Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜು. 22 ರಂದು 350 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಜು 17 : ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ತಾಲ್ಲೂಕಿನ 350 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜು. 22ರಂದು ಹಮ್ಮಿಕೊಳ್ಳಲಾಗಿದೆ ಎಂದು ಅರುಂಧತಿ ಸೇವಾ ಸಂಸ್ಥೆಯ ಅಧ್ಯಕ್ಷ ನರಸಿಂಹಮೂರ್ತಿ ತಿಳಿಸಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ ಇತರೇ ಗಣ್ಯರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ತಾಲ್ಲೂಕಿನಲ್ಲಿ ಬಡ, ಮಧ್ಯಮವರ್ಗದ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಕಾರ ನೀಡುವುದರೊಂದಿಗೆ, ಉನ್ನತ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಳೆದ 11 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಗುತ್ತಿದೆ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದ ಮಕ್ಕಳ ಏಳಿಗೆಗೆ ಅವರ ಪೋಷಕರು ಸಾಕಷ್ಟು ತ್ಯಾಗ ಮಾಡಿರುತ್ತಾರೆ. ಮಕ್ಕಳಿಗೆ ಅಭಿನಂದಿಸುವ ಮೂಲಕ ಅವರ ಸಾಧನೆಗೆ ನಮಿಸುವ ಕೆಲಸ ಇದಾಗಿದ್ದು, ದಾನಿಗಳ ಸಹಕಾರದಿಂದ ಕಾರ್ಯಕ್ರಮ ನಡೆದುಕೊಂಡು ಬಂದಿದೆ

ಎಸ್ಸೆಸ್ಸೆಲ್ಸಿಯ 260 ವಿದ್ಯಾರ್ಥಿಗಳು, ಪಿಯುಸಿಯ 90 ವಿದ್ಯಾರ್ಥಿಗಳಿಗೆ ಈ ಬಾರಿ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು, ಈವರೆಗೂ 4 ಸಾವಿರ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹ ಮಾಡುವ ಕೆಲಸ ಮಾಡಲಾಗಿದೆ ಜುಲೈ 22ರ ಬೆಳಿಗ್ಗೆ ವಿದ್ಯಾರ್ಥಿಗಳಿಗೆ ಸ್ಥಳೀಯ ಕಲೆ, ಸಂಸ್ಕೃತಿಗಳ ಪರಿಚಯ ಮಾಡಿಸುವ ಸಲುವಾಗಿ ಸಾಕಷ್ಟು ಜಾನಪದ ಕಲಾ ಪ್ರಕಾರಗಳ ಪ್ರದರ್ಶನ ಏರ್ಪಡಿಸಿದ್ದು, ಅದರಲ್ಲಿ ಆಸಕ್ತಿ ಮೂಡಿಸುವ ಪ್ರಯತ್ನವನ್ನು ಮಾಡಲಾಗುತ್ತದೆ' ಎಂದರು.

ಇದೇ ವೇಳೆ ಉಪಾಧ್ಯಕ್ಷರಾದ ಜಾಲಿಗೆ ಮುನಿರಾಜು, ಖಜಾಂಜಿಯಾದ ಮಂಜುನಾಥ್, ಮಾಜಿ ಅಧ್ಯಕ್ಷರಾದ ಡಿ.ಆರ್.ವೇಣುಗೋಪಾಲ್, ಸಹ ಕಾರ್ಯದರ್ಶಿ ಎಂ.ಹರ್ಷನಾಥ್, ನಿರ್ದೇಶಕಾರದ ಅಣ್ಣೇಶ್ವರ ಮುನಿರಾಜು, ವೆಂಕಟಪ್ಪ, ಶ್ರೀನಿವಾಸ್, ಅನಿಲ್, ಸಿ.ಮುನಿಕೃಷ್ಣಪ್ಪ ಇದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ