Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಮಕೂರು: ಮೇ 20,21ರ ಸಿಇಟಿ ಪರೀಕ್ಷೆಗೆ ಸಿದ್ಧತೆ

ಸುದ್ದಿಮೂಲ ವಾರ್ತೆ

ತುಮಕೂರು, ಮೇ 16: ಜಿಲ್ಲೆಯಲ್ಲಿ 2023ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಫಾರ್ಮಸಿ, ಬಿ.ಎಸ್‌ಸಿ(ನರ್ಸಿಂಗ್) ಸೇರಿದಂತೆ ಮತ್ತಿತರ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಮೇ 20 ಮತ್ತು 21ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದ್ದು, ಯಾವುದೇ ಲೋಪಬಾರದಂತೆ ಪರೀಕ್ಷೆಯನ್ನು ಉತ್ತಮ ಹಾಗೂ ಸಮರ್ಥವಾಗಿ ನಿರ್ವಹಣೆ ಮಾಡಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿಂದು ಜಿಲ್ಲೆಯ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು ಸಿಇಟಿ ಪರೀಕ್ಷೆಯನ್ನು ಪಾರದರ್ಶಕವಾಗಿ

ನಡೆಸುವ ನಿಟ್ಟಿನಲ್ಲಿ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಅಧಿಕಾರಿಯನ್ನು ವೀಕ್ಷಕರನ್ನಾಗಿ ನೇಮಿಸಬೇಕು. ಸಿಇಟಿ ಪರೀಕ್ಷೆ ಬರೆಯುವ ಮಕ್ಕಳ ಪೋಷಕರು/ಹತ್ತಿರದ ಸಂಬAಧಿಕರನ್ನು ವೀಕ್ಷಕರನ್ನಾಗಿ ನೇಮಕ

ಮಾಡಬಾರದು ಹಾಗೂ ವಿಜ್ಞಾನ ವಿಷಯದ ಉಪನ್ಯಾಸಕರನ್ನು ಪರೀಕ್ಷಾ ಕೇಂದ್ರಗಳಿಗೆ ಪರಿವೀಕ್ಷಕರನ್ನಾಗಿ ನೇಮಿಸಬಾರದೆಂದು ಅವರು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಿ.ಬಸವಲಿಂಗಪ್ಪ ಮಾತನಾಡಿ, ಜಿಲ್ಲೆಯ ತುಮಕೂರು ನಗರದ 14 ಪರೀಕ್ಷಾ ಕೇಂದ್ರದಲ್ಲಿ 6264 ವಿದ್ಯಾರ್ಥಿಗಳು; ತಿಪಟೂರಿನ 2 ಕೇಂದ್ರದಲ್ಲಿ 1608 ವಿದ್ಯಾರ್ಥಿಗಳು; ಶಿರಾ ತಾಲ್ಲೂಕಿನ 2 ಕೇಂದ್ರದಲ್ಲಿ 1124 ಹಾಗೂ ಕುಣಿಗಲ್ ತಾಲ್ಲೂಕಿನ 1 ಪರೀಕ್ಷಾ ಕೇಂದ್ರದಲ್ಲಿ 437 ಸೇರಿದಂತೆ ಒಟ್ಟು 19 ಪರೀಕ್ಷಾ ಕೇಂದ್ರದಲ್ಲಿ 9433 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ವಿವರಿಸಿದರು.

ನಿಷೇಧಾಜ್ಞೆ ಜಾರಿ

ಪರೀಕ್ಷಾ ಕೇಂದ್ರಗಳ ಬಳಿ ಅಹಿತಕರ ಘಟನೆ, ನಕಲು ಪ್ರೇರಣಾ ಚಟುವಟಿಕೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೈ.ಎಸ್.ಪಾಟೀಲ ಅವರು ಆದೇಶಿಸಿದ್ದಾರೆ.

ಪ್ರಶ್ನೆಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಎಂದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು. ನಿಷೇಧಾಜ್ಞೆಯು ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ. ನಿಷೇಧಾಜ್ಞೆಯನ್ನು ಉಲ್ಲಂಘಿಸಿ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವ ಅನಧಿಕೃತ

ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ