು ಪರೀಕ್ಷೆ ನಡೆಸುವುದಾಗಿ ಹೇಳಲಾಗಿತ್ತು. ಆದರೆ ಆ ದಿನವೂ ಯುಪಿಎಸ್‌ಸಿ ಪರೀಕ್ಷೆ ಇರುವ ಕಾರಣ ಮತ್ತೊಂದು ದಿನಾಂಕದಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಒಂದೆರಡು ದಿನಗಳಲ್ಲಿ ಸೂಕ್ತವಾದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಪೊಲೀಸ್ ಪೇದೆ ನೇಮಕಾತಿಗೆ ವಯೋಮಿತಿ ಹೆಚ್ಚಳದ ಕುರಿತು ಬೇರೆ ರಾಜ್ಯಗಳಿಂದ ಮಾಹಿತಿ ಕಲೆ ಹಾಕಿದ್ದೇವೆ. ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಿ, ವರದಿಯನ್ನು ಗಮನಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ