Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸಹಕಾರಿ  

ಸುದ್ದಿಮೂಲ ವಾರ್ತೆ

ಹೊಸಕೋಟೆ,ಸೆ.22: ಪ್ರತಿಯೊಂದು ವಿದ್ಯಾರ್ಥಿಯಲ್ಲೂ ಒಂದು ಅಗಾಧವಾದ ಪ್ರತಿಭೆ ಅಡಗಿರುತ್ತದೆ. ಅದನ್ನು ಹೊರ ತೆಗೆಯುವ ಕೆಲಸ ಶಿಕ್ಷಕರಿಂದ ಮಾತ್ರ ಸಾಧ್ಯ. ಅಂತಹ ಪ್ರತಿಭೆಗೆ ವೇದಿಕೆ ನಿರ್ಮಾಣವಾದಾಗ ಪ್ರತಿಭೆ ಆನಾವರಣವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ ಹೇಳಿದರು.

ಹೊಸಕೋಟೆ ತಾಲೂಕಿನ ದೊಡ್ಡಹರಳಗೆರೆ ಶಾಲೆಯಲ್ಲಿ ಟಿ.ಅಗ್ರಹಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಪ್ರತಿಭೆಗಳು ಕ್ಲಾಸ್ ರೂಮ್ ನಲ್ಲಿ ಅನಾವರಣಗೊಳ್ಳುವುದಿಲ್ಲ. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸಮಾನ ಅವಕಾಶ ಕಲ್ಪಿಸಿಕೊಡಬೇಕು. ವಿದ್ಯಾರ್ಥಿ ಜೀವನದಲ್ಲಿ ನಾನಾ ರೀತಿಯ ಕಲೆ ಅಡಗಿರುತ್ತದೆ. ಅದನ್ನು ಸೂಕ್ತ ರೀತಿಯಲ್ಲಿ ಗುರುತಿಸಿ ಪ್ರೋತ್ಸಾಹಿಸಿ ವೇದಿಕೆ ನಿರ್ಮಾಣ ಮಾಡಿಕೊಡಬೇಕಾದ ಕರ್ತವ್ಯ ಪೋಷಕರು ಮತ್ತು ಶಿಕ್ಷಕರದ್ದಾಗಿರುತ್ತದೆ ಎಂದರು.

ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಟ್ರಾಕ್ ಸೂಟ್, ಶಾಸಕರಿಂದ ಶಿಕ್ಷಕರಿಗೆ ಬ್ಯಾಗ್ ವಿತರಣೆ, ಸರ್ಕಾರದ ವತಿಯಿಂದ ಸರಬರಾಜಾಗಿರುವ ಶೂ ವಿತರಣೆ ಮಾಡಲಾಯಿತು.

ಪ್ರತಿಭಾ ಕಾರಂಜಿ ವಿಜೇತ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಣೆ ಮಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಂ.ಶ್ರೀನಿವಾಸಪ್ಪ, ಬಡ್ತಿ ಮುಖ್ಯ ಶಿಕ್ಷಕರ ಸಂಘದ ತಾ.ಅಧ್ಯಕ್ಷ ಬಿ.ಶ್ರೀನಿವಾಸ್, ಡಾ.ಡಿ.ಟಿ.ವೆಂಕಟೇಶ್, ಗ್ರಾ.ಪಂ.ಅಧ್ಯಕ್ಷೆ ನರಸಮ್ಮ, ಶಿಕ್ಷಕರ ಸಂಘದ ನಿರ್ದೇಶಕರುಗಳಾದ ಸುಬ್ಬರಾಯಪ್ಪ, ಗಂಗಾಧರ್, ಟಿ.ಸೋಣ್ಣಪ್ಪ, ಲಲಿತಮ್ಮ, ನಿರ್ಮಲ, ಆಶ್ವತ್ಥಮ್ಮ, ಮುನಿಶಾಮಯ್ಯ, ಗಣಗಲೂ ನಾಗರಾಜ್, ಕ್ಲಸ್ಟರ್ ಸಂಪನ್ಮೂಲವ್ಯಕ್ತಿ ಸುಮಂಗಲ, ಬೆಂಡಿಗಾನಹಳ್ಳಿ ಶಾಲೆ ಮುಖ್ಯಶಿಕ್ಷಕ ಮಂಜುನಾಥ್ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ