Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಭಾವಂತ ಮಕ್ಕಳನ್ನು ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಸಹಕಾರಿ : ಸಮೀಉಲ್ಲಾ 

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ,ಸೆ. 13: ಪ್ರತಿಯೊಬ್ಬರಲ್ಲೂ ಪ್ರತಿಭೆ ಅಡಗಿರುತ್ತದೆ. ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಸಮಾಜ ಮತ್ತು ಸಂಘ ಸಂಸ್ಥೆಗಳು ಮಾಡಬೇಕು ಎಂದು ಸಮಾಜಸೇವಕ ಸಮೀಉಲ್ಲಾ ಕರೆ ನೀಡಿದರು.

ತಾಲೂಕಿನ ಈ.ತಿಮ್ಮಸಂದ್ರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸಾದಲಿ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಸಹಕಾರಿ. ಇಂತಹ ಕಾರ್ಯಕ್ರಮಗಳನ್ನು ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಾಡಬೇಕು. ಆಗ ಮಕ್ಕಳಲ್ಲಿರುವ ಪ್ರತಿಭೆ ಹೊರಬರುತ್ತದೆ ಎಂದರು.

ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ 7 ಪ್ರೌಢಶಾಲೆಗಳು ಮತ್ತು 5 ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರೌಢಶಾಲೆ ಈ ತಿಮ್ಮಸಂದ್ರ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಪಿ.ಚೌಡರೆಡ್ಡಿ, ಗ್ರಾಪಂ ಅಧ್ಯಕ್ಷೆ ನಾಗಮಣಿ ಬೈರಾರೆಡ್ಡಿ, ಗ್ರಾಪಂ ಉಪಾಧ್ಯಕ್ಷ ಕೃಷ್ಣಪ್ಪ, ಬೈರಾರೆಡ್ಡಿ, ಚಲಪತಿ, ಮೌಲಾಸಾಭಿ, ಬೋರ್‍ವೆಲ್ ಮಂಜುನಾಥ್, ಪಾರ್ವತಿ ಮತ್ತಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ