Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕರ್ನಾಟಕ ಸುವರ್ಣ ಮಹೋತ್ಸವ ವರ್ಷಪೂರ್ತಿ ಆಚರಣೆಗೆ ಸಿದ್ಧತೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.9: 'ಕರ್ನಾಟಕ' ಎಂಬ ಹೆಸರು ನಾಮಕರಣ ಮಾಡಿ 50 ವರ್ಷ ಸಂದಿರುವ ಹಿನ್ನೆಲೆಯಲ್ಲಿ ಈ ನವೆಂಬರ್‌ನಿಂದ ಒಂದು ವರ್ಷಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಿದೆ.

ಬೆಂಗಳೂರು ವಿಭಾಗದ ಸಾಹಿತಿ, ಕಲಾವಿದರೊಂದಿಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಪ್ರಾಥಮಿಕ ಚರ್ಚೆ ನಡೆಯಿತು. ಒಂದು ವರ್ಷಗಳ ಕಾಲ ಆಯೋಜಿಸಬೇಕಾದ ಕಾರ್ಯಕ್ರಮ, ರೂಪುರೇಷೆಗಳ ಬಗ್ಗೆ ಸಲಹೆ ಸೂಚನೆಗಳನ್ನು ಪಡೆಯಲಾಯಿತು.

ಬಳಿಕ ನಡೆಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ವರ್ಷವೀಡಿ ರಾಜ್ಯಾದ್ಯಂತ ಕರ್ನಾಟಕದ ಸಾಂಸ್ಕೃತಿಕ ಹಾಗೂ ಪರಂಪರೆ ಬಿಂಬಿಸುವ ಕಾರ್ಯಕ್ರಮ ರೂಪಿಸುವ ಹಿನ್ನೆಲೆಯಲ್ಲಿ ಸಾಹಿತಿಗಳ ಜೊತೆ ಸಭೆ ನಡೆಸಿದ್ದು, ಹಲವು ಉತ್ತಮ ಸಲಹೆಗಳು ಬಂದಿವೆ ಎಂದು ಹೇಳಿದರು.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ನ.1ಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷವಾಕ್ಯದಡಿ ಕಾರ್ಯಕ್ರಮ ನಡೆಸುವ ಬಗ್ಗೆ ಆಯವ್ಯಯದಲ್ಲಿ ಈಗಾಗಲೇ ಘೋಷಣೆ ಮಾಡಲಾಗಿದೆ. ರಾಜ್ಯದ ನಾಲ್ಕು ಕಂದಾಯ ವಿಭಾಗವಾರು ಸಾಹಿತಿಗಳ ಸಭೆ ಆಯೋಜನೆ ಮಾಡಲಾಗುವುದು. ಮೊದಲ ಹಂತದಲ್ಲಿ ಬೆಂಗಳೂರು ವಿಭಾಗದಲ್ಲಿ ಸಾಹಿತಿಗಳ ಸಭೆ ನಡೆಸಲಾಗಿದೆ. ಆ.22ಕ್ಕೆ ಬೆಳಗಾವಿ, ಆ.25 ಮೈಸೂರು ಹಾಗೂ 28ರಂದು ಕಲಬುರಗಿಯಲ್ಲಿ ಸಾಹಿತಿ, ರಂಗಕರ್ಮಿ ಹಾಗೂ ಹಿರಿಯ ಕಲಾವಿದರ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಕರ್ನಾಟಕದ ಪರಂಪರೆ, ಕನ್ನಡದ ಇತಿಹಾಸ ಹಾಗೂ ಸಂಸ್ಕೃತಿ ಬಿಂಬಿಸುವ ಹಿನ್ನೆಲೆಯಲ್ಲಿ ಕನ್ನಡರಥ ರಾಜ್ಯವಿಡೀ ಸಂಚಾರ ಮಾಡುವುದು, ಶಾಲಾ ಮತ್ತು ಕಾಲೇಜುಗಳಲ್ಲಿ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಆಯೋಜನೆ, ರಾಜ್ಯದ ಸಿದ್ಧಪುರದಲ್ಲಿರುವ ಏಕೈಕ ಭುವನೇಶ್ವರಿ ದೇವಾಲಯವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವುದು, ಕನ್ನಡದ ಮಾಹಿತಿಯನ್ನೊಳಗೊಂಡ ಸಂಚಾರಿ ವಾಹನ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಭಾಗಿಯಾಗಿದ್ದ ಗಣ್ಯರ ಸನ್ಮಾನ ಸೇರಿದಂತೆ ಹೀಗೆ ಹಲವು ಸಲಹೆಗಳು ಬಂದಿವೆ ಎಂದು ವಿವರಿಸಿದರು.

ಸಾಹಿತಿಗಳಾದ ಪ್ರೊ.ಎಸ್.ಸಿದ್ದರಾಮಯ್ಯ, ಮುಖ್ಯಮಂತ್ರಿ ಚಂದ್ರು, ಮನು ಬಳಿಗಾರ್, ಹಂಸಲೇಖ, ಮಾಜಿ ಸಚಿವರಾದ ಉಮಾಶ್ರೀ, ಜಯಮಾಲಾ ಸೇರಿದಂತೆ ಪ್ರತಿಯೊಬ್ಬರು ಸಲಹೆ ನೀಡಿದ್ದಾರೆ.

ಇನ್ನು ಉಳಿದ ಮೂರು ವಿಭಾಗಗಳಲ್ಲಿ ಸಭೆ ನಡೆಸಿ, ಎಲ್ಲರ ಸಲಹೆ ಕ್ರೋಢೀಕರಣ ಮಾಡಿದ ಬಳಿಕ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಮಾಹಿತಿ ನೀಡಿದರು. ಇದೇ ವೇಳೆ ಇಂತಹ ಒಂದು ಕಾರ್ಯಕ್ರಮ ಆಯೋಜನೆಗೆ ಸಭೆ ಕರೆದ ಸಚಿವ ತಂಗಡಗಿ ಅವರ ನಡೆಗೆ ಸಾಹಿತಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಸಾಹಿಗಳಾದ ಚಂದ್ರಶೇಖರ್ ಕಂಬಾರ, ಪ್ರೊ.ಎಸ್. ಸಿದ್ದರಾಮಯ್ಯ, ಬಿ.ಟಿ.ಲಲಿತಾನಾಯಕ್, ಮನುಬಳಿಗಾರ್, ನರಹಳ್ಳಿ ಬಾಲಕೃಷ್ಣ, ಮುಖ್ಯಮಂತ್ರಿ ಚಂದ್ರು, ಮಾಜಿ ಸಚಿವರಾದ ಉಮಾಶ್ರೀ, ಜಯಮಾಲಾ, ಚಿತ್ರ ನಿರ್ದೇಶಕರಾದ ರಾಜೇಂದ್ರ ಸಿಂಗ್ ಬಾಬು, ಟಿ.ಎನ್.ಸೀತಾರಾಮ್, ಕಸಪಾ ಅಧ್ಯಕ್ಷ ಮಹೇಶ್ ಜೋಶಿ, ರಂಗಕರ್ಮಿಗಳಾದ ಕಪ್ಪಣ್ಣ, ನಾಗರಾಜ್ ಮೂರ್ತಿ, ಪ್ರೊ.ಕೆ.ಇ.ರಾಧಾಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ವಿಶ್ವನಾಥ್ ಹಿರೇಮಠ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ