Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನಾ ಸಂಘಟನೆಗಳ ಮುಖಂಡರು, ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ

ಸುದ್ದಿಮೂಲ ವಾರ್ತೆ

ಮೈಸೂರು.ಅ. 26:ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ನವೆಂಬರ್ 1ರಂದು ನಗರದ ಓವೆಲ್ ಮೈದಾನದಲ್ಲಿ ಅದ್ದೂರಿಯಾಗಿ ಜರುಗಲಿದ್ದು, ಅಧಿಕಾರಿಗಳು, ಕನ್ನಡ ಚಳುನಳಿಗಾರರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಕೈ ಜೋಡಿಸಬೇಕೆಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ತಿಳಿಸಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಶಾಲಾ, ಕಾಲೇಜುಗಳ ಮಕ್ಕಳ ಭಾಗವಹಿಸುವಿಕೆಗೆ ಹೆಚ್ಚು ಪ್ರೋತ್ಸಾಹ ನೀಡಿ ಏಕೆಂದರೆ ಮುಂದಿನ ದಿನಗಳಲ್ಲಿ ಕನ್ನಡವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಮುಂದಿನ ಪೀಳಿಗೆಗೆ ಇದೆ ಎಂದರು.

ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ನವೆಂಬರ್ 1 ರಂದು ಬೆಳಿಗ್ಗೆ 8.30ಕ್ಕೆ ಅರಮನೆ ಆವರಣದಲ್ಲಿರುವ ಶ್ರೀ ಭುವನೇಶ್ವರಿ ದೇವಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಪೂಜೆ ಸಲ್ಲಿಸಿ, ನಂತರ ನಗರದ ಓವೆಲ್ ಗ್ರೌಂಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಇದೇ ಸಂದರ್ಭದಲ್ಲಿ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಕಲಾತಂಡಗಳು ಹಾಗೂ ಸ್ತಬ್ಧ ಚಿತ್ರಗಳು ಮೆರವಣಿಗೆ ಹೊರಟು ಕೆ.ಆರ್ ಸರ್ಕಲ್ ವೃತ್ತದಿಂದ ದೇವರಾಜ ಅರಸು ರಸ್ತೆ ಮಾರ್ಗವಾಗಿ ಹಳೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಸಾಗಿ ಓವೆಲ್ ಮೈದಾನ ತಲುಪುವುದು ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕನ್ನಡ ನಾಡಿನ ಹಿರಿಮೆ ಸಾರುವ ಹಾಡು, ಗೀತೆಗಳು, ಸ್ತಬ್ದ ಚಿತ್ರಗಳು, ಕಲಾತಂಡಗಳು ನಾಡಿನ ಸಾಂಸ್ಕೃತಿಕ ವೈಭವವನ್ನು ಅನಾವರರಣಗೊಳಿಸಬೇಕು. ಶಿಸ್ತುಬದ್ಧ ಪೆರೇಡ್ ನಡೆಯಲಿ ಜಿಲ್ಲಾಮಟ್ಟದಲ್ಲಿ ಸಾಧನೆ ಮಾಡಿದ ಗೌರವಾನ್ವಿತರಿಗೆ ಸನ್ಮಾನ ಕಾರ್ಯಕ್ರಮ ಕಳೆದ ಶೈಕ್ಷಣಿಕ ಸಾಲಿನಲ್ಲಿ ಶೇ. ನೂರರಷ್ಟು ಫಲಿತಾಂಶ ಪಡೆದ ಆಯ್ದ ಗ್ರಾಮೀಣ ಸರ್ಕಾರಿ ಶಾಲೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಸಂಜೆ 6 ಗಂಟೆಗೆ ನಗರದ ಕಲಾಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಕನ್ನಡ ರಾಜ್ಯೋತ್ಸವ ಆಚರಣೆಗೆ ಎಲ್ಲಾ ಸರ್ಕಾರಿ ನೌಕರರು ಕಡ್ಡಾಯವಾಗಿ ಹಾಜರಾಗಬೇಕು ಎಂದು ತಿಳಿಸಿದರು.

ಕನ್ನಡಪರ ಹೋರಾಟಗಾರರಾದ ಅರವಿಂದ್ ಶರ್ಮ ಮಾತನಾಡಿ, ನಗರದ ಪ್ರೇಕ್ಷಣೀಯ ಸ್ಥಳಗಳಲ್ಲಿ ಫಲಕಗಳು ಆಂಗ್ಲ ಭಾಷೆಯಿಂದ ಕೂಡಿದ್ದು, ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ಈಗಾಗಲೇ ಕನ್ನಡದಲ್ಲಿರುವ ಫಲಕಗಳು ನಶಿಸುತ್ತಿದ್ದಲ್ಲಿ ಅವುಗಳನ್ನು ಪುನಶ್ಚೇತನಗೊಳಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಮೊದಲಿಗೆ ಜನಸಂದಣಿ ಇರುವ ಮೈಸೂರಿನ 10 ಜಾಗಗಳಲ್ಲಿ ಕನ್ನಡದ ಸೂಚನಾ, ನಾಮಫಲಕಗಳನ್ನು ಕಡ್ಡಾಯವಾಗಿ ಹಾಕಿಸುವಂತೆ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತಾರಾದ ಆಶಾದ್ ಉರ್ ರೆಹಮಾನ್ ಶರೀಫ್ ಅವರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ ಶಿವರಾಜು, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಆಶಾದ್ ಉರ್ ರೆಹಮಾನ್ ಶರೀಫ್,ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್ ಕುಮಾರ್, ರಂಗಾಯಣದ ಜಂಟಿ ನಿರ್ದೇಶಕ ನಿರ್ಮಲ ಮಠಪತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್ ಮಲ್ಲಿಕಾರ್ಜುನ ಸ್ವಾಮಿ, ಸಹಾಯಕ ನಿರ್ದೇಶಕ ಡಾ. ಎಂ ಡಿ ಸುದರ್ಶನ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೆ. ಗೋವಿಂದರಾಜು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಿಂದ ಕನ್ನಡ ಪರ ಹೋರಾಟಗಾರರು ಭಾಗವಹಿಸಿದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ